ಎಲ್ ಪಿಜಿ ಸಿಲಿಂಡರ್ 
ದೇಶ

ಪಶ್ಚಿಮ ಏಷ್ಯಾ ಯುದ್ಧದ ನಡುವೆಯೂ LPG, PNG ಪೂರೈಕೆ ಕುರಿತು ಕೇಂದ್ರ ಸರ್ಕಾರ ಅತಿ ದೊಡ್ಡ ಘೋಷಣೆ!

ನಿಮಗೆ ತಿಳಿದಿರುವಂತೆ, ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ, ಭಾರತದ ಇಂಧನ ಸರಬರಾಜು ಮೇಲೆ ಸಹ ಪರಿಣಾಮ ಬೀರಿದೆ. ಆದರೆ ಭಾರತ ಸರ್ಕಾರವು ಅನೇಕ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡಿದೆ

ನವದೆಹಲಿ: ಪಶ್ಚಿಮ ಏಷ್ಯಾ ಯುದ್ಧದಿಂದ ಉಂಟಾದ ಇಂಧನ ಅಡಚಣೆಗಳ ನಡುವೆಯೂ ದೇಶದ ಗ್ರಾಹಕರಿಗೆ ಪೈಪ್ಡ್ ನೈಸರ್ಗಿಕ ಅನಿಲ (PNG) ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿಲ(LPG)ದ ಶೇ. 100 ರಷ್ಟು ಪೂರೈಕೆ ಮಾಡುವುದಾಗಿ ಬುಧವಾರ ಕೇಂದ್ರ ಸರ್ಕಾರ ಹೇಳಿದೆ.

ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಇಂದು ಅಂತರ-ಸಚಿವಾಲಯದ ಬ್ರೀಫಿಂಗ್‌ನಲ್ಲಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ(ಮಾರುಕಟ್ಟೆ ಮತ್ತು ತೈಲ ಸಂಸ್ಕರಣಾಗಾರ) ಸುಜಾತಾ ಶರ್ಮಾ ಅವರು, ಇಂಧನ ಪೂರೈಕೆಯನ್ನು ಸ್ಥಿರಗೊಳಿಸಲು ಮತ್ತು ಅಗತ್ಯ ಸೇವೆಗಳನ್ನು ನಿರ್ವಹಿಸಲು ಸರ್ಕಾರವು ಹಲವಾರು ಪರಿಣಾಮಕಾರಿ ಕ್ರಮಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.

"ನಿಮಗೆ ತಿಳಿದಿರುವಂತೆ, ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ, ಭಾರತದ ಇಂಧನ ಸರಬರಾಜು ಮೇಲೆ ಸಹ ಪರಿಣಾಮ ಬೀರಿದೆ. ಆದರೆ ಭಾರತ ಸರ್ಕಾರವು ಅನೇಕ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡಿದೆ, ಇದರಿಂದಾಗಿ PNG ಮತ್ತು LPG ಗ್ರಾಹಕರಿಗೆ ಆದ್ಯತೆ ನೀಡುವ ಮೂಲಕ ಶೇ. 100 ರಷ್ಟು ಪೂರೈಕೆಯನ್ನು ಖಚಿತಪಡಿಸಲಾಗಿದೆ. ಇದರ ಹೊರತಾಗಿ, CNG ಸಾಗಣೆಯನ್ನು ಸಹ ಶೇ. 100 ರಷ್ಟು ಖಚಿತಪಡಿಸಲಾಗಿದೆ" ಎಂದು ಶರ್ಮಾ ತಿಳಿಸಿದರು.

ಸರ್ಕಾರದ ಕ್ರಮಗಳನ್ನು ಬೆಂಬಲಿಸಲು, ದೇಶೀಯ ಸಂಸ್ಕರಣಾಗಾರಗಳು LPG ಉತ್ಪಾದನೆಯನ್ನು ಹೆಚ್ಚಿಸಿದವು. ಆದರೆ ಬೇಡಿಕೆಯನ್ನು ನಿರ್ವಹಿಸಲು ಸರ್ಕಾರವು ಬುಕಿಂಗ್ ಅವಧಿಯನ್ನು ನಗರ ಪ್ರದೇಶಗಳಲ್ಲಿ 25 ದಿನ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳಿಗೆ ಹೆಚ್ಚಿಸಿತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!