ಪ್ರಧಾನಿ ಮೋದಿ ಮತ್ತು ಮಲ್ಲಿಕಾರ್ಜುನ ಖರ್ಗೆ 
ದೇಶ

ಪ್ರಧಾನಿ ಮೋದಿ ಒಬ್ಬ ಟೆರರಿಸ್ಟ್‌: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ; ಬಳಿಕ ಸ್ಪಷ್ಟನೆ; Video

ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಚೆನ್ನೈನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಖರ್ಗೆ ಅವರು, "ಟೆರರಿಸ್ಟ್‌ ಪ್ರಧಾನಿ ಮೋದಿ ಅವರೊಂದಿಗೆ ಎಐಎಡಿಎಂಕೆ ಕೈಜೋಡಿಸಿರುವುದು ನಿಜಕ್ಕೂ ವಿಷಾದನೀಯ ಎಂದು ಹೇಳಿದರು.

ಚೆನ್ನೈ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು "ಭಯೋತ್ಪಾದಕ" ಎಂದು ಟೀಕಿಸುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಚೆನ್ನೈನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಖರ್ಗೆ ಅವರು, "ಟೆರರಿಸ್ಟ್‌ ಪ್ರಧಾನಿ ಮೋದಿ ಅವರೊಂದಿಗೆ ಎಐಎಡಿಎಂಕೆ ಕೈಜೋಡಿಸಿರುವುದು ನಿಜಕ್ಕೂ ವಿಷಾದನೀಯ ಎಂದು ಹೇಳಿದರು.

ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಸೋಲಿಸುವ ಸಮಯದಲ್ಲಿ ವಿರೋಧ ಪಕ್ಷದ ಒಗ್ಗಟ್ಟನ್ನು ಎತ್ತಿ ತೋರಿಸಿದ ಕಾಂಗ್ರೆಸ್ ಅಧ್ಯಕ್ಷರು, ಬಿಜೆಪಿಯನ್ನು ಬೆಂಬಲಿಸಿದ್ದಕ್ಕಾಗಿ ಎಐಎಡಿಎಂಕೆಯನ್ನು ಟೀಕಿಸಿದರು ಮತ್ತು ಪ್ರಧಾನಿ ಮೋದಿಯವರನ್ನು 'ಸಮಾನತೆಯಲ್ಲಿ ನಂಬಿಕೆಯಿಲ್ಲದ ಭಯೋತ್ಪಾದಕ' ಎಂದು ಟೀಕಿಸಿದರು.

ತಮಿಳುನಾಡಿನಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿಯ ಔಚಿತ್ಯವನ್ನು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ, ಸಮಾನತೆ ಮತ್ತು ನ್ಯಾಯದ ಮೇಲೆ ನಂಬಿಕೆ ಇರದ ಪಕ್ಷದೊಂದಿಗೆ ಎಐಎಡಿಎಂಕೆ ನಂಬಿಕೆ ಇಟ್ಟಿರುವುದು ಆಶ್ಚರ್ಯ ಎಂದು ಗುಡುಗಿದರು.

"ನಮಗೆ ಹೆಚ್ಚು ಸಂಸದರನ್ನು ನೀಡಿದ ತಮಿಳುನಾಡು ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಅದಕ್ಕಾಗಿಯೇ ನಾವು ಮಸೂದೆಯನ್ನು ಹೋರಾಡಿ ಸೋಲಿಸಲು ಸಾಧ್ಯವಾಯಿತು. ಇದು ಪೆರಿಯಾರ್, ಡಾ. ಅಂಬೇಡ್ಕರ್, ಅಣ್ಣಾದೊರೈ, ಮಹಾನ್ ಕಾಮರಾಜ್ ಮತ್ತು ಕರುಣಾನಿಧಿ ಅವರ ವೈಜ್ಞಾನಿಕ ಚಿಂತನೆ ಮತ್ತು ಆದರ್ಶಗಳ ನಾಡು ಎಂದರು.

ಇನ್ನೂ ಪ್ರಧಾನಿ ವಿರುದ್ಧ ಬಳಸಿದ ಪದಗಳ ಬಗ್ಗೆ ಪ್ರಶ್ನಿಸಿದಾಗ, ಖರ್ಗೆ ತಮ್ಮನ್ನು ತಾವು ಸಮರ್ಥಿಸಿಕೊಂಡರು ಮತ್ತು ಪ್ರಧಾನಿ ತಮ್ಮ ರಾಜಕೀಯ ವಿರೋಧಿಗಳನ್ನು, ಇಡಿ, ಸಿಬಿಐ, ಐಟಿ ಬಳಸುವ ಮೂಲಕ ಭಯಭೀತಗೊಳಿಸುತ್ತಿದ್ದಾರೆ ಎಂದು ಹೇಳುವುದು ನನ್ನ ಉದ್ದೇಶ ಎಂದು ಸ್ಪಷ್ಟಪಡಿಸಿದರು.

"ಅವರು (ಪ್ರಧಾನಿ ಮೋದಿ) ಜನರನ್ನು ಮತ್ತು ರಾಜಕೀಯ ಪಕ್ಷಗಳನ್ನು ಭಯಭೀತಗೊಳಿಸುತ್ತಿದ್ದಾರೆ. ಅವರು ಭಯೋತ್ಪಾದಕರೆಂದು ನಾನು ಎಂದಿಗೂ ಹೇಳಿಲ್ಲ... ನಾನು ಇದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ, ಮೋದಿ ಯಾವಾಗಲೂ ಬೆದರಿಕೆ ಹಾಕುತ್ತಾರೆ. ಇಡಿ, ಐಟಿ ಮತ್ತು ಸಿಬಿಐನಂತಹ ಸಂಸ್ಥೆಗಳು ಅವರ ಕೈಯಲ್ಲಿವೆ. ಅವರು ಕ್ಷೇತ್ರ ಪುನರ್ ವಿಂಗಡಣೆಯನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಬಯಸುತ್ತಿದ್ದಾರೆ" ಎಂದು ಖರ್ಗೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!