ಹೆದ್ದಾರಿಯಲ್ಲಿ ಅಪಘಾತಕ್ಕೆ ಮಹಿಳಾ ಕಾರ್ಮಿಕರು ಸಾವು  
ದೇಶ

ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ನಿಂತಿದ್ದ ಟೆಂಪೊಗೆ ಟ್ರಕ್ ಡಿಕ್ಕಿ ಹೊಡೆದು 8 ಮಹಿಳಾ ಕಾರ್ಮಿಕರು ಸಾವು

ಒಟ್ಟು 11 ಜನರು, ಚಾಲಕರನ್ನು ಒಳಗೊಂಡಂತೆ, ಟೆಂಪೊದಲ್ಲಿ ಕುಳಿತಿದ್ದರು. ವಾಹನ ಹೊರಡಲು ಸಿದ್ಧವಾಗುತ್ತಿದ್ದಾಗ, ಮುಂಬೈ ಕಡೆಗೆ ತೆರಳುತ್ತಿದ್ದ ಟ್ರಕ್ ವೇಗವಾಗಿ ಬಂದು ಕಡುವಾಂಚಿ ಗ್ರಾಮದ ಬಳಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಜಾಲ್ನಾ: ನಿನ್ನೆ ಬುಧವಾರ ಸಂಜೆ ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ನಾಗ್ಪುರ–ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ವೇಗವಾಗಿ ಬಂದ ಟ್ರಕ್ ಟೆಂಪೊಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಮಹಿಳೆಯರ ಒಂದು ಗುಂಪು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ವಚ್ಛತಾ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಸಂಭವಿಸಿದೆ.

ಒಟ್ಟು 11 ಜನರು, ಚಾಲಕರನ್ನು ಒಳಗೊಂಡಂತೆ, ಟೆಂಪೊದಲ್ಲಿ ಕುಳಿತಿದ್ದರು. ವಾಹನ ಹೊರಡಲು ಸಿದ್ಧವಾಗುತ್ತಿದ್ದಾಗ, ಮುಂಬೈ ಕಡೆಗೆ ತೆರಳುತ್ತಿದ್ದ ಟ್ರಕ್ ವೇಗವಾಗಿ ಬಂದು ಕಡುವಾಂಚಿ ಗ್ರಾಮದ ಬಳಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಸ್ಥಳದಲ್ಲೇ ಏಳು ಮಹಿಳೆಯರು ಮೃತಪಟ್ಟಿದ್ದು, ಇನ್ನೊಬ್ಬರು ಜಾಲ್ನಾ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಟೆಂಪೊ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳು ರಸ್ತೆಯ ಮೇಲೆ ಚದುರಿದ ಸ್ಥಿತಿಯಲ್ಲಿ ಕಂಡುಬಂದಿವೆ ಎಂದು ತಿಳಿದುಬಂದಿದೆ.

ಮೃತ ಮಹಿಳೆಯರನ್ನು ಅಲ್ಕಾಬಾಯಿ ಅಡ್ಮಾನೆ (45), ಲಕ್ಷ್ಮೀಬಾಯಿ ಮದನ್ (35), ಮೀನಾ ಅಡ್ಮಾನೆ (45), ಕಾಂಚನ್ ಅಡ್ಮಾನೆ (50), ತಾರಾಬಾಯಿ ಚೌಧರಿ (60), ಕಡೂಬಾಯಿ ಮದನ್ (55) ಮತ್ತು ಸುಮನ್ ಅಡ್ಮಾನೆ (70) ಎಂದು ಗುರುತಿಸಲಾಗಿದೆ. ಇವರೆಲ್ಲಾ ಜಾಲ್ನಾ ತಾಲ್ಲೂಕಿನ ನಿವಾಸಿಗಳು. ತ್ತೊಬ್ಬ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಗಾಯಗೊಂಡ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸರು ಟ್ರಕ್ ಚಾಲಕನನ್ನು ಬಂಧಿಸಿ, ಭಾರತೀಯ ನ್ಯಾಯ ಸಂಹಿತೆ (BNS) ಸಂಬಂಧಿತ ಕಲಂಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ಮುಂದುವರಿದಿದೆ.

ಮಹಾರಾಷ್ಟ್ರದ ಪರಿಸರ ಸಚಿವರು ಮತ್ತು ಜಾಲ್ನಾ ಜಿಲ್ಲಾ ಉಸ್ತುವಾರಿ ಸಚಿವರಾದ ಪಂಕಜಾ ಮುಂಡೆ ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಸರ್ಕಾರದಿಂದ ಮೃತರ ಕುಟುಂಬಗಳಿಗೆ ಹಾಗೂ ಗಾಯಾಳುಗಳಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್