ಪ್ರಾತಿನಿಧಿಕ ಚಿತ್ರ 
ದೇಶ

ವಿಶಾಖಪಟ್ಟಣಂ: ಒಂದು ರನ್‌ಗಾಗಿ ಆಟಗಾರರ ನಡುವೆ ಜಗಳ; ಯುವಕನ ಕೊಲೆಯಲ್ಲಿ ಕ್ರಿಕೆಟ್ ಪಂದ್ಯ ಅಂತ್ಯ!

ಭಾನುವಾರ ನಡೆದ ಪಂದ್ಯದ ಸಮಯದಲ್ಲಿ ಒಂದು ರನ್‌ಗೆ ಸಂಬಂಧಿಸಿದಂತೆ ಆಟಗಾರರ ನಡುವೆ ವಾಗ್ವಾದ ನಡೆದಿದೆ. ಆದರೆ, ಪಂದ್ಯದ ಅಂಪೈರ್ ಚಿರಂಜೀವಿ ಮಧ್ಯಪ್ರವೇಶಿಸಿದಾಗ ಅದು ಆರಂಭದಲ್ಲಿ ಇತ್ಯರ್ಥವಾಯಿತು.

ವಿಶಾಖಪಟ್ಟಣಂ: ಇಲ್ಲಿನ ಖಾಸಗಿ ಜಮೀನೊಂದರ ಬಳಿ ಎರಡು ಸ್ಥಳೀಯ ತಂಡಗಳ ನಡುವಿನ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಒಂದು ರನ್‌ಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಯುವಕನೊಬ್ಬ ಕೊಲೆಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಭಾನುವಾರ ನಡೆದ ಪಂದ್ಯದ ಸಮಯದಲ್ಲಿ ಒಂದು ರನ್‌ಗೆ ಸಂಬಂಧಿಸಿದಂತೆ ಆಟಗಾರರ ನಡುವೆ ವಾಗ್ವಾದ ನಡೆದಿದೆ. ಆದರೆ, ಪಂದ್ಯದ ಅಂಪೈರ್ ಚಿರಂಜೀವಿ ಮಧ್ಯಪ್ರವೇಶಿಸಿದಾಗ ಅದು ಆರಂಭದಲ್ಲಿ ಇತ್ಯರ್ಥವಾಯಿತು.

ಆದರೆ ಸಂಜೆ, ಆರೋಪಿ ಕೆ. ಕಿಶೋರ್ (26) ಅಂಪೈರ್ ಸಹೋದರ ಅಜಿತ್ (23) ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಅದೇ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೊಂದು ವಾಗ್ವಾದ ನಡೆದ ನಂತರ ಅವರ ಎದೆಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಅಧಿಕಾರಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಅಜಿತ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಾದಿತ ರನ್ ಬಗ್ಗೆ ಖಾಸಗಿ ಛಾಯಾಗ್ರಾಹಕರಾಗಿರುವ ಆರೋಪಿ ಕಿಶೋರ್ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಆದರೆ, ಆ ದಿನದ ನಂತರ ಎರಡೂ ಕಡೆಯವರು ಮತ್ತೆ ಮುಖಾಮುಖಿಯಾದಾಗ, ವಾಗ್ವಾದ ವಿಕೋಪಕ್ಕೆ ತಿರುಗಿ ಮಾರಣಾಂತಿಕ ಹಲ್ಲೆಗೆ ಕಾರಣವಾಯಿತು ಎಂದು ಅಧಿಕಾರಿ ಹೇಳಿದರು.

ಈಮಧ್ಯೆ, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!