ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ 
ದೇಶ

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವಲ್ಲೇ ಅಮೆರಿಕಾ ಪ್ರವಾಸ ಹೊರಟ ವಿಕ್ರಮ್ ಮಿಸ್ರಿ: ವ್ಯಾಪಾರ-ರಕ್ಷಣಾ ಸಹಕಾರ ಕುರಿತು ಚರ್ಚೆ

ಏಪ್ರಿಲ್ 8ರಿಂದ 10ರವರೆಗೆ ಅಮೆರಿಕಾಗೆ ಭೇಟಿ ನೀಡುತ್ತಿದ್ದು, ಈ ವೇಳೆ ಭಾರತ-ಅಮೆರಿಕಾ ದ್ವಿಪಕ್ಷೀಯ ಸಂಬಂಧಗಳ ಪರಿಶೀಲಿಸುವುದರ ಜೊತೆಗೆ, ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಇರಾನ್ ಸಂಘರ್ಷ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ, ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಅಮೆರಿಕಾಗೆ ಮೂರು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಏಪ್ರಿಲ್ 8ರಿಂದ 10ರವರೆಗೆ ಅಮೆರಿಕಾಗೆ ಭೇಟಿ ನೀಡುತ್ತಿದ್ದು, ಈ ವೇಳೆ ಭಾರತ-ಅಮೆರಿಕಾ ದ್ವಿಪಕ್ಷೀಯ ಸಂಬಂಧಗಳ ಪರಿಶೀಲಿಸುವುದರ ಜೊತೆಗೆ, ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಭೇಟಿ ವೇಳೆ ವ್ಯಾಪಾರ, ರಕ್ಷಣಾ ಸಹಕಾರ, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ಜೊತೆಗೆ, ಮಧ್ಯ ಏಷ್ಯಾದಲ್ಲಿನ ಪ್ರಸ್ತುತ ಉದ್ವಿಗ್ನ ಪರಿಸ್ಥಿತಿ, ವಿಶೇಷವಾಗಿ ಇರಾನ್ ಸಂಬಂಧಿತ ಸಂಘರ್ಷದ ಕುರಿತು ಸಮಗ್ರ ಚರ್ಚೆ ನಡೆಯಲಿದೆಎಂದು ಮಾಹಿತಿ ನೀಡಿದೆ.

ತೆರಿಗೆ ವಿಚಾರವಾಗಿ ಇತ್ತೀಚಿನ ದಿನಗಳಲ್ಲಿ ಭಾರತ-ಅಮೆರಿಕಾ ಸಂಬಂಧಗಳಲ್ಲಿ ಕೆಲ ಮಟ್ಟಿನ ಉದ್ವಿಗ್ನತೆ ಕಂಡುಬಂದಿತ್ತು. ವಿಶೇಷವಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮೇಲೆ ವಿಧಿಸಿದ ತೆರಿಗೆ ಮತ್ತು ಭಾರತ-ಪಾಕಿಸ್ತಾನ ಸೇನಾ ಸಂಘರ್ಷದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳು ಸಂಬಂಧಗಳನ್ನು ಹದಗೆಡಿಸಿತ್ತು. ಈ ಹಿನ್ನೆಲೆಯಲ್ಲಿ, ಉಭಯ ದೇಶಗಳು ಸಂಬಂಧಗಳನ್ನು ಸ್ಥಿರಗೊಳಿಸಲು ಮತ್ತು ಮುಂದಿನ ದಿಕ್ಕು ನಿರ್ಧರಿಸಲು ಪ್ರಯತ್ನಿಸುತ್ತಿವೆ.

ಈ ಭೇಟಿಯ ವೇಳೆ ಉಭಯ ರಾಷ್ಟ್ರಗಳು ಬಹುಕಾಲದಿಂದ ಚರ್ಚೆಯಲ್ಲಿರುವ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ (Bilateral Trade Deal) ಬಗ್ಗೆ ಮುಂದಿನ ಹೆಜ್ಜೆಗಳನ್ನು ಚರ್ಚಿಸುವ ಸಾಧ್ಯತೆ ಇದೆ. ಇದು ಉಭಯ ದೇಶಗಳ ಆರ್ಥಿಕ ಸಂಬಂಧಗಳಿಗೆ ಮಹತ್ವದ ತಿರುವು ನೀಡುವ ಸಾಧ್ಯತೆಗಳಿವೆ.

ವಿಕ್ರಮ್ ಮಿಸ್ರಿ ಅವರು ಅಮೆರಿಕಾ ಆಡಳಿತದ ಹಿರಿಯ ಅಧಿಕಾರಿಗಳೊಂದಿಗೆ ವಿವಿಧ ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಇದರಲ್ಲಿ ಭದ್ರತೆ, ಇಂಡೋ-ಪೆಸಿಫಿಕ್ ಪ್ರದೇಶದ ಸ್ಥಿತಿ, ಹಾಗೂ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಸೇರಿವೆ.ಈ ಭೇಟಿಯು ಈ ವರ್ಷದ ಫೆಬ್ರವರಿಯಲ್ಲಿ ವಿದೇಶಾಂಗ ಸಚಿವರ ಅಮೆರಿಕಾ ಭೇಟಿಯ ಮುಂದುವರಿದ ಭಾಗವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್