ಅಪಘಾತಕ್ಕೀಡಾದ ಬಸ್ 
ದೇಶ

ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿಬಿದ್ದ ಬಸ್; 15 ಪ್ರಯಾಣಿಕರ ಸಾವು, 20 ಮಂದಿಗೆ ಗಾಯ!

ರಾಮ ನಗರ ಪ್ರದೇಶದ ಕಾಗೋರ್ಟ್ ಗ್ರಾಮದ ಬಳಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಡಿದಾದ ತಿರುವಿನಲ್ಲಿ ಬಸ್ ಸಾಗುತ್ತಿದ್ದಾಗ ದುರಂತ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಧಂಪುರ: ಪ್ರಯಾಣಿಕರ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ರಾಮ ನಗರ ಪ್ರದೇಶದ ಕಾಗೋರ್ಟ್ ಗ್ರಾಮದ ಬಳಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಡಿದಾದ ತಿರುವಿನಲ್ಲಿ ಬಸ್ ಸಾಗುತ್ತಿದ್ದಾಗ ದುರಂತ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ. ಬಳಿಕ ಪೊಲೀಸರು ಮತ್ತಿತರ ತುರ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಸೇರಿಕೊಂಡಿದ್ದಾರೆ.

ಬಸ್ ಅವಶೇಷಗಳಿಂದ ಒಟ್ಟು 15 ಶವಗಳನ್ನು ಹೊರತೆಗೆಯಲಾಗಿದ್ದು, 20 ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರಲ್ಲಿ ಹಲವರ ಸ್ಥಿತಿ "ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಬಸ್ ದೂರದ ಹಳ್ಳಿಯಿಂದ ಉಧಂಪುರಕ್ಕೆ ಹೋಗುತ್ತಿತ್ತು ಎನ್ನಲಾಗಿದೆ.

ಅಪಘಾತದ ನಂತರ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಉಧಮ್‌ಪುರದ ಉಪ ಆಯುಕ್ತ ಮಿಂಗಾ ಶೆರ್ಪಾ ಅವರೊಂದಿಗೆ ಮಾತನಾಡಿದ್ದು, ಗಂಭೀರವಾಗಿ ಗಾಯಗೊಂಡಿರುವ ಸಂತ್ರಸ್ತರನ್ನು ವಿಮಾನದ ಮೂಲಕ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಉಧಮ್‌ಪುರ ಜಿಲ್ಲಾಧಿಕಾರಿ ಮಿಂಗಾ ಶೆರ್ಪಾ ಅವರೊಂದಿಗೆ ಮಾತನಾಡಿದ್ದೇನೆ. ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಭಾರೀ ಸಾವುನೋವುಗಳನ್ನು ನಿರೀಕ್ಷಿಸಲಾಗಿದೆ.

ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡಲಾಗುತ್ತಿದೆ. ಗಾಯಾಳುಗಳನ್ನು ವೈದ್ಯಕೀಯ ಸಹಾಯಕ್ಕಾಗಿ ಸ್ಥಳಾಂತರಿಸಲಾಗುವುದು. ಗಂಭೀರವಾಗಿ ಗಾಯಗೊಂಡವರನ್ನು ವಿಮಾನದ ಮೂಲಕ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಸ್ಥಳೀಯ ಆಡಳಿತ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಬಿಜೆಪಿ ಸ್ಥಳೀಯ ಕಾರ್ಯಕರ್ತರ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!