ಸ್ಟಾಲಿನ್ 
ದೇಶ

234 ಕ್ಷೇತ್ರಗಳಲ್ಲೂ DMK ಮೈತ್ರಿಕೂಟ ಗೆಲುವು; ಯಾರೇ ಬಂದರೂ ನಮಗೆ ಚಿಂತೆಯಿಲ್ಲ: ವಿಜಯ್ ರಾಜಕೀಯ ಪ್ರವೇಶದ ಬಗ್ಗೆ ಸ್ಟಾಲಿನ್ ಮಾತು!

ಡಿಎಂಕೆ ಯಾವುದೇ ಸವಾಲನ್ನು ಎದುರಿಸಲು ಸಿದ್ಧವಾಗಿದೆ. ಪಕ್ಷವು ಚಿಂತಿಸುತ್ತಿಲ್ಲ. ಸಾರ್ವಜನಿಕರು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸುತ್ತಾರೆ. ಹಾಗೂ ಶೀಘ್ರದಲ್ಲೇ ಬದಲಾಗುತ್ತಾರೆ ಎಂದು ಹೇಳಿದ್ದಾರೆ.

ಚೆನ್ನೈ: ಯಾರೇ ಬಂದರೂ ಅವರನ್ನು ಎದುರಿಸುತ್ತೇವೆ, ನಮಗೆ ಯಾವುದೇ ಚಿಂತೆ ಇಲ್ಲ ಎಂದು ನಟ ದಳಪತಿ ವಿಜಯ್ ಅವರ ರಾಜಕೀಯ ಪ್ರವೇಶದ ಬಗ್ಗೆ ಇದೇ ಮೊದಲ ಬಾರಿಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿಎಂಕೆ ಯಾವುದೇ ಸವಾಲನ್ನು ಎದುರಿಸಲು ಸಿದ್ಧವಾಗಿದೆ. ಪಕ್ಷವು ಚಿಂತಿಸುತ್ತಿಲ್ಲ. ಸಾರ್ವಜನಿಕರು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸುತ್ತಾರೆ. ಹಾಗೂ ಶೀಘ್ರದಲ್ಲೇ ಬದಲಾಗುತ್ತಾರೆ ಎಂದು ಹೇಳಿದ್ದಾರೆ.

234 ಕ್ಷೇತ್ರಗಳಲ್ಲೂ ಡಿಎಂಕೆ ಮೈತ್ರಿಕೂಟ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ಇತ್ತೀಚಿನ ಹೇಳಿಕೆಗಳು ಹತಾಶೆ ಮತ್ತು ಸೋಲಿನ ಭಯವನ್ನು ಪ್ರತಿಬಿಂಬಿಸುತ್ತವೆ. ದ್ರಾವಿಡ ಪಕ್ಷವೊಂದು ದೆಹಲಿಯಿಂದ ನಿಯಂತ್ರಿಸಲ್ಪಡುತ್ತಿರುವುದು ಆತಂಕಕಾರಿ ಎಂದು ಎಐಎಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 4 ರಂದು ಎಣಿಕೆ ನಡೆಯಲಿದೆ. ಡಿಎಂಕೆ ನೇತೃತ್ವದ ಕಾಂಗ್ರೆಸ್, ಡಿಎಂಡಿಕೆ ಹಾಗೂ ವಿಸಿಕೆ ಸೇರಿ ಎಡಪಕ್ಷಗಳ ಇಂಡಿಯಾ ಒಕ್ಕೂಟ ಮತ್ತು ಎಐಎಡಿಎಂಕೆ ನೇತೃತ್ವದ ಬಿಜೆಪಿ, ಪಿಎಂಕೆ ಎನ್​ಡಿಎ ಒಕ್ಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಹಾಗೆ ಇದೇ ಮೊದಲ ಬಾರಿಗೆ ನಟ ವಿಜಯ್ ಅವರ ಟಿವಿಕೆ ಕೂಡ ಚೊಚ್ಚಲ ಚುನಾವಣೆ ರಾಜಕೀಯ ಪ್ರವೇಶ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT