ಇನ್ಫೋಸಿಸ್‌ ಸಾಂದರ್ಭಿಕ ಚಿತ್ರ 
ದೇಶ

TCS ಬೆನ್ನಲ್ಲೇ ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್‌ ಜಿಹಾದ್‌: ಮಹಾರಾಷ್ಟ್ರ ಮುಖ್ಯಮಂತ್ರಿ, ಸಚಿವರಿಗೆ ದೂರು

ಪುಣೆಯ ಇನ್ಫೋಸಿಸ್ ಬಿಪಿಎಂನಲ್ಲಿ, ವಿಶೇಷವಾಗಿ ಡ್ಯಾಮ್ಲರ್ ಪ್ರಾಜೆಕ್ಟ್‌ನಲ್ಲಿ ನಡೆಯುತ್ತಿರುವ ಜಿಹಾದಿ ಕಿರುಕುಳದ ಬಗ್ಗೆ ಅನೇಕ ಹುಡುಗಿಯರು ನನಗೆ ದೂರು ನೀಡುತ್ತಿದ್ದಾರೆ. ದಯವಿಟ್ಟು ನೀವು ಇದನ್ನು ಪರಿಶೀಲಿಸಬಹುದೇ? ಎಂದು ಟ್ವೀಟ್ ಮಾಡಿದ್ದಾರೆ.

ಮುಂಬೈ: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಮತ್ತು ಲೈಂಗಿಕ ಕಿರುಕುಳ ಆರೋಪ ಕಾರ್ಪೋರೇಟ್‌ ವಲಯದಲ್ಲಿ ತೀವ್ರ ಕಳವಳ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ದೇಶದ ಮತ್ತೊಂದು ಪ್ರಮುಖ ಟೆಕ್ ದಿಗ್ಗಜ ಇನ್ಫೋಸಿಸ್‌ನಲ್ಲೂ(Infosys) ಕಾರ್ಪೋರೇಟ್‌ ಜಿಹಾದ್‌ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪುಣೆಯ ಇನ್ಫೋಸಿಸ್ ಬಿಪಿಎಂ(BPM) ಘಟಕದಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಜಿಹಾದಿ ಕಿರುಕುಳ ನೀಡಲಾಗುತ್ತಿದೆ ಎಂದು ಎಕ್ಸ್‌ ಬಳಕೆದಾರರೊಬ್ಬರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌, ಸಚಿವ ನಿತೀಶ್‌ ರಾಣೆ ಅವರಿಗೆ ದೂರು ನೀಡಿದ್ದಾರೆ.

ಪುಣೆಯ ಇನ್ಫೋಸಿಸ್ ಬಿಪಿಎಂನಲ್ಲಿ, ವಿಶೇಷವಾಗಿ ಡ್ಯಾಮ್ಲರ್ ಪ್ರಾಜೆಕ್ಟ್‌ನಲ್ಲಿ ನಡೆಯುತ್ತಿರುವ ಜಿಹಾದಿ ಕಿರುಕುಳದ ಬಗ್ಗೆ ಅನೇಕ ಹುಡುಗಿಯರು ನನಗೆ ದೂರು ನೀಡುತ್ತಿದ್ದಾರೆ. ದಯವಿಟ್ಟು ನೀವು ಇದನ್ನು ಪರಿಶೀಲಿಸಬಹುದೇ?" ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನಿತೀಶ್‌ ರಾಣೆ ಅವರು, ಈ ವಿಷಯವನ್ನು ಗಮನಿಸಲಾಗಿದೆ ಎಂದು ಉತ್ತರ ನೀಡಿದ್ದಾರೆ.

ಇನ್ನು ಈ ಆರೋಪಗಳಿಗೆ ಸಂಬಂಧಿಸಿದಂತೆ ಇನ್ಫೋಸಿಸ್ ಕಂಪನಿಯು ಸ್ಪಷ್ಟನೆ ನೀಡಿದ್ದು, ಯಾವುದೇ ರೀತಿಯ ತಾರತಮ್ಯ ಅಥವಾ ಕಿರುಕುಳದ ವಿರುದ್ಧ ಕಂಪನಿಯು ಶೂನ್ಯ ಸಹನೆ(Zero-tolerance) ನೀತಿಯನ್ನು ಹೊಂದಿದೆ. ತನ್ನ ಉದ್ಯೋಗಿಗಳಿಗೆ ಸುರಕ್ಷಿತ ಮತ್ತು ಗೌರವಯುತ ಕೆಲಸದ ವಾತಾವರಣವನ್ನು ಒದಗಿಸಲು ಬದ್ಧವಾಗಿರುವುದಾಗಿ ಹೇಳಿದೆ.

x ನಲ್ಲಿ ದೂರು ನೀಡಿರುವುದು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

Asian Games 2026: 1 ನಿಮಿಷದಲ್ಲಿ 2 ಚಿನ್ನದ ಪದಕ ಗೆದ್ದ ಭಾರತ, 75 ಪದಕಗಳೊಂದಿಗೆ 5ನೇ ಸ್ಥಾನಕ್ಕೆ ಲಗ್ಗೆ!

‘CEC ಜ್ಞಾನೇಶ್ ಕುಮಾರ್ ದೇಶದ್ರೋಹಿ’: ಮುಂಬೈನಲ್ಲಿ ಭುಗಿಲೆದ್ದ Cockroach Janata Party ಪ್ರತಿಭಟನೆ, ರಾಜೀನಾಮೆಗೆ ಬಿಗಿಪಟ್ಟು..!

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ Biggboss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!

Pakನ ಹೊಸ ನಾಟಕ: ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಹತ್ಯೆಗೀಡಾದ SSG ಉಗ್ರ ಜೀವಂತವಾಗಿದ್ದಾನೆ ಎಂದ ಪಾಕ್ ಸೇನೆ