ವಂದೇಭಾರತ್ ರೈಲು  
ದೇಶ

ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು: ಇಲಾಖೆ ಗ್ರೀನ್ ಸಿಗ್ನಲ್

ವಂದೇ ಭಾರತ್ ಸ್ಲೀಪರ್ ರೈಲಿಗೆ ಸಂಸದ ಪಿ.ಸಿ.ಮೋಹನ್ ಬೇಡಿಕೆ ಇಟ್ಟಿದ್ದರು. ಸಂಸದರಿಗೆ ಪತ್ರ ಬರೆದು ಹೊಸ ಟ್ರೈನ್‌ಗೆ ಅನುಮತಿ ಸಿಕ್ಕ ಬಗ್ಗೆ ಅಶ್ವಿನಿ ವೈಷ್ಣವ್ ಮಾಹಿತಿ ಕೊಟ್ಟಿದ್ದಾರೆ.

ಬೆಂಗಳೂರು: ಬೆಂಗಳೂರು-ಮುಂಬೈ (KSR Bengaluru and Chhatrapati Shivaji Maharaj Terminus Mumbai) ವಂದೇ ಭಾರತ್‌ ಸ್ಲೀಪರ್‌ ರೈಲಿಗೆ (Vande Bharat Sleeper Train) ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಈ ಸಂಬಂಧ ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್‌ ಮಾಹಿತಿ ನೀಡಿದ್ದಾರೆ

ವಂದೇ ಭಾರತ್ ಸ್ಲೀಪರ್ ರೈಲಿಗೆ ಸಂಸದ ಪಿ.ಸಿ.ಮೋಹನ್ ಬೇಡಿಕೆ ಇಟ್ಟಿದ್ದರು. ಸಂಸದರಿಗೆ ಪತ್ರ ಬರೆದು ಹೊಸ ಟ್ರೈನ್‌ಗೆ ಅನುಮತಿ ಸಿಕ್ಕ ಬಗ್ಗೆ ಅಶ್ವಿನಿ ವೈಷ್ಣವ್ ಮಾಹಿತಿ ಕೊಟ್ಟಿದ್ದಾರೆ.

ಡಿಸೆಂಬರ್ 2 ರಂದು ನೈಋತ್ಯ ರೈಲ್ವೆಯ (SWR) ಸ್ಥಾಯಿ ಸಮಿತಿಯ ಅಧ್ಯಯನ ಭೇಟಿಯ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಈ ವಿಷಯವನ್ನು ಪ್ರಸ್ತಾಪಿಸಿದ್ದರು. SMVT ಬೆಂಗಳೂರು ಮೂಲ/ಅಂತ್ಯ ನಿಲ್ದಾಣವಾಗಿ ವಂದೇ ಭಾರತ್ ಸ್ಲೀಪರ್ ರೈಲಿಗೆ ಅವರು ಒತ್ತಾಯಿಸಿದ್ದರು.

ಈಗ ಇರುವ ರೈಲುಗಳು 24-30 ಗಂಟೆಗಳನ್ನು ತೆಗೆದುಕೊಳ್ಳುತ್ತವೆ. ಆದರೆ, ಬಸ್‌ಗಳು 16-18 ಗಂಟೆಗಳನ್ನು ತೆಗೆದುಕೊಳ್ಳುತ್ತವೆ. ನಮಗೆ ಬಸ್‌ನಷ್ಟು ವೇಗದ ರೈಲು ಬೇಕು ಎಂದು ತಿಳಿಸಿದ್ದರು.

ಭಾರತೀಯ ರೈಲ್ವೆ ಕೆಎಸ್‌ಆರ್ ಬೆಂಗಳೂರು ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಂಬೈ ನಡುವೆ ಸಂಪರ್ಕ ಕಲ್ಪಿಸುವ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಇದಾಗಿದ್ದು, ಸಂಪರ್ಕವನ್ನು ಸುಧಾರಿಸುವುದರ ಜೊತೆಗೆ ಪ್ರಯಾಣ ಸಮಯವನ್ನು ಸುಮಾರು 13ರಿಂದ 18 ಗಂಟೆಗಳವರೆಗೆ ಕಡಿಮೆ ಮಾಡುವ ಉದ್ದೇಶ ಹೊಂದಿದೆ.

ಇದಕ್ಕೆ ಜೊತೆಗೆ, ದೆಹಲಿ–ಸುರತ್ ಸೇರಿದಂತೆ ಇತರ ವಂದೇ ಭಾರತ್ ಸ್ಲೀಪರ್ ಮಾರ್ಗಗಳನ್ನೂ ಪರಿಗಣಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

NEET ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!