ಪಿಎಂ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ದೇಶ

ಇಂದು ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಭಾಷಣ; ತೀವ್ರ ಕುತೂಹಲ ಕೆರಳಿಸಿದ ಮೋದಿ ನಡೆ

ಲೋಕಸಭೆಯಲ್ಲಿ ನಿನ್ನೆ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾದ ಬೆನ್ನಲ್ಲೇ ಮೋದಿ ಅವರು ಇಂದು ರಾತ್ರಿ ದೇಶ ಉದ್ದೇಶಿಸಿ ಮಾತನಾಡುತ್ತಿದ್ದು, ಪ್ರಧಾನಿ ನಡೆ ತೀವ್ರ ಕುತೂಹಲ ಕೆರಳಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆಯಲ್ಲಿ ನಿನ್ನೆ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾದ ಬೆನ್ನಲ್ಲೇ ಮೋದಿ ಅವರು ಇಂದು ರಾತ್ರಿ ದೇಶ ಉದ್ದೇಶಿಸಿ ಮಾತನಾಡುತ್ತಿದ್ದು, ಪ್ರಧಾನಿ ನಡೆ ತೀವ್ರ ಕುತೂಹಲ ಕೆರಳಿಸಿದೆ.

ಪ್ರಧಾನಿ ಮೋದಿ ಅವರು ಏನು ಮಾತನಾಡುತ್ತಾರೆ ಎಂಬ ಬಗ್ಗೆ ಇನ್ನೂ ಯಾವುದೇ ಖಚಿತ ಮಾಹಿತಿ ಇಲ್ಲ. ಕೇಂದ್ರ ಸರ್ಕಾರ, ವಿರೋಧ ಪಕ್ಷಗಳಿಂದ ತೀವ್ರ ಟೀಕೆಗಳ ನಡುವೆ ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ವಿಫಲವಾದ ಒಂದು ದಿನದ ನಂತರ ಮೋದಿ ಭಾಷಣ ಮಾಡುತ್ತಿದ್ದು, ಹೆಚ್ಚು ಮಹತ್ವ ಪಡೆದುಕೊಂಡಿದೆ.

ಲೋಕಸಭೆಯ ಸ್ಥಾನಗಳನ್ನು 543ರಿಂದ 850ಕ್ಕೆ ಏರಿಸುವ ಸಂವಿಧಾನ ತಿದ್ದುಪಡಿ ಮಸೂದೆ ಮತ್ತು ಮಹಿಳಾ ಮೀಸಲಾತಿ ಮಸೂದೆ ಪಾಸಾಗಲು ಮೂರನೇ ಎರಡರಷ್ಟು ಮತಗಳು ಬೇಕಿತ್ತು. ಎನ್ ಡಿಎ ಸರ್ಕಾರದ ಈ ಎರಡೂ ಮಹತ್ವಾಕಾಂಕ್ಷಿಯ ಮಸೂದೆಗಳನ್ನು ಇಂಡಿಯಾ ಮೈತ್ರಿಕೂಟ ಸೋಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!