ಅಶೋಕ್ ಖರತ್‌ 
ದೇಶ

Sex Video ಪ್ರಕರಣ: ಸ್ವಯಂ ಘೋಷಿತ 'ದೇವಮಾನವ' ಅಶೋಕ್ ಖರತ್ ಮನೆ, ಕಚೇರಿ ಮೇಲೆ ED ದಾಳಿ

ಅಶೋಕ್ ಖರತ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಮಹಾರಾಷ್ಟ್ರದ ಹಲವು ನಗರಗಳಲ್ಲಿ ಶೋಧ ನಡೆಸಿದ್ದಾರೆ

ಮುಂಬೈ: ನಾಸಿಕ್‌ನಲ್ಲಿ ಜ್ಯೋತಿಷ್ಯದ ಹೆಸರಿನಲ್ಲಿ 150ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಮಾಡಿ ಜೈಲು ಪಾಲಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ.

ಅಶೋಕ್ ಖರತ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಮಹಾರಾಷ್ಟ್ರದ ಹಲವು ನಗರಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖರತ್ ಅವರ ತವರು ನಾಸಿಕ್‌ನಲ್ಲಿರುವ ಐದು ಮತ್ತು ಪುಣೆ ಮತ್ತು ಶಿರಡಿಯ ತಲಾ ಮೂರು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಖರತ್‌ಗೆ ಸಂಬಂಧಿಸಿದ ವಸತಿ ಮತ್ತು ವಾಣಿಜ್ಯ ಆವರಣಗಳು, ಅವರ ಚಾರ್ಟರ್ಡ್ ಅಕೌಂಟೆಂಟ್(ಸಿಎ) ಪ್ರಕಾಶ್ ಪೋಫಲೆ, ಖರತ್ ಅವರ ಸಂಬಂಧಿಕರು ಮತ್ತು ಸಹಕಾರಿ ಕ್ರೆಡಿಟ್ ಸೊಸೈಟಿಗಳ ಕೆಲವು ಶಾಖೆಗಳನ್ನು ತನಿಖೆ ವ್ಯಾಪ್ತಿಗೆ ಒಳಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ವಿವಾದಾತ್ಮಕ ಸ್ವಯಂ ಘೋಷಿತ ದೇವಮಾನವನ ವಿರುದ್ಧ ಸುಲಿಗೆ, ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರಿಗೆ ವಂಚನೆ, ಮಾದಕವಸ್ತು ಬಳಕೆ ಸೇರಿದಂತೆ ಇತರ ಆರೋಪಗಳ ಮೇಲೆ ನಾಸಿಕ್ ಪೊಲೀಸರು ದಾಖಲಿಸಿದ ಎಫ್‌ಐಆರ್ ಅನ್ನು ಗಮನದಲ್ಲಿಟ್ಟುಕೊಂಡು, ಏಪ್ರಿಲ್ 6 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಖರತ್ ವಿರುದ್ಧ ಇಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.

ಖರತ್ ಮೂರನೇ ವ್ಯಕ್ತಿಗಳ ಹೆಸರಿನಲ್ಲಿ ನಾಸಿಕ್ ಜಿಲ್ಲೆಯ ಎರಡು ಸಹಕಾರಿ ಕ್ರೆಡಿಟ್ ಸೊಸೈಟಿಗಳೊಂದಿಗೆ ಹಲವು ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಹಲವು ವರ್ಷಗಳಿಂದ ಮಹಾರಾಷ್ಟ್ರದ ಹಲವಾರು ಪ್ರಮುಖ ರಾಜಕಾರಣಿಗಳು ಸೇರಿದಂತೆ ನೂರಾರು ಮಹಿಳೆಯರು ಖರತ್ ಅವರನ್ನು ಭೇಟಿ ಮಾಡಿದ್ದು, ಹಲವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮೂರು ವರ್ಷಗಳ ಕಾಲ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ ನಂತರ ಮಾರ್ಚ್ 18 ರಂದು ಅಶೋಕ್ ಖರತ್ ಅವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ನೋಯ್ಡಾ: ಹಿಂಸಾಚಾರಕ್ಕೆ ತಿರುಗಿದ ಕಾರ್ಮಿಕರ ಪ್ರತಿಭಟನೆ; ಕಲ್ಲು ತೂರಾಟ, ಬೆಂಕಿ ಹಚ್ಚಿ ಆಕ್ರೋಶ

ಮಹಿಳಾ ಕೋಟಾ ಕಾನೂನು ಸಮಾನತೆಯ ಭಾರತಕ್ಕೆ ಪ್ರಮುಖ: ಪ್ರಧಾನಿ ಮೋದಿ

ಲೆಕ್ಕಾ ಕೊಡಿ.. ಹೈ ಡ್ರಾಮಾ; ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಛಾಟನೆ

ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿಯ 'ಪಟಾಕಿ ಕಿಚನ್' ಉದ್ಘಾಟಿಸಿದ ಮ್ಯೂಟೆಂಟ್ ರಘು! ಏನಿದರ ವಿಶೇಷತೆ? Video ನೋಡಿ..

SCROLL FOR NEXT