ಸಂಗ್ರಹ ಚಿತ್ರ PTI
ದೇಶ

Bengaluru: 410 ಕೋಟಿ ರೂ GST ಹಗರಣ ಬಯಲು; ಆಧಾರ್, ಪಾನ್ ಕಾರ್ಡ್ ಬಳಸಿ 102 ಕೋಟಿ ರೂ ತೆರಿಗೆ ಲೂಟಿ!

ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಬೆಂಗಳೂರು: ಹೈದರಾಬಾದ್‌ ನಲ್ಲಿ ಬಿರಿಯಾನಿ ಆಡಿಟ್ ನಲ್ಲಿ 70,000 ಕೋಟಿ ರೂಪಾಯಿ ತೆರಿಗೆ ವಂಚನೆ ದಂಧೆ ಬಯಲಾದ ಬಳಿಕ ಬೆಂಗಳೂರಿನಲ್ಲಿ ಬರೊಬ್ಬರಿ 410 ಕೋಟಿ ಜಿಎಸ್ ಟಿ ಹಗರಣ ಬಯಲಾಗಿದೆ.

ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಸುಮಾರು 410 ಕೋಟಿ ರೂಪಾಯಿ ಮೊತ್ತದ ಈ ವ್ಯವಹಾರದಲ್ಲಿ 102.5 ಕೋಟಿ ರೂಪಾಯಿ ತೆರಿಗೆ ಹಣವನ್ನು ಲೂಟಿ ಮಾಡಲಾಗಿದೆ.

ಈ ವಂಚನೆಯ ಜಾಲದ ರೂವಾರಿ ಆಂಧ್ರಪ್ರದೇಶದ ಚಿತ್ತೂರಿನ ತೌಕೀರ್ ಮೊಹಮ್ಮದ್ (42) ಆಗಿದ್ದು, ಆತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಈತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿದೇಶಕ್ಕೆ ಪರಾರಿಯಾಗಿರುವ ಈತನ ಸಹಚರ ಶೇಕ್ ಜಾಕೀರ್ ಹುಸೇನ್ ಅಲಿಯಾಸ್ ಬಾಷಾ ಎಂಬಾತನಿಗೆ ತೀವ್ರ ಹುಡುಕಾಟ ನಡೆಯುತ್ತಿದೆ.

ಈ ಜಾಲದಲ್ಲಿರುವವರು ಅಮಾಯಕ ಜನರ ಪಾನ್ (PAN) ಮತ್ತು ಆಧಾರ್ ಕಾರ್ಡ್‌ಗಳನ್ನು ಅಕ್ರಮವಾಗಿ ಬಳಸಿ ಹಲವು ನಕಲಿ ಕಂಪನಿಗಳನ್ನು ನೋಂದಣಿ ಮಾಡಿಕೊಳ್ಳುತ್ತಿದ್ದರು. ಯಾವುದೇ ಸರಕು ಅಥವಾ ಸೇವೆಗಳನ್ನು ಸರಬರಾಜು ಮಾಡದೆಯೇ, ಕೇವಲ ಸಿಮೆಂಟ್, ಕಬ್ಬಿಣದ ಸರಳುಗಳ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಪಡೆಯುತ್ತಿದ್ದರು. ಕರ್ನಾಟಕ ಮಾತ್ರವಲ್ಲದೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲೂ ಈ ಜಾಲ ಹಬ್ಬಿತ್ತು. ನಕಲಿ ಐಟಿಸಿಯನ್ನು ವಿವಿಧ ಕಾಂಟ್ರಾಕ್ಟರ್‌ಗಳಿಗೆ ವರ್ಗಾಯಿಸಿ ತೆರಿಗೆ ವಂಚನೆಗೆ ಸಹಕರಿಸುತ್ತಿದ್ದರು.

ತೆರಿಗೆ ಇಲಾಖೆಯಿಂದ ನೋಂದಣಿ ಅಥವಾ ನೋಟಿಸ್ ಬರುತ್ತಿದ್ದಂತೆಯೇ ಜಿಎಸ್‌ಟಿ ನೋಂದಣಿ ರದ್ದು ಮಾಡಿ, ಮೊಬೈಲ್ ಸಂಖ್ಯೆಗಳನ್ನು ಬದಲಿಸಿ ಅಲ್ಲಿಂದ ಪರಾರಿಯಾಗುತ್ತಿದ್ದರು. ಈ ಕುರಿತು ಬೆಂಗಳೂರಿನ ಅಣ್ಣಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರ್ಕಾರಕ್ಕೆ ಬರಬೇಕಿದ್ದ 102.5 ಕೋಟಿ ರೂಪಾಯಿಗಳ ತೆರಿಗೆ ಹಣವನ್ನು ವಸೂಲಿ ಮಾಡಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ: 12ಕ್ಕೂ ಹೆಚ್ಚು ಮಂದಿ ಸಾವು, ಇಂಡೋನೇಷ್ಯಾ ಸೇರಿ ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

ಟ್ರಂಪ್ ಸೂಚನೆಗೆ ಕ್ಯಾರೆ ಎನ್ನದ ಇಸ್ರೇಲ್: ಇರಾನ್ ಮೇಲೆ ವೈಮಾನಿಕ ದಾಳಿ; ಟೆಹ್ರಾನ್ ವಾಯುಪ್ರದೇಶ ಬಂದ್, ಯುದ್ಧ ಪುನರಾರಂಭ ಸಾಧ್ಯತೆ

2028ರ ಚುನಾವಣಾ ತಯಾರಿಯಲ್ಲಿ ಕಾಂಗ್ರೆಸ್! ಬಿಜೆಪಿ-ಜೆಡಿಎಸ್ ಮತ ವಿಭಜನೆಯ ಚಿಂತೆ; ಉಳಿಯುತ್ತಾ NDA ಮೈತ್ರಿ?

ಅತ್ಯಂತ ಬೇಸರದಿಂದ ಬರೆಯುತ್ತಿದ್ದೇನೆ; BDA ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದು ತರವಲ್ಲ- ಶಾಸಕ ಸುರೇಶ್ ಕುಮಾರ್

ಹೆಚ್​ಡಿ ದೇವೇಗೌಡಗೆ ತಪ್ಪಿದ ರಾಜ್ಯಸಭೆ ಟಿಕೆಟ್: ಜೆಡಿಎಸ್ ಗೆ ಬಿಗ್ ಶಾಕ್; ಸುಮಲತಾ ಅಂಬರೀಷ್ ಗೂ ನಿರಾಸೆ!

SCROLL FOR NEXT