ಮಣಿಪುರ online desk
ದೇಶ

ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು; ಸಿಎಂ ತೀವ್ರ ಖಂಡನೆ; Video

ಮೋಯಿರಾಂಗ್ ಟ್ರೊಂಗ್ಲಾವೊಬಿ ಪ್ರದೇಶದ ಮನೆಯೊಂದರ ಮೇಲೆ ಶಂಕಿತ ಉಗ್ರರು ಮಧ್ಯರಾತ್ರಿ 1 ಗಂಟೆಗೆ ಬಾಂಬ್ ಎಸೆದಿದ್ದಾರೆ.

ಇಂಫಾಲ: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಮೋಯಿರಾಂಗ್ ಟ್ರೊಂಗ್ಲಾವೊಬಿ ಪ್ರದೇಶದ ಮನೆಯೊಂದರ ಮೇಲೆ ಶಂಕಿತ ಉಗ್ರರು ಮಧ್ಯರಾತ್ರಿ 1 ಗಂಟೆಗೆ ಬಾಂಬ್ ಎಸೆದಿದ್ದಾರೆ. ಘಟನೆಯಲ್ಲಿ 5 ವರ್ಷದ ಬಾಲಕ, ಆರು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಘಟನೆಗೆ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ಇದು ಅನಾಗರಿಕ ಕೃತ್ಯ" ಮತ್ತು “ಮಾನವೀಯತೆಯ ಮೇಲಿನ ನೇರ ದಾಳಿ” ಎಂದು ಖಂಡಿಸಿದ್ದಾರೆ.

ಅಪರಾಧಿಗಳನ್ನು ಗುರುತಿಸಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಈ ದಾಳಿಯ ನಂತರ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೆಟ್ರೋಲ್ ಬಂಕ್ ಬಳಿಯಿದ್ದ ಒಂದು ಟ್ರಕ್‌, ಎರಡು ತೈಲ ಟ್ಯಾಂಕರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೆ, ಮೋಯಿರಾಂಗ್ ಪೊಲೀಸ್ ಠಾಣೆಯ ಮುಂದೆ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಪೊಲೀಸ್ ಚೌಕಿಯನ್ನು ಧ್ವಂಸಗೊಳಿಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳನ್ನು ದೊಡ್ಡ ಪ್ರಮಾಣದಲ್ಲಿ ನಿಯೋಜಿಸಲಾಗಿದ್ದು, ಶಾಂತಿ ಕಾಪಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!