ಪತ್ರಕರ್ತೆ ರಾಣಾ ಅಯ್ಯೂಬ್ 
ದೇಶ

ಹಿಂದೂ ದೇವತೆ, ಸಾವರ್ಕರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಹಿಂದೂ ದೇವತೆಗಳು ಮತ್ತು ಸಾವರ್ಕರ್ ವಿರುದ್ಧದ ಪೋಸ್ಟ್ ಗಳು ಅವಹೇಳನಕಾರಿ ಮತ್ತು ಕೋಮು ಭಾವನೆ ಕೆರಳಿಸುವಂತಿವೆ ಎಂದು ಹೈಕೋರ್ಟ್ ಹೇಳಿದೆ.

ನವದೆಹಲಿ: ಪತ್ರಕರ್ತೆ ರಾಣಾ ಅಯ್ಯೂಬ್ ಅವರ ಕೆಲವು ಟ್ವೀಟ್‌ಗಳು "ಅವಮಾನಕರ, ಪ್ರಚೋದನಕಾರಿ ಮತ್ತು ಕೋಮುವಾದಿ" ಎಂದು ಬುಧವಾರ ಹೇಳಿರುವ ದೆಹಲಿ ಹೈಕೋರ್ಟ್, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ, ದೆಹಲಿ ಪೊಲೀಸರಿಗೆ ಮತ್ತು ಸಾಮಾಜಿಕ ಮಾಧ್ಯಮ ಎಕ್ಸ್ ಗೆ ಸೂಚಿಸಿದೆ.

ಸಾಮಾಜಿಕ ಮಾಧ್ಯಮದಿಂದ ರಾಣಾ ಅಯ್ಯೂಬ್ ಅವರ ಆಕ್ಷೇಪಾರ್ಹ ಪೋಸ್ಟ್ ಗಳನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಹಿಂದೂ ದೇವತೆಗಳು ಮತ್ತು ಸಾವರ್ಕರ್ ವಿರುದ್ಧದ ಪೋಸ್ಟ್ ಗಳು ಅವಹೇಳನಕಾರಿ ಮತ್ತು ಕೋಮು ಭಾವನೆ ಕೆರಳಿಸುವಂತಿವೆ ಎಂದು ಹೇಳಿದೆ.

ರಾಣಾ ಅಯ್ಯೂಬ್ ಅವರ ಟ್ವೀಟ್‌ಗಳು ಹಿಂದೂ ದೇವತೆಗಳು ಮತ್ತು "ಐತಿಹಾಸಿಕ ವ್ಯಕ್ತಿಗಳನ್ನು" ಅವಮಾನಿಸಿವೆ ಎಂದು ಆರೋಪಿಸಿ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್, ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಸಹ ನಿರ್ದೇಶಿಸಲಾಗಿದೆ ಎಂಬುದನ್ನು ಗಮನಿಸಿದರು ಮತ್ತು ಕೇಂದ್ರ ಸರ್ಕಾರ, ದೆಹಲಿ ಪೊಲೀಸರು ಮತ್ತು ಎಕ್ಸ್ ಗೆ "ಒಟ್ಟಿಗೆ ಕೆಲಸ ಮಾಡಿ" 24 ಗಂಟೆಗಳಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ" ಸೂಚಿಸಿದ್ದಾರೆ.

"ಈ ಸಂಬಂಧ ಕೇಂದ್ರ ಸರ್ಕಾರ, ರಾಣಾ ಅಯ್ಯೂಬ್ ಮತ್ತು ಎಕ್ಸ್‌ಗೆ ನೋಟಿಸ್ ನೀಡಿರುವ ನ್ಯಾಯಾಲಯವು, ಏಪ್ರಿಲ್ 10 ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್