ಸಾಮ್ರಾಟ್ ಚೌಧರಿ 
ದೇಶ

ಬಿಹಾರ: ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದು ಬೀಗಿದ ಸಾಮ್ರಾಟ್ ಚೌಧರಿ

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಲಾಯಿತು.

ಪಾಟ್ನಾ: ಬಿಹಾರ ನೂತನ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಸರ್ಕಾರವು ಶುಕ್ರವಾರ ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಗೆದ್ದಿದೆ.

ಬಹುಮತ ಸಾಬೀತುಪಡಿಸಲು ಕರೆಯಲಾಗಿದ್ದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಸಾಮ್ರಾಟ್ ಚೌಧರಿ ಅವರು 'ರಾಜ್ಯದ ಪ್ರಸ್ತುತ ಸಚಿವ ಸಂಪುಟದ ಮೇಲೆ ಸದನವು ತನ್ನ ನಂಬಿಕೆಯನ್ನು ಇರಿಸುತ್ತದೆ' ಎಂದು ಪ್ರಸ್ತಾಪಿಸುವ ನಿರ್ಣಯವನ್ನು ಮಂಡಿಸಿದರು.

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ನಿರ್ಣಯವನ್ನು ಪಾಸ್​ ಮಾಡಲಾಯಿತು. ವಿಶ್ವಾಸಮತ ಗೆಲ್ಲಲು ಸರ್ಕಾರಕ್ಕೆ 122 ಮತಗಳ ಅಗತ್ಯ ಇದೆ. ಆದರೆ, ಎನ್​ಡಿಎ 202 ಸದಸ್ಯರನ್ನು ಹೊಂದಿದ್ದು, ಸಂಪೂರ್ಣ ಬೆಂಬಲ ಪಡೆದಿದೆ.

ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾದ ನಂತರ ಮುಖ್ಯಮಂತ್ರಿ ಹುದ್ದೆಯನ್ನು ತ್ಯಜಿಸಿದ ನಂತರ ಈ ತಿಂಗಳ ಆರಂಭದಲ್ಲಿ ಸಾಮ್ರಾಚ್ ಚೌಧರಿ ಅವರು ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ರಚಿಸಿದ್ದರು.

ಜೆಡಿ-ಯು ನಾಯಕರಾದ ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್ ಅವರನ್ನು ಮಾತ್ರ ಹೊಸ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದ್ದು, ಅವರನ್ನು ಉಪಮುಖ್ಯಮಂತ್ರಿಗಳಾಗಿ ನೇಮಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ