ಅರುಣಾಚಲ ಪ್ರದೇಶ ಸಿಎಂ ಪ್ರೇಮ ಖಂಡು  
ದೇಶ

ಅರುಣಾಚಲ ಸಿಎಂ ಪೆಮಾ ಖಂಡು ವಿರುದ್ಧ CBI ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ; ಏನಿದು ಪ್ರಕರಣ?

ಈ ಪ್ರಕರಣ ಬಗ್ಗೆ 16 ವಾರಗಳಲ್ಲಿ ತನ್ನ ಮುಂದೆ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಪೀಠ, ಸಿಬಿಐಗೆ ನಿರ್ದೇಶಿಸಿದೆ.

ನವದೆಹಲಿ: ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಅವರ ಕುಟುಂಬ ಸದಸ್ಯರ ಒಡೆತನದ ಸಂಸ್ಥೆಗಳಿಗೆ ಸಾರ್ವಜನಿಕ ಕಾಮಗಾರಿಗಳ ಗುತ್ತಿಗೆ ನೀಡಿರುವ ಬಗ್ಗೆ ಎರಡು ವಾರಗಳಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐಗೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಪೀಠವು, ಜನವರಿ 1, 2015 ರಿಂದ ಡಿಸೆಂಬರ್ 31, 2025 ರವರೆಗಿನ ಅವಧಿಯಲ್ಲಿ ರಾಜ್ಯದಲ್ಲಿ ಸಾರ್ವಜನಿಕ ಕಾಮಗಾರಿಗಳು, ಗುತ್ತಿಗೆಗಳು ಮತ್ತು ಕೆಲಸದ ಆದೇಶಗಳ ಬಗ್ಗೆ ಹಾಗೂ ಕಾರ್ಯಗತಗೊಳಿಸಿದ ಬಗ್ಗೆ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಿದೆ.

ಈ ಪ್ರಕರಣ ಬಗ್ಗೆ 16 ವಾರಗಳಲ್ಲಿ ತನ್ನ ಮುಂದೆ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಪೀಠ, ಸಿಬಿಐಗೆ ನಿರ್ದೇಶಿಸಿದೆ.

"ತೀರ್ಪಿನ ದಿನಾಂಕದಿಂದ ಎರಡು ವಾರಗಳಲ್ಲಿ ಸಿಬಿಐ PE(ಪ್ರಾಥಮಿಕ ವಿಚಾರಣೆ) ದಾಖಲಿಸಬೇಕು ಮತ್ತು ಕಾನೂನಿನ ಪ್ರಕಾರ ಅದು ಮುಂದುವರಿಯುತ್ತದೆ" ಎಂದು ನ್ಯಾಯಮೂರ್ತಿ ನಾಥ್ ಆದೇಶವನ್ನು ಪ್ರಕಟಿಸುತ್ತ ಹೇಳಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ಗುತ್ತಿಗೆಗಳನ್ನು ಸಿಎಂ ಖಂಡು ಮತ್ತು ಅವರ ಕುಟುಂಬ ಸದಸ್ಯರಿಗೆ ಕಾನೂನುಬಾಹಿರವಾಗಿ ನೀಡಲಾಗಿದೆ ಎಂದು ಆರೋಪಿಸಿ ಎನ್‌ಜಿಒಗಳು, ಸೇವ್ ಮಾನ್ ರೀಜನ್ ಫೆಡರೇಶನ್ ಮತ್ತು ವಾಲಂಟರಿ ಅರುಣಾಚಲ ಸೇನಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಫೆಬ್ರವರಿ 17 ರಂದು ಆದೇಶವನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ್ದು, ಸಿಬಿಐ ತನಿಖೆಗೆ ಆದೇಶಿಸಿದೆ.

ಈ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕಳೆದ 10 ವರ್ಷಗಳಲ್ಲಿ ಅರುಣಾಚಲ ಪ್ರದೇಶದಲ್ಲಿ ಖಂಡು ಅವರ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ನಾಲ್ಕು ಸಂಸ್ಥೆಗಳಿಗೆ ಸುಮಾರು 1,270 ಕೋಟಿ ರೂ. ಮೌಲ್ಯದ ಸರ್ಕಾರಿ ಗುತ್ತಿಗೆಗಳು ಮತ್ತು ಕೆಲಸದ ಆದೇಶಗಳನ್ನು ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel