ರಾಜನಾಥ್ ಸಿಂಗ್ 
ದೇಶ

1971ರಲ್ಲಿ ಪಾಕಿಸ್ತಾನ ತುಂಡು ತುಂಡಾಗಿದ್ದು ಮರೆತಂತಿದೆ: ಪಾಕ್ ಸಚಿವ ಖವಾಜಾ ಆಸಿಫ್‌ಗೆ ರಾಜನಾಥ್ ಸಿಂಗ್ ತಿರುಗೇಟು

ಭಯೋತ್ಪಾದನೆ ಪೋಷಿತ ಪಾಕಿಸ್ತಾನ ಆಪರೇಷನ್ ಸಿಂಧೂರ್‌ನಲ್ಲಿ ಹಿನ್ನಡೆ ಅನುಭವಿಸಿದರೂ, ಅವರು ಸುಮ್ಮನಿರುವಂತೆ ಕಾಣುತ್ತಿಲ್ಲ. ಭಾರತೀಯ ಮಿಲಿಟರಿ ಕ್ರಮಕ್ಕೆ ಹೆದರಿ, ಪಾಕಿಸ್ತಾನದ ಸಚಿವರು ನಿರಂತರವಾಗಿ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಕೋಲ್ಕತ್ತಾ: ಭಯೋತ್ಪಾದನೆ ಪೋಷಿತ ಪಾಕಿಸ್ತಾನ ಆಪರೇಷನ್ ಸಿಂಧೂರ್‌ನಲ್ಲಿ ಹಿನ್ನಡೆ ಅನುಭವಿಸಿದರೂ, ಅವರು ಸುಮ್ಮನಿರುವಂತೆ ಕಾಣುತ್ತಿಲ್ಲ. ಭಾರತೀಯ ಮಿಲಿಟರಿ ಕ್ರಮಕ್ಕೆ ಹೆದರಿ, ಪಾಕಿಸ್ತಾನದ ಸಚಿವರು ನಿರಂತರವಾಗಿ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇತ್ತೀಚೆಗೆ ನೆರೆಯ ದೇಶದ ರಕ್ಷಣಾ ಸಚಿವ ಖವಾಜಾ ಆಸಿಫ್ ಕೂಡ ಇದೇ ರೀತಿಯ ಹೇಳಿಕೆ ನೀಡಿದ್ದು ಇದಕ್ಕೆ ಭಾರತೀಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿರುಗೇಟು ನೀಡಿದ್ದಾರೆ.

ಬಂಗಾಳದ ಮೇಲೆ ಕೆಟ್ಟ ಕಣ್ಣು ಹಾಕಲು ಪ್ರಯತ್ನಿಸಿದರೆ, ಈ ಬಾರಿ ಪಾಕಿಸ್ತಾನ ಎಷ್ಟು ಭಾಗಗಳಾಗಿ ತುಂಡಾಗುತ್ತದೆ ಎಂದು ಊಹಿಸಲು ಅಸಾಧ್ಯ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಕೋಲ್ಕತ್ತಾ ಮೇಲೆ ದಾಳಿ ಮಾಡುವುದಾಗಿ ನಿರ್ಲಜ್ಜವಾಗಿ ಬೆದರಿಕೆ ಹಾಕಿದ ನಂತರ ರಾಜನಾಥ್ ಸಿಂಗ್ ಅವರ ಈ ಪ್ರತಿಕ್ರಿಯೆ ಬಂದಿದೆ. ನೆರೆಯ ದೇಶ ನಮ್ಮ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರೆ, ತಮ್ಮ ದೇಶ ಭಾರತದ ಪೂರ್ವ ಮಹಾನಗರ ಕೋಲ್ಕತ್ತಾದ ಮೇಲೆ ದಾಳಿ ಮಾಡುತ್ತದೆ ಎಂದು ಖವಾಜಾ ಆಸಿಫ್ ಹೇಳಿದ್ದರು.

ಈ ಬಾರಿ ಪಾಕಿಸ್ತಾನ ಬಂಗಾಳದ ಮೇಲೆ ದಾಳಿ ಮಾಡಲು ಧೈರ್ಯ ಮಾಡಿದರೆ, ಪಾಕಿಸ್ತಾನ ಎಷ್ಟು ತುಂಡುಗಳಾಗುತ್ತದೆ ಎಂಬುದು ದೇವರಿಗೆ ಮಾತ್ರ ತಿಳಿದಿದೆ ಎಂದು ಭಾರತೀಯ ರಕ್ಷಣಾ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ. ಬಂಗಾಳದ ಬ್ಯಾರಕ್‌ಪೋರ್‌ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ರಾಜನಾಥ್ ಸಿಂಗ್, 55 ವರ್ಷಗಳ ಹಿಂದೆ ನಡೆದ ಘಟನೆಯನ್ನು ನೆನಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್