ಅಶೋಕ್‌ ಖರಾತ್‌ ಮತ್ತು ಜಿತೇಂದ್ರ ಶೆಲ್ಕೆ 
ದೇಶ

ಮುಂಬೈ: ಸ್ವಯಂಘೋಷಿತ ದೇವಮಾನವ ಅಶೋಕ್‌ ಖರಾತ್‌ ಆಪ್ತ ಜಿತೇಂದ್ರ ಶೆಲ್ಕೆ ದಂಪತಿ ಅಪಘಾತದಲ್ಲಿ ನಿಧನ

ಜಿತೇಂದ್ರ ಶೆಲ್ಕೆ (55) ಮತ್ತು ಅವರ ಪತ್ನಿ ಅನುರಾಧ (50) ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪುತ್ರನಿಗೆ ಅಪಘಾತದಲ್ಲಿ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬಯಿ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರಾತನ ಅತ್ಯಂತ ಆಪ್ತ ಸಹಚರ ಹಾಗೂ ಶಿವಾನಿಕಾ ಟ್ರಸ್ಟ್‌ನ ನಿರ್ದೇಶಕ ಜಿತೇಂದ್ರ ಶೆಲ್ಕೆ ಮತ್ತು ಅವರ ಪತ್ನಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಛತ್ರಪತಿ ಸಂಭಾಜಿನಗರದಿಂದ ಶಿರಡಿಗೆ ಹೋಗುವ ರಸ್ತೆಯ 'ಧೋತ್ರೆ' ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಜಿತೇಂದ್ರ ಶೆಲ್ಕೆ ಮತ್ತು ಅವರ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಮಗನನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಕಾರು ನಿಂತಿದ್ದ ಕಂಟೇನರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಜಿತೇಂದ್ರ ಶೆಲ್ಕೆ (55) ಮತ್ತು ಅವರ ಪತ್ನಿ ಅನುರಾಧ (50) ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪುತ್ರನಿಗೆ ಅಪಘಾತದಲ್ಲಿ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರನ್ನು ಚಲಾಯಿಸುತ್ತಿದ್ದ ಶೆಲ್ಕೆ, ಅವರ ಪತ್ನಿ ಮತ್ತು ಮಗ ಛತ್ರಪತಿ ಸಂಭಾಜಿನಗರದಿಂದ ಮುಂಬೈ-ನಾಗ್ಪುರ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಮೂಲಕ ಥಾಣೆಗೆ ಬರುತ್ತಿದ್ದರು. ಕಾರು ಧೋತ್ರೆ ತಲುಪುತ್ತಿದ್ದಂತೆ, ವಾಹನದ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!