ಅಯಾಜ್‌ ವಿರುದ್ಧ ಬುಲ್ಡೋಜರ್ ಕ್ರಮ 
ದೇಶ

180 ಅಪ್ರಾಪ್ತ ಬಾಲಕಿಯರೊಂದಿಗೆ ಸೆಕ್ಸ್: ಕಾಮುಕ ಅಯಾಜ್‌ ವಿರುದ್ಧ ಬುಲ್ಡೋಜರ್ ಕ್ರಮ; ಘರ್ಜಿಸಿದ JCB, Viedo ನೋಡಿ

180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಯುವಕನ ಮನೆಯ ಹೊರಗೆ ಜೆಸಿಬಿ ಘರ್ಜಿಸುತ್ತಿದ್ದು, ಒಂದು ಅಂತಸ್ತಿನ ಮನೆಯ ಅಕ್ರಮ ಭಾಗಗಳನ್ನು ಕೆಡವಲಾಗಿದೆ.

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರ ಆಕ್ಷೇಪಾರ್ಹ ಫೋಟೋಗಳು ಮತ್ತು ಅಶ್ಲೀಲ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡ ಆರೋಪದ ಮೇಲೆ 19 ವರ್ಷದ ಯುವಕನನ್ನು ಬಂಧಿಸಲಾಗಿದೆ.

ಅಪ್ರಾಪ್ತ ಬಾಲಕಿಯರನ್ನು ತನ್ನ "ಪ್ರೇಮ ಬಲೆಗೆ" ಸಿಲುಕಿಸಿ ಅವರೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಮೊಹಮ್ಮದ್ ಅಯಾಜ್‌ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಇದೀಗ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಯುವಕನ ಮನೆಯ ಹೊರಗೆ ಜೆಸಿಬಿ ಘರ್ಜಿಸುತ್ತಿದ್ದು, ಒಂದು ಅಂತಸ್ತಿನ ಮನೆಯ ಅಕ್ರಮ ಭಾಗಗಳನ್ನು ಕೆಡವಲಾಗಿದೆ.

ಅಮರಾವತಿ ಜಿಲ್ಲೆಯ ಪರತ್ವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ವಿರುದ್ಧ ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವಿಡಿಯೋಗಳನ್ನು ರೆಕಾರ್ಡ್ ಮಾಡಿದ ಆರೋಪ ಹೊರಿಸಲಾಗಿದೆ.

ಮೊದಲ ಮಹಡಿಗೆ ಪ್ರವೇಶಿಸಲು ಮನೆಯ ಹೊರಗೆ ನಿರ್ಮಿಸಲಾದ ಕಬ್ಬಿಣದ ಮೆಟ್ಟಿಲನ್ನು ಜೆಸಿಬಿ ಕೆಡವುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಆರೋಪಿಯ ನಿವಾಸದ ಅಕ್ರಮ ನಿರ್ಮಾಣದ ವಿರುದ್ಧ ಅಚಲ್ಪುರ್ ಮುನ್ಸಿಪಲ್ ಕೌನ್ಸಿಲ್‌ನ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸುತ್ತಿದೆ.

ಬಿಜೆಪಿ ಶಾಸಕ ಪ್ರವೀಣ್ ತಯಾಡೆ ಅವರು ಮುನ್ಸಿಪಲ್ ಕೌನ್ಸಿಲ್‌ನ ಕ್ರಮದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಪುರಸಭೆಯು ಅಯಾಜ್ ಅವರ ಕುಟುಂಬಕ್ಕೆ ಈಗಾಗಲೇ ನೋಟಿಸ್ ನೀಡಿದೆ ಎಂದು ವರದಿಯಾಗಿದೆ. ಆವರಣದ ಹೊರಗೆ ಭಾರೀ ಪೊಲೀಸ್ ಪಡೆ ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಆಯೋಗದ ವಿವಾದ: CEC Gyanesh Kumar ಭಾಗಿಯಾಗಬೇಕಿದ್ದ ಯುವಕರೊಂದಿಗಿನ ಕಾರ್ಯಕ್ರಮ ದಿಢೀರ್ ರದ್ದು!

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ-ಬಿಜೆಪಿ ಸಚಿವ

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಬಿಹಾರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ? ಮಂದಾರ್ ಬೆಟ್ಟದಲ್ಲಿ ಯುವತಿಗೆ ಕಾಮುಕರಿಂದ ಕಿರುಕುಳ; ಒಂದೇ ವಾರದಲ್ಲಿ 3ನೇ ಪ್ರಕರಣ..!

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!