ಅಣ್ಣಾಮಲೈ 
ದೇಶ

ತಮಿಳುನಾಡು ವಿಧಾನಸಭೆ ಚುನಾವಣೆ: BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಾಜಿ IPS ಅಧಿಕಾರಿ ಅಣ್ಣಾಮಲೈಗೆ ಕೊಕ್!

ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರಿಗೆ ಪಕ್ಷ ಟಿಕೆಟ್ ನೀಡದೆ, ಅವರಿಗೆ ಶಾಕ್ ನೀಡಿದೆ.

ಚೆನ್ನೈ: ಏಪ್ರಿಲ್‌ನಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ನವದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಿಂದ ಬಿಡುಗಡೆಯಾದ ಈ ಪಟ್ಟಿಯಲ್ಲಿ ಹಲವಾರು ಪ್ರಮುಖ ನಾಯಕರುಗಳ ಹೆಸರಿದೆ. ರಾಜ್ಯದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವ ಉದ್ದೇಶದಿಂದ ಬಿಜೆಪಿ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.

ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರಿಗೆ ಪಕ್ಷ ಟಿಕೆಟ್ ನೀಡದೆ, ಅವರಿಗೆ ಶಾಕ್ ನೀಡಿದೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿಯಿಂದ ಹಾಲಿ ಶಾಸಕಿ ವನತಿ ಶ್ರೀನಿವಾಸನ್ ಪ್ರತಿನಿಧಿಸುವ ಕೊಯಮತ್ತೂರು (ಉತ್ತರ) ಕ್ಷೇತ್ರವನ್ನು ಬಯಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಬಿಜೆಪಿ ಇಂದು ಪ್ರಕಟಿಸಿದ ಅಂತಿಮ ಅಭ್ಯರ್ಥಿ ಪಟ್ಟಿಯಲ್ಲಿ ಅವರ ಹೆಸರು ಇರಲಿಲ್ಲ.

ಕೇಂದ್ರ ಸಚಿವ ಎಲ್. ಮುರುಗನ್ ಅವರನ್ನು ಅವಿನಾಶಿ (ಎಸ್‌ಸಿ) ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ, ಆದರೆ ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಮೈಲಾಪುರ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ.

ತಮಿಳುನಾಡಿನಲ್ಲಿ ರಾಜಕೀಯವಾಗಿ ತನ್ನ ವ್ಯಾಪ್ತಿ ವಿಸ್ತರಿಸಲು ನೋಡುತ್ತಿರುವ ಬಿಜೆಪಿ ಅನುಭವಿ ಮತ್ತು ಜನಪ್ರಿಯ ನಾಯಕರನ್ನು ನಿರ್ಣಾಯಕ ಕ್ಷೇತ್ರಗಳಲ್ಲಿ ನಿಯೋಜಿಸುವ ಮೂಲಕ ಕಾರ್ಯತಂತ್ರ ರೂಪಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹತ್ವದ ಆದೇಶ: ಅಗತ್ಯವಿದ್ದರೆ ಆಕ್ರಮಣಕಾರಿ ಬೀದಿ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ಅನುಮತಿ!

ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಬ್ರೇಕ್: ಮೇ 20 ರಿಂದ ಮುಷ್ಕರ ನಡೆಸದಂತೆ ನಿರ್ಬಂಧ

ಡೊನಾಲ್ಡ್ ಟ್ರಂಪ್, ನೆತನ್ಯಾಹು ಹತ್ಯೆಗೆ ಭಾರಿ ಸ್ಕೆಚ್: $58 ಮಿಲಿಯನ್ ಬಹುಮಾನ ನೀಡಲು ಇರಾನ್ ಪ್ಲಾನ್!

ತುಮಕೂರಿನಲ್ಲಿ ಸಾಧನಾ ಸಮಾವೇಶ: ಇತ್ತ ಸಾಹುಕಾರ್ ಮನೆಯಲ್ಲಿ ಸಿಎಂ ಆಪ್ತರ ಬ್ರೇಕ್ ಫಾಸ್ಟ್ ಮೀಟಿಂಗ್

ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟ: ಕಂಜನ್ ದಾಳಿಯಿಂದ ಗಾಯಗೊಂಡಿದ್ದ 'ಮಾರ್ತಾಂಡ' ಸಾವು!

SCROLL FOR NEXT