ಪ್ರಧಾನಿ ಮೋದಿ 
ದೇಶ

Video: ದೇಶವನ್ನು ಉದ್ದೇಶಿಸಿ ಮೋದಿ ಭಾಷಣ; ಪ್ರಧಾನಿ ಮಹಿಳೆಯರ ಕ್ಷಮೆಯಾಚಿಸಿದ್ದೇಕೆ?

ಪ್ರಗತಿಯತ್ತ ಸಾಗುತ್ತಿರುವ ದೇಶದ ಪ್ರತಿಯೊಬ್ಬ ತಾಯಿ, ಸಹೋದರಿಯರನ್ನೂ ನಾನು ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ನವದೆಹಲಿ: ವಿರೋಧ ಪಕ್ಷಗಳು ಮಹಿಳಾ ಮೀಸಲಾತಿಗೆ ವಿರುದ್ಧವಾಗಿ ಮತ ಚಲಾಯಿಸುವ ಮೂಲಕ ಅತಿ ದೊಡ್ಡ ತಪ್ಪು ಮಾಡಿವೆ. ಶೀಘ್ರದಲ್ಲೇ ಅದಕ್ಕೆ ತಕ್ಕ ಬೆಲೆ ತೆರಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ನಾನು ಭಾರತದ ಪ್ರತಿಯೊಬ್ಬ ಮಹಿಳೆಯರೊಂದಿಗೆ ಮಾತನಾಡಲು ಬಂದಿದ್ದೇನೆ" ಎಂದರು.

ಪ್ರಗತಿಯತ್ತ ಸಾಗುತ್ತಿರುವ ದೇಶದ ಪ್ರತಿಯೊಬ್ಬ ತಾಯಿ, ಸಹೋದರಿಯರನ್ನೂ ನಾನು ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

"ನಿನ್ನೆ ಸಂಸತ್ತಿನಲ್ಲಿ ನಡೆದದ್ದನ್ನು ಮಹಿಳೆಯರು ಎಂದಿಗೂ ಮರೆಯುವುದಿಲ್ಲ, ಅವರು ವಿರೋಧ ಪಕ್ಷಗಳಿಗೆ ತಕ್ಕ ಪಾಠ ಕಲಿಸುತ್ತಾರೆ. ಶಿಕ್ಷೆ ಖಂಡಿತ ಎಂದು ಹೇಳಿದರು.

ಮಹಿಳಾ ಮಸೂದೆ ಸೋಲಿಗೆ ಕಾಂಗ್ರೆಸ್, ಡಿಎಂಕೆ ಕಾರಣ

ತಮ್ಮ ಸರ್ಕಾರದ ಮಹಿಳಾ ಮೀಸಲಾತಿ ಮಸೂದೆ ಡಿಎಂಕೆ ಮತ್ತು ಕಾಂಗ್ರೆಸ್ ಪಕ್ಷಗಳಿಂದ "ಹಳಿತಪ್ಪಿದೆ". ಮಸೂದೆ ಸೋಲಿಗೆ ಪ್ರತಿಪಕ್ಷಗಳೇ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ಸಾಮಾನ್ಯ ಮಹಿಳೆಯರು ಏಳಿಗೆ ಹೊಂದುವುದರಿಂದ ಡಿಎಂಕೆ, ಕಾಂಗ್ರೆಸ್‌ಗೆ ಹೇಗೆ ತೊಂದರೆಯಾಗುತ್ತದೆ?” ಎಂದು ಪ್ರಧಾನಿ ಪ್ರಶ್ನಿಸಿದರು.

ಮಸೂದೆಯನ್ನು ಬೆಂಬಲಿಸುವಂತೆ ವಿರೋಧ ಪಕ್ಷಗಳಿಗೆ ನಾನು ವೈಯಕ್ತಿಕವಾಗಿ ಮನವಿ ಮಾಡಿದ್ದೆ. ಸಾಮಾನ್ಯ ಕುಟುಂಬಗಳ ಸಹೋದರಿಯರು ಮಾತ್ರ ಸಂಸತ್ತು ಮತ್ತು ವಿಧಾನಸಭೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕೆಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!