ಅಶೋಕ್ ಮಿತ್ತಲ್  
ದೇಶ

ರಾಘವ್ ಚಡ್ಡಾ ಸ್ಥಾನಕ್ಕೆ ರಾಜ್ಯಸಭೆ ಉಪನಾಯಕರಾಗಿ ಆಯ್ಕೆಯಾದ AAP ನಾಯಕ ಅಶೋಕ್ ಮಿತ್ತಲ್ ಉದ್ಯಮಗಳ ಮೇಲೆ ಇಡಿ ದಾಳಿ; Video

ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದ ಪ್ರಕಾರ, ಜಲಂಧರ್ ಮತ್ತು ಫಗ್ವಾರಾದಲ್ಲಿರುವ ಮಿತ್ತಲ್ ಅವರ ವ್ಯಾಪಾರ ಹಿತಾಸಕ್ತಿಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳ ಜೊತೆಗೆ ಇನ್ನಿತರ ಪ್ರದೇಶಗಳಲ್ಲಿಯೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಜಾರಿ ನಿರ್ದೇಶನಾಲಯ (Enforcement directorate) ಇಂದು ಬುಧವಾರ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ (AAP) ರಾಜಸಭಾ ಸದಸ್ಯ ಅಶೋಕ್ ಮಿತ್ತಲ್ ಅವರಿಗೆ ಸಂಬಂಧಿಸಿದ ವ್ಯಾಪಾರ ಸಂಸ್ಥೆಗಳ ಮೇಲೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿಯಲ್ಲಿ ತನಿಖೆಯ ಭಾಗವಾಗಿ ಶೋಧ ಕಾರ್ಯಾಚರಣೆ ನಡೆಸಿತು. ಇತ್ತೀಚೆಗೆ ಅವರು ಪಕ್ಷದ ರಾಜಸಭಾ ಉಪ ನಾಯಕನಾಗಿ ರಾಘವ್ ಚಡ್ಡಾ ಸ್ಥಾನಕ್ಕೆ ನೇಮಕಗೊಂಡಿದ್ದರು.

61 ವರ್ಷದ ಉದ್ಯಮಿ ಹಾಗೂ ಶಿಕ್ಷಣತಜ್ಞರಾದ ಮಿತ್ತಲ್, ಲವ್ಲಿ ಗ್ರೂಪ್‌ನ ಮುಖ್ಯಸ್ಥರಾಗಿದ್ದು, ಫಗ್ವಾರಾದ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿಯ ಕುಲಪತಿಯಾಗಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದ ಪ್ರಕಾರ, ಜಲಂಧರ್ ಮತ್ತು ಫಗ್ವಾರಾದಲ್ಲಿರುವ ಮಿತ್ತಲ್ ಅವರ ವ್ಯಾಪಾರ ಹಿತಾಸಕ್ತಿಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳ ಜೊತೆಗೆ ಇನ್ನಿತರ ಪ್ರದೇಶಗಳಲ್ಲಿಯೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಈ ಕ್ರಮವನ್ನು FEMA ಕಾಯ್ದೆಯ ವಿಧಿಗಳ ಅಡಿಯಲ್ಲಿ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರ ಬಗ್ಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಕ್ಷ, ಎಕ್ಸ್‌ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಣೆ ನೀಡಿದ್ದು, ಇದು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುವ ಕೇಂದ್ರ ಸರ್ಕಾರದ ಕ್ರಮಗಳ ಭಾಗವಾಗಿದೆ ಎಂದು ಆರೋಪಿಸಿದೆ. ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎನ್ ಡಿಎ ಈ ದಾಳಿ ಮಾಡಿದೆ. ರಾಜಕೀಯವಾಗಿ ಎದುರಿಸಲು ಬದಲು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದೆ.

ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್, ಬಿಜೆಪಿ ಪಂಜಾಬ್ ಚುನಾವಣೆಗೆ ಸಿದ್ಧತೆ ಆರಂಭಿಸಿದೆ ಎಂದು ಹೇಳಿ, ರಾಜ್ಯದ ಜನರು ತಕ್ಕ ಪ್ರತಿಕ್ರಿಯೆ ನೀಡುತ್ತಾರೆ ಎಂದು ಎಚ್ಚರಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಈ ದಾಳಿ ಖಂಡಿಸಿ, ಬಿಜೆಪಿ ಚುನಾವಣಾ ಸಿದ್ಧತೆ ಆರಂಭಿಸಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಪಂಜಾಬ್ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಆಪ್ ರಾಜಸಭಾ ಸದಸ್ಯ ಅಶೋಕ್ ಮಿತ್ತಲ್ ಅವರ ಮನೆ ಮತ್ತು ವಿಶ್ವವಿದ್ಯಾಲಯದ ಮೇಲೆ ಇಡಿ ದಾಳಿ… ಇದು ಸಾಮಾನ್ಯ ಮೋದಿ ಶೈಲಿ,” ಎಂದು ಸಿಎಂ ಭಗವಂತ್ ಮಾನ್ ಹೇಳಿದ್ದಾರೆ. ನಾವು ಕೊಂಬೆಗಳಿಂದ ಬಿದ್ದು ಹೋಗುವ ಎಲೆಗಳಲ್ಲ; ಬಿರುಗಾಳಿಗಳು ತಮ್ಮ ಮಿತಿಯಲ್ಲಿ ಇರಲಿ ಎಂಬ ಅರ್ಥದ ಕವನವನ್ನೂ ಉಲ್ಲೇಖಿಸಿದ್ದಾರೆ.

ಪಂಜಾಬ್ ವಿಧಾನಸಭೆ ಚುನಾವಣೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

'ನನ್ನ ಸ್ನೇಹಿತ ಮೋದಿ ಜೊತೆಗೆ ಉತ್ತಮ ಮಾತುಕತೆ ನಡೆಸಿದೆ': ಡೊನಾಲ್ಡ್ ಟ್ರಂಪ್-Video

‘ಇದು ಒಂಟೆ ಕನಸಿನಂತಿದೆ’..: ಟ್ರಂಪ್ ಶಾಂತಿ ಒಪ್ಪಂದ ಹೇಳಿಕೆಗೆ ಇರಾನ್ ವ್ಯಂಗ್ಯ

ಸಂಪುಟ ಸಭೆಯಲ್ಲೂ ಸದ್ದು ಮಾಡಿದ ದಾವಣಗೆರೆ ದಂಗಲ್: ಮುಸ್ಲಿಂ ನಾಯಕರ ವಿರುದ್ಧ ಕ್ರಮಕ್ಕೆ ಸಚಿವರೇ ಆಕ್ಷೇಪ !

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ, ಇದು ನಾನು ನಿಲ್ಲಿಸಿದ 10 ನೇ ಯುದ್ಧ- ಟ್ರಂಪ್

SCROLL FOR NEXT