ಪೊಲೀಸ್ ಠಾಣೆಗೆ ಬೆಂಕಿ 
ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮಕ್ಕಳ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ CRPF ಫೈರಿಂಗ್; ಇಬ್ಬರು ಸಾವು; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ; Video

ಮಣಿಪುರ ಸರ್ಕಾರ ಐದು ಕಣಿವೆ ಜಿಲ್ಲೆಗಳಲ್ಲಿ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿ ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಮೂರು ದಿನಗಳ ಕಾಲ ಸ್ಥಗಿತಗೊಳಿಸಿದೆ.

ಇಂಫಾಲ್: ಮಣಿಪುರ ಸರ್ಕಾರ ಐದು ಕಣಿವೆ ಜಿಲ್ಲೆಗಳಲ್ಲಿ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿ ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಮೂರು ದಿನಗಳ ಕಾಲ ಸ್ಥಗಿತಗೊಳಿಸಿದೆ. ಗೃಹ ಆಯುಕ್ತ ಎನ್. ಅಶೋಕ್ ಕುಮಾರ್, ಮಂಗಳವಾರದಿಂದ ಐದು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ನಿಷೇಧಿಸುವ ಆದೇಶಕ್ಕೆ ಸಹಿ ಹಾಕಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಮಣಿಪುರದ ಐದು ಜಿಲ್ಲೆಗಳಾದ ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್, ಕಾಕ್ಚಿಂಗ್ ಮತ್ತು ಬಿಷ್ಣುಪುರಗಳಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ತಪ್ಪು ಮಾಹಿತಿ ಮತ್ತು ವದಂತಿಗಳನ್ನು ತಡೆಗಟ್ಟಲು... ಈ ಐದು ಜಿಲ್ಲೆಗಳಲ್ಲಿ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿ ಮತ್ತು ವಿಪಿಎನ್ ಸೇವೆಗಳು ಸೇರಿದಂತೆ ಇಂಟರ್ನೆಟ್ ಸೇವೆಗಳು ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ.

ನಿನ್ನೆ ರಾತ್ರಿ ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮಕ್ಕಳ ತಾಯಿ ಗಾಯಗೊಂಡಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಸ್ಥಳೀಯರು ಇಂದು ಬೆಳಿಗ್ಗೆ ಪ್ರತಿಭಟನೆ ನಡೆಸಿ, ಪ್ರದೇಶದ ಪೆಟ್ರೋಲ್ ಪಂಪ್ ಬಳಿ ಎರಡು ತೈಲ ಟ್ಯಾಂಕರ್‌ಗಳು ಮತ್ತು ಒಂದು ಟ್ರಕ್‌ಗೆ ಬೆಂಕಿ ಹಚ್ಚಿದರು. ಮೊಯಿರಾಂಗ್ ಪೊಲೀಸ್ ಠಾಣೆಯ ಮುಂದೆ ಟೈರ್‌ಗಳನ್ನು ಸುಟ್ಟು ಪ್ರತಿಭಟಿಸಿದ್ದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರದೇಶದಲ್ಲಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದು ಫೈರಿಂಗ್ ನಲ್ಲಿ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೊಯಿರಾಂಗ್ ಟ್ರೋಂಗ್ಲಾಬಿ ಪ್ರದೇಶದ ಮನೆಯೊಂದರ ಮೇಲೆ ಶಂಕಿತ ಉಗ್ರಗಾಮಿಗಳು ಬಾಂಬ್ ಎಸೆದಿದ್ದರು. ದಾಳಿಯಲ್ಲಿ ಐದು ವರ್ಷದ ಬಾಲಕ ಮತ್ತು ಆರು ತಿಂಗಳ ಮಗು ಮೃತಪಟ್ಟಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಖ್ಯಮಂತ್ರಿ ವೈ. ಖೇಮ್‌ಚಂದ್ ಸಿಂಗ್ ಈ ದಾಳಿಯನ್ನು ಅನಾಗರಿಕ ಕೃತ್ಯ ಎಂದು ಹೇಳಿದ್ದಾರೆ. ದಾಳಿಗೆ ಕಾರಣರಾದವರನ್ನು ಗುರುತಿಸಿ ಕಾನೂನಿನಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜನರಿಗೆ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

ಸಕ್ರಿಯ ರಾಜಕೀಯಕ್ಕೆ ಬರುವ ಬಯಕೆ ಬಿಚ್ಚಿಟ್ಟ ಸೈನಾ ನೆಹ್ವಾಲ್; BJPಯಿಂದ ಚುನಾವಣಾ ಅಖಾಡಕ್ಕೆ ಎಂಟ್ರಿ?

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ