ಬಿಜೆಪಿ ಸೇರಿದ ರಾಘವ್ ಚಡ್ಡಾ ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್  online desk
ದೇಶ

ಸಂಸತ್ ನಲ್ಲಿ ನಿರ್ಬಂಧಿಸಿದ್ದ AAP ಗೆ ಶಾಕ್! ರಾಘವ್ ಚಡ್ಡಾ ಸೇರಿ 7 ಸಂಸದರು ಬಿಜೆಪಿ ಸೇರ್ಪಡೆ; ಸರ್ಕಾರಕ್ಕೆ ಮತ್ತಷ್ಟು ಬಲ! Video

ರಾಘವ್ ಚಡ್ಡಾ, ಅಶೋಕ್ ಕುಮಾರ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು 2022 ರಿಂದ ಆಮ್ ಆದ್ಮಿ ಪಕ್ಷದಿಂದ (AAP) ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನವದೆಹಲಿ: ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಶುಕ್ರವಾರ ಎಎಪಿ ತೊರೆದು ಬಿಜೆಪಿ ಸೇರಿದ್ದಾರೆ.

ಈ ಬೆಳವಣಿಗೆಯಿಂದ ಕೇಜ್ರಿವಾಲ್‌ಗೆ ದೊಡ್ಡ ಆಘಾತ ಉಂಟಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಘವ್ ಚಡ್ಡಾ, ಆಮ್ ಆದ್ಮಿ ಪಕ್ಷದಿಂದ 7 ಸಂಸದರು ಬಿಜೆಪಿಗೆ ಸೇರ್ಪಡೆಯಾಗಲಿದ್ದೇವೆ. "ರಾಜ್ಯಸಭೆಯಲ್ಲಿ ಎಎಪಿಗೆ ಸೇರಿದ 2/3 ನೇ ಸದಸ್ಯರಾದ ನಾವು ಭಾರತದ ಸಂವಿಧಾನದ ನಿಬಂಧನೆಗಳನ್ನು ಚಲಾಯಿಸಲು ಮತ್ತು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದೇವೆ" ಎಂದು ಹೇಳಿದರು.

ರಾಘವ್ ಚಡ್ಡಾ, ಅಶೋಕ್ ಕುಮಾರ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು 2022 ರಿಂದ ಆಮ್ ಆದ್ಮಿ ಪಕ್ಷದಿಂದ (AAP) ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ರಾಘವ್ ಚಡ್ಡಾ ಅವರು, “ನಾನು ನನ್ನ ರಕ್ತ ಮತ್ತು ಬೆವರಿನಿಂದ ಪೋಷಿಸಿ ನನ್ನ ಯೌವನದ 15 ವರ್ಷಗಳನ್ನು ನೀಡಿದ ಆಮ್ ಆದ್ಮಿ ಪಕ್ಷ ಈಗ ಅದರ ತತ್ವಗಳು, ಮೌಲ್ಯಗಳು ಮತ್ತು ಮೂಲ ನೈತಿಕತೆಗಳಿಂದ ಸಂಪೂರ್ಣವಾಗಿ ವಿಮುಖವಾಗಿದೆ. ಪಕ್ಷ ಇನ್ನು ಮುಂದೆ ದೇಶಕ್ಕಾಗಿ ಅಥವಾ ರಾಷ್ಟ್ರೀಯ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿಲ್ಲ, ಆದರೆ ವೈಯಕ್ತಿಕ ಲಾಭಕ್ಕಾಗಿ ಕೆಲಸ ಮಾಡುತ್ತಿದೆ. ನಿಮ್ಮಲ್ಲಿ ಹಲವರು ಕಳೆದ ಕೆಲವು ವರ್ಷಗಳಿಂದ ಇದನ್ನು ನನಗೆ ಹೇಳುತ್ತಿದ್ದೀರಿ ಮತ್ತು ನಾನು ತಪ್ಪು ಪಕ್ಷದಲ್ಲಿದ್ದ ಸರಿಯಾದ ವ್ಯಕ್ತಿ ಎಂದು ವೈಯಕ್ತಿಕವಾಗಿ ಭಾವಿಸಿದ್ದೇನೆ. ಆದ್ದರಿಂದ, ಇಂದು ನಾನು ಆಮ್ ಆದ್ಮಿ ಪಕ್ಷದಿಂದ ದೂರವಿದ್ದು ಜನರ ಬಳಿಗೆ ಹೋಗುತ್ತಿದ್ದೇನೆ ಎಂದು ರಾಘವ್ ಚಡ್ಡಾ ಘೋಷಿಸಿದ್ದಾರೆ”

“ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಸಂಸತ್ತಿನ ಮೂರನೇ ಎರಡರಷ್ಟು ಸದಸ್ಯರಾದ ನಾವು ಭಾರತದ ಸಂವಿಧಾನದ ನಿಬಂಧನೆಗಳನ್ನು ಚಲಾಯಿಸುತ್ತೇವೆ ಮತ್ತು ಭಾರತೀಯ ಜನತಾ ಪಕ್ಷದೊಂದಿಗೆ (BJP) ವಿಲೀನಗೊಳ್ಳುತ್ತೇವೆ.” ಎಂದು ರಾಘವ್ ಚಡ್ಡಾ ಹೇಳಿದ್ದಾರೆ. ಮೂರನೇ ಎರಡರಷ್ಟು ಸಂಸದರು ಒಟ್ಟಿಗೆ ಸೇರ್ಪಡೆಯಾಗಿರುವುದರಿಂದ ಅವರ ಸಂಸತ್ ಸ್ಥಾನಕ್ಕೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: 'ಒಪ್ಪಂದಕ್ಕೆ ಒಪ್ಪಿಗೆ ಸಿಕ್ಕಿದೆ’ ಎಂದ ಟ್ರಂಪ್‌; ‘ಇನ್ನೂ ನಿರ್ಧಾರವೇ ಆಗಿಲ್ಲ’ ಎಂದ ಇರಾನ್‌ - ಶಾಂತಿ ಒಪ್ಪಂದದ ಸುತ್ತ ಹೆಚ್ಚಿದ ಅನಿಶ್ಚಿತತೆ..!

ಇರಾನ್ ಮೇಲೆ ದಾಳಿ ರದ್ದು, ಮಾತುಕತೆ ಪ್ರಮುಖ ಅಂಶಗಳಿಗೆ ಟೆಹ್ರಾನ್‌ ಅತ್ಯುನ್ನತ ನಾಯಕರ ಅನುಮೋದನೆ: ಡೊನಾಲ್ಡ್ ಟ್ರಂಪ್ ಘೋಷಣೆ

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ 'Power game': ಸಮುದಾಯಗಳ ಮೂಲಕ ಶಕ್ತಿ ಪ್ರದರ್ಶನ, ಹೈಕಮಾಂಡ್‌ ಮೇಲೆ ನಾಯಕರ ಒತ್ತಡ..!

6 ನಾಗಾಗಳ ಹತ್ಯೆ ಬೆನ್ನಲ್ಲೇ ಮಣಿಪುರದಲ್ಲಿ ಕುಕಿ ಸಮುದಾಯದ ಇಬ್ಬರ ಬರ್ಬರ ಹತ್ಯೆ; 30 ಮನೆಗಳು ಸುಟ್ಟು ಕರಕಲು!

ಧರ್ಮಸ್ಥಳಕ್ಕೆ ಕಳಂಕ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು: 200 ಕೋಟಿ ಬಳಸಿ ಕೇರಳದಿಂದ ಷಡ್ಯಂತ್ರ?

SCROLL FOR NEXT