ಪ್ರಾತಿನಿಧಿಕ ಚಿತ್ರ 
ದೇಶ

ಮಹಿಳೆ ಮೇಲೆ ಅತ್ಯಾಚಾರ: ಬಿಜೆಪಿ ಕೌನ್ಸಿಲರ್ ಮಗನ ವಿರುದ್ಧ ಕೇಸ್ ದಾಖಲು; ಆರೋಪಿ ಪರಾರಿ

ಬುಧವಾರ ಸಂಜೆ ಎಫ್‌ಐಆರ್ ದಾಖಲಿಸಲಾಗಿದ್ದು, ಬಳಿಕ ಕೌನ್ಸಿಲರ್ ಅವರ ಮನೆ ಮೇಲೆ ಪೊಲೀಸ್ ತಂಡ ದಾಳಿ ನಡೆಸಿತು. ಆದರೆ ಆರೋಪಿ ಪರಾರಿಯಾಗಿದ್ದಾನೆ ಎಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಉಸ್ತುವಾರಿ ಯೋಗೇಂದ್ರ ಸಿಂಗ್ ಪರಿಹಾರ್ ಅವರು ಹೇಳಿದ್ದಾರೆ.

ಸತ್ನಾ: ಮಧ್ಯಪ್ರದೇಶದ ಸತ್ನಾದಲ್ಲಿ ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಿಗಿದ ಆರೋಪದ ಮೇಲೆ ಬಿಜೆಪಿ ಕೌನ್ಸಿಲರ್ ಮಗನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ.

ಮಧ್ಯಪ್ರದೇಶದ ಸತ್ನಾದಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಮಗನ ವಿರುದ್ಧ ಮದುವೆಯಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ 27 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಬುಧವಾರ ಸಂಜೆ ಎಫ್‌ಐಆರ್ ದಾಖಲಿಸಲಾಗಿದ್ದು, ಬಳಿಕ ಕೌನ್ಸಿಲರ್ ಅವರ ಮನೆ ಮೇಲೆ ಪೊಲೀಸ್ ತಂಡ ದಾಳಿ ನಡೆಸಿತು. ಆದರೆ ಆರೋಪಿ ಪರಾರಿಯಾಗಿದ್ದಾನೆ ಎಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಉಸ್ತುವಾರಿ ಯೋಗೇಂದ್ರ ಸಿಂಗ್ ಪರಿಹಾರ್ ಅವರು ಹೇಳಿದ್ದಾರೆ.

ಜಬಲ್ಪುರದ ಖಾಸಗಿ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ಮಹಿಳೆ, ಹಲವಾರು ವರ್ಷಗಳಿಂದ ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದರು ಎಂದು ಪರಿಹಾರ್ ಅವರು ತಿಳಿಸಿದ್ದಾರೆ.

ಆರೋಪಿಯು ಮದುವೆಯ ನೆಪದಲ್ಲಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿಯು ಈಗ ಏಪ್ರಿಲ್ 20 ರಂದು ಇನ್ನೊಬ್ಬ ಮಹಿಳೆಯನ್ನು ಮದುವೆಯಾಗಲು ನಿರ್ಧರಿಸಿದ್ದು, ಏಪ್ರಿಲ್ 16 ರಂದು ಅವರ 'ತಿಲಕ್' ಸಮಾರಂಭವನ್ನು ಯೋಜಿಸಲಾಗಿದೆ ಎಂದು ದೂರುದಾರ ಮಹಿಳೆ ಹೇಳಿದ್ದಾರೆ.

ಆರೋಪಿಯ ತಾಯಿ ಬಿಜೆಪಿ ಕೌನ್ಸಿಲರ್ ಆಗಿದ್ದು, ಅವರು ಬಿಜೆಪಿಗೆ ಸೇರುವ ಮೊದಲು ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಫಾರಂ-7 ದುರ್ಬಳಕೆ ಆರೋಪ: ಕ್ರಮಕ್ಕೆ ಚು.ಆಯೋಗ ಸೂಚನೆ, ಐತಿಹಾಸಿಕ ದಿನ ಎಂದ ಸಿಎಂ ಡಿಕೆಶಿ

‘ನಿಮ್ಮ ಪ್ರಾರ್ಥನೆಗೆ ಧನ್ಯವಾದ’: ಭಾರತದ ಹೀರೋ ಪೈಲಟ್ ಸ್ಮಿತ್ ಮಚ್ಚರ್ ಅಪಾಯದಿಂದ ಪಾರು!

ರಕ್ತದ ಮಡುವಿನಲ್ಲಿ ಪೈಲಟ್`ಗಳು, ಫ್ಲೈಟ್ ಲ್ಯಾಂಡ್ ಮಾಡಿದ ಪ್ಲಂಬರ್; FlyDubai ವಿಮಾನ ಪತನವಾಗದಿದ್ದದ್ದೇ ಅಚ್ಚರಿ!

ICC Cricket World Cup 2027 ವೇಳಾಪಟ್ಟಿ; ಅ.7ರಿಂದ ಭಾರತದ ಅಭಿಯಾನ ಆರಂಭ, 3 ಬಾರಿ ಬದ್ಧ ಶತ್ರುಗಳ ಕದನ?

‘ನೈಸ್ ಅಕ್ರಮ ಮರೆಮಾಚಲು ಈ ಡ್ರಾಮಾ’: ಚುನಾವಣಾ ಆಯೋಗದ ಮುಂದೆ ಸಿಎಂ, ಸಚಿವರ ಧರಣಿಗೆ ಕುಮಾರಸ್ವಾಮಿ ಕಿಡಿ