ಸಾಮ್ರಾಟ್ ಚೌಧರಿ 
ದೇಶ

ಬಿಹಾರ: ನಿತೀಶ್ ಆಡಳಿತ ಅಂತ್ಯ; ಮೊದಲ ಬಿಜೆಪಿ CM ಆಗಿ ಸಾಮ್ರಾಟ್ ಚೌಧರಿ ಆಯ್ಕೆ!

ಪಾಟ್ನಾದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಅವರು ಬಿಹಾರದ ಮೊದಲ ಬಿಜೆಪಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪಾಟ್ನಾ: ಬಿಹಾರ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿ ಆಗಿ ಸಾಮ್ರಾಟ್ ಚೌಧರಿ ಮಂಗಳವಾರ ಆಯ್ಕೆಯಾಗಿದ್ದಾರೆ. ಪಾಟ್ನಾದ ಲೋಕಭವನದಲ್ಲಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ಈ ಬೆಳವಣಿಗೆಯಾಗಿದೆ.

ಪಾಟ್ನಾದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಎನ್ ಡಿಎ ಮೈತ್ರಿಕೂಟದ ಶಾಸಕರು ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಾಮ್ರಾಟ್ ಚೌಧರಿ ಅವರು ಬಿಹಾರದ ಮೊದಲ ಬಿಜೆಪಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಂಪುಟ ವಿಸರ್ಜನೆಗೆ ನಿತೀಶ್ ಕುಮಾರ್ ಶಿಫಾರಸು ಮಾಡಿದರು.

ಕಳೆದ ತಿಂಗಳು 75 ನೇ ವರ್ಷಕ್ಕೆ ಕಾಲಿಟ್ಟ ಮತ್ತು ವಾರದ ಹಿಂದೆ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರ್ ಇಂದು ಕೊನೆಯ ಕ್ಯಾಬಿನೆಟ್ ಸಭೆಯ ನಂತರ ರಾಜಭವನಕ್ಕೆ ತೆರಳಿದ್ದು, ಅಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ನಂತರ ಇಷ್ಟೇಲ್ಲಾ ಬೆಳವಣಿಗೆಯಾಗಿದೆ.

ಹಿಂದಿ ಹಾರ್ಟ್ ಲ್ಯಾಂಡ್ ನಲ್ಲಿ ಇಲ್ಲಿಯವರೆಗೂ ಬಿಜೆಪಿ ಮುಖ್ಯಮಂತ್ರಿ ಹುದ್ದೆಯಿಲ್ಲದ ಏಕೈಕ ರಾಜ್ಯವಾಗಿದ್ದ ಬಿಹಾರದಲ್ಲಿ ಇದೀಗ ಗದ್ದುಗೆ ಹಿಡಿಯುವ ಅವಕಾಶ ದೊರೆತಿದ್ದು, ಪಕ್ಷದ ನಾಯಕರು ಜಾಗರೂಕರಾಗಿದ್ದಾರೆ.

243-ಬಲದ ಬಿಹಾರ ಅಸೆಂಬ್ಲಿಯಲ್ಲಿ, NDA ಒಟ್ಟು 202 ಸ್ಥಾನಗಳೊಂದಿಗೆ ಬಹುಮತವನ್ನು ಹೊಂದಿದೆ, ಅದರಲ್ಲಿ ಬಿಜೆಪಿ 89 ರಲ್ಲಿ ಸಿಂಹ ಪಾಲನ್ನು ಹೊಂದಿದೆ. ನಂತರ JD(U) ನ 85 ಸ್ಥಾನ ಹೊಂದಿದ್ದು, ಉಳಿದಂತೆ LJP(RV), HAM ಮತ್ತು RLM ಕೆಲವು ಸ್ಥಾನಗಳನ್ನು ಹೊಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

ಬದರಿನಾಥದ 'ತಪ್ತ ಕುಂಡ'ದಲ್ಲಿ 108 ಬಾರಿ ಧಾರ್ಮಿಕ ಸ್ನಾನ: ರಾಜಸ್ಥಾನದ ಇಬ್ಬರು ವೃದ್ಧೆಯರು ಸಾವು!

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video