ಸಾಂಕೇತಿಕ ಚಿತ್ರ 
ದೇಶ

ಮದುವೆಗೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ ಸೋಂಕಿತ, ಮನನೊಂದ ಯುವತಿ ಆತ್ಮಹತ್ಯೆ!

ಮಾರ್ಚ್ 11 ರಂದು ಈ ಘಟನೆ ನಡೆದಿದ್ದು, ಆರೋಪಿ ಮನೋಹರ್ ಎಂಬಾತ ಯುವತಿಗೆ ಎಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ್ದಾನೆ.

ಹೈದರಾಬಾದ್: ಕಳೆದ ತಿಂಗಳು ವಿವಾಹವಾಗಲು ನಿರಾಕರಿಸಿದ ಕಾರಣ ವ್ಯಕ್ತಿಯೊಬ್ಬ ತನ್ನ ಎಚ್‌ಐವಿ ಪಾಸಿಟಿವ್ ರಕ್ತವನ್ನೇ ಇಂಜೆಕ್ಟ್ ಮಾಡಿದ್ದರಿಂದ ಮನನೊಂದ 24 ವರ್ಷದ ಯುವತಿ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಾರ್ಚ್ 11 ರಂದು ಈ ಘಟನೆ ನಡೆದಿದ್ದು, ಆರೋಪಿ ಮನೋಹರ್ ಎಂಬಾತ ಯುವತಿಗೆ ಎಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ ಇಂಜೆಕ್ಟ್ ಮಾಡಿದ್ದಾನೆ.

ಪೊಲೀಸರ ಪ್ರಕಾರ, ಆರೋಪಿ ಮತ್ತು ಸಂತ್ರಸ್ತೆ ಸಂಬಂಧಿಕರಾಗಿದ್ದು, ಆಕೆಯ ಪೋಷಕರು ಆರಂಭದಲ್ಲಿ ತಮ್ಮ ಮಗಳ ಮದುವೆಯನ್ನು ಆತನೊಂದಿಗೆ ನಿಶ್ಚಯಿಸಿದ್ದರು.

ಆರೋಪಿಯ ಪೋಷಕರು ಈಗಾಗಲೇ ಎಚ್ಐವಿ ಪೀಡಿತರಾಗಿದ್ದರಿಂದ, ಯುವತಿಯ ಪೋಷಕರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆರೋಪಿಗೂ ವೈರಸ್ ಪರೀಕ್ಷೆ ಮಾಡಿಸಿದ್ದಾರೆ. ಆಗ ಆತನಿಗೂ ಸೋಂಕು ಇರುವುದು ದೃಢಪಟ್ಟಿತು. ಯುವತಿ ತಕ್ಷಣವೇ ಆತನೊಂದಿಗಿನ ಮದುವೆಯನ್ನು ರದ್ದುಗೊಳಿಸಿದ್ದಾಳೆ. ನಂತರ ಆರೋಪಿ ಆಕೆಗೆ ಇಂಜೆಕ್ಷನ್ ನೀಡಿದ್ದಾನೆ. ನಂತರ ಆತನನ್ನು ಬಂಧಿಸಲಾಯಿತು.

ಘಟನೆ ನಡೆದು ಸುಮಾರು ಒಂದು ತಿಂಗಳ ನಂತರ, ಶುಕ್ರವಾರ, ಯುವತಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಕುಟುಂಬ ಸದಸ್ಯರು ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರಾದರೂ, ಆ ವೇಳೆಗಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಯುವತಿ ತೀವ್ರ ಮಾನಸಿಕ ಒತ್ತಡದಲ್ಲಿದ್ದಳು. ಸಂತ್ರಸ್ತೆ ರಮಣಿ ಭಯ, ಸಾಮಾಜಿಕ ಕಳಂಕ ಮತ್ತು ಭಾವನಾತ್ಮಕ ಆಘಾತವನ್ನು ನಿಭಾಯಿಸಲು ಹೆಣಗಾಡುತ್ತಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

'ಎಚ್‌ಐವಿ ಸೋಂಕಿತ ರಕ್ತವನ್ನು ಇಂಜೆಕ್ಟ್ ಮಾಡಿದ ಪರಿಣಾಮದಿಂದಲೇ ಆಕೆ ಈ ನಿರ್ಧಾರ ಕೈಗೊಂಡಿರಬಹುದು. ಆದಾಗ್ಯೂ, ನಾವು ಎಲ್ಲ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ' ಎಂದು ಪೋಚಾರಂ ಐಟಿ ಕಾರಿಡಾರ್ ಪೊಲೀಸ್ ಇನ್ಸ್‌ಪೆಕ್ಟರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT