ಶಕ್ತಿ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಮಂಗಳವಾರ ಭಾರೀ ಸ್ಫೋಟ ಸಂಭವಿಸಿದ್ದು, ಭೀಕರ ದುರಂತದಲ್ಲಿ 10 ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯುತ್ ಸ್ಥಾವರದಲ್ಲಿ ಇನ್ನೂ ಕೆಲವು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸಿಂಘಿತರೈ ಗ್ರಾಮದಲ್ಲಿರುವ ವೇದಾಂತ ಲಿಮಿಟೆಡ್ ವಿದ್ಯುತ್ ಸ್ಥಾವರದ ಬಾಯ್ಲರ್ ಟ್ಯೂಬ್‌ನಲ್ಲಿ ಇಂದು ಮಧ್ಯಾಹ್ನ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ದುರಂತದಲ್ಲಿ 10 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ" ಎಂದು ಶಕ್ತಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಪ್ರಫುಲ್ ಠಾಕೂರ್ ಹೇಳಿದ್ದಾರೆ.
ಮಾಹಿತಿ ಪಡೆದ ಕೂಡಲೇ ಸ್ಥಳೀಯ ಆಡಳಿತ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.