ಸಾಂದರ್ಭಿಕ ಚಿತ್ರ 
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಶೇ.2 ರಷ್ಟು ಹೆಚ್ಚಳ; ಜನವರಿ 1ರಿಂದಲೇ ಪೂರ್ವಾನ್ವಯ

ಈ ಡಿಎ ಹೆಚ್ಚಳವು ಜನವರಿ 1, 2026 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಇದರಿಂದ 1.15 ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶನಿವಾರ ಗುಡ್ ನ್ಯೂಸ್ ನೀಡಿದ್ದು, ತುಟ್ಟಿಭತ್ಯೆಯನ್ನು ಶೇ.2 ರಷ್ಟು ಹೆಚ್ಚಳ ಮಾಡಿದೆ.

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 2 ರಷ್ಟು ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರೊಂದಿಗೆ ಕೇಂದ್ರ ಸರ್ಕಾರಿ ನೌಕರರಿ ತುಟ್ಟಿ ಭತ್ಯೆ ಶೇ. 58 ರಿಂದ ಶೇ. 60ಕ್ಕೆ ಏರಿಕೆಯಾಗಲಿದೆ.

ಈ ಡಿಎ ಹೆಚ್ಚಳವು ಜನವರಿ 1, 2026 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಇದರಿಂದ 1.15 ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

ಸರ್ಕಾರವು ವರ್ಷಕ್ಕೆ ಎರಡು ಬಾರಿ ಡಿಎ ಹೆಚ್ಚಳವನ್ನು ಘೋಷಿಸುತ್ತದೆ. ಪ್ರತಿ ವರ್ಷ ಜನವರಿ ಮತ್ತು ಜುಲೈ ತಿಂಗಳಲ್ಲಿ ಡಿಎ ಹೆಚ್ಚಳ ಮಾಡುತ್ತದೆ. ಸಾಮಾನ್ಯವಾಗಿ ಹೋಳಿ ಅಥವಾ ದೀಪಾವಳಿಯಂತಹ ಹಬ್ಬಗಳ ಸಮಯದಲ್ಲಿ ಕೇಂದ್ರ ಸರ್ಕಾರ, ತನ್ನ ನೌಕರರಿಗೆ ಸಹಿ ಸುದ್ದಿ ನೀಡುತ್ತದೆ. ಆದರೆ ಈ ಬಾರಿ, ಡಿಎ ಘೋಷಣೆ ವಿಳಂಬವಾದ ಕಾರಣ ಕೇಂದ್ರ ಸರ್ಕಾರಿ ನೌಕರರಲ್ಲಿ ಅಸಮಾಧಾನವಿತ್ತು. ಅಂತಿಮವಾಗಿ ಈಗ ಘೋಷಣೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'

‘ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಮತ್ತೆ ಪ್ರತಿಭಟನೆ!’: ಕೇಂದ್ರಕ್ಕೆ ಬಾಬಾ ರಾಮದೇವ್ ಖಡಕ್ ಎಚ್ಚರಿಕೆ

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಪಶ್ಚಿಮ ಬಂಗಾಳ: ದೇವಸ್ಥಾನ ಸಮೀಪದ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ: 7 ಯಾತ್ರಿಕರು ಸಜೀವ ದಹನ