ಸಿಎಂ ನಿತೀಶ್ ಕುಮಾರ್ 
ದೇಶ

ಏಪ್ರಿಲ್ 10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಪಕ್ಷದ ಹಿರಿಯ ನಾಯಕರು ಹಾಗೂ ಜೆಡಿಯು ನಾಯಕರು ಒಟ್ಟಾಗಿ ಕುಳಿತು ಹೊಸ ಕ್ಯಾಬಿನೆಟ್ ಚರ್ಚೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಸರೋಗಿ ತಿಳಿಸಿದ್ದಾರೆ.

ಪಾಟ್ನಾ: ಹಾಲಿ ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಇದೇ 10 ರಂದು ಔಪಚಾರಿಕವಾಗಿ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಹಾರದ ಬಿಜೆಪಿ ನಾಯಕ ಸಂಜಯ್ ಸರೋಗಿ ಭಾನುವಾರ ಖಚಿತಪಡಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಪಕ್ಷದ ಹಿರಿಯ ನಾಯಕರು ಹಾಗೂ ಜೆಡಿಯು ನಾಯಕರು ಒಟ್ಟಾಗಿ ಕುಳಿತು ಹೊಸ ಕ್ಯಾಬಿನೆಟ್ ಚರ್ಚೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಸರೋಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿ, ಬಿಜೆಪಿ ನಾಯಕರು ಮತ್ತು ಎನ್‌ಡಿಎ ಪಾಲುದಾರರು ಒಟ್ಟಿಗೆ ಕುಳಿತು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದರು. ಬಿಹಾರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿರುವಂತೆಯೇ ಈ ಬೆಳವಣಿಗೆಯಾಗಿದೆ.

ರಾಜ್ಯದ ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಮತ್ತು ಜೆಡಿ-ಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಈ ಹಿಂದೆ ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಮಾರ್ಚ್ 5 ರಂದು ತಮ್ಮ ನಿರ್ಧಾರವನ್ನು ಅವರು ಪ್ರಕಟಿಸಿದ್ದರು.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರ ಉಪಮುಖ್ಯಮಂತ್ರಿ ವಿಜಯ್ ಸಿನ್ಹಾ, ಇದು ಅವರ ಸ್ವಂತ ನಿರ್ಧಾರ. ಮತ್ತೊಂದು ಹುದ್ದೆಗೆ ಪ್ರಮಾಣ ವಚನ ಸ್ವೀಕರಿಸಿದರೆ ಈಗ ಅವರು ಕಾರ್ಯನಿರ್ವಹಿಸುತ್ತಿರುವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದುದು ಸಾಂವಿಧಾನಿಕ ನಿಯಮ ಎಂದಿದ್ದಾರೆ.

ನಿತೀಶ್ ಕುಮಾರ್ ಅವರು ಬಿಹಾರವನ್ನು ಅಭಿವೃದ್ಧಿ ಹೊಂದಿದ ರಾಜ್ಯಗಳ ಪಟ್ಟಿಗೆ ಸೇರಿಸಿದ್ದಾರೆ ಮತ್ತು ಅವರು ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ (ಎಂಎಲ್‌ಸಿ) ರಾಜೀನಾಮೆ ನೀಡಿರುವುದು ರಾಜ್ಯಕ್ಕೆ ನಷ್ಟವಾಗಿದೆ ಎಂದು ಜೆಡಿಯು ಶಾಸಕ ದುಲಾಲ್ ಚಂದ್ರ ಗೋಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ