ಎಂ ಕೆ ಸ್ಟಾಲಿನ್  
ದೇಶ

ತಮಿಳುನಾಡು: ಚುನಾವಣೆ ಮುಗಿಯುತ್ತಿದ್ದಂತೆಯೇ, ವಿಶ್ರಾಂತಿಗಾಗಿ ಕೂಡೈಕೆನಾಲ್ ಗೆ ತೆರಳಿದ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್!

ಡಿಎಂಕೆ ಅಧ್ಯಕ್ಷರಾಗಿರುವ ಸ್ಟಾಲಿನ್ ಚಾರ್ಟರ್ಡ್ ವಿಮಾನದಲ್ಲಿ ಮಧುರೈಗೆ ಬಂದಿದ್ದು, ಬಳಿಕ ರಸ್ತೆ ಮಾರ್ಗವಾಗಿ ರಾಜ್ಯದ ಜನಪ್ರಿಯ ಪ್ರವಾಸಿ ತಾಣವಾದ ಕೊಡೈಕೆನಾಲ್‌ಗೆ ತೆರಳಿದರು.

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ವಿಶ್ರಾಂತಿ ಪಡೆಯಲು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸುಂದರ ಗಿರಿಧಾಮ ಕೊಡೈಕೆನಾಲ್‌ಗೆ ಶನಿವಾರ ತೆರಳಿದ್ದಾರೆ.

ಡಿಎಂಕೆ ಅಧ್ಯಕ್ಷರಾಗಿರುವ ಸ್ಟಾಲಿನ್ ಚಾರ್ಟರ್ಡ್ ವಿಮಾನದಲ್ಲಿ ಮಧುರೈಗೆ ಬಂದಿದ್ದು, ಬಳಿಕ ರಸ್ತೆ ಮಾರ್ಗವಾಗಿ ರಾಜ್ಯದ ಜನಪ್ರಿಯ ಪ್ರವಾಸಿ ತಾಣವಾದ ಕೊಡೈಕೆನಾಲ್‌ಗೆ ತೆರಳಿದರು. ಇದನ್ನು "ಗಿರಿಧಾಮಗಳ ರಾಜಕುಮಾರಿ ಎಂದು ಕರೆಯಲಾಗುತ್ತದೆ.

ಹಸಿರು ಕಾಡುಗಳು, ಸರೋವರಗಳು ಮತ್ತು ಜಲಪಾತಗಳಿಗೆ ಇದು ಹೆಸರುವಾಸಿಯಾಗಿದೆ. ಸ್ಟಾಲಿನ್ ಪತ್ನಿ ದುರ್ಗಾ ಮತ್ತಿತರ ಕುಟುಂಬ ಸದಸ್ಯರು ಅವರೊಂದಿಗೆ ಇದ್ದರು. ಏಪ್ರಿಲ್ 23 ರಂದು ತಮಿಳುನಾಡು ವಿಧಾನಸಭಾ ಚುನಾವಣೆ ಮುಗಿದಿತ್ತು. ಎರಡು ದಿನಗಳ ನಂತರ ಅವರು ನಾಲ್ಕು ದಿನ ವಿರಾಮ ಪಡೆದಿದ್ದು, ಏಪ್ರಿಲ್ 29 ರಂದು ಚೆನ್ನೈಗೆ ಹಿಂತಿರುಗಲಿದ್ದಾರೆ.

ಸ್ಟಾಲಿನ್ ಒಂದು ತಿಂಗಳಿಗೂ ಹೆಚ್ಚು ಕಾಲ ರಾಜ್ಯದಾದ್ಯಂತ ಡಿಎಂಕೆ ಮತ್ತು ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸಿದ್ದರು. ಚುನಾವಣೆಯ ನಂತರ ಸಣ್ಣ ವಿರಾಮಕ್ಕಾಗಿ ಸ್ಟಾಲಿನ್ ಕೊಡೈಕೆನಾಲ್‌ಗೆ ಭೇಟಿ ನೀಡಿದ್ದು ಇದೇ ಮೊದಲಲ್ಲ. 2021 ರ ವಿಧಾನಸಭಾ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆ ಮುಗಿದ ನಂತರ ಈ ಪ್ರತ್ಯೇಕ ತಾಣಕ್ಕೆ ಭೇಟಿ ನೀಡಿದ್ದರು.

ಉಪಮುಖ್ಯಮಂತ್ರಿ ಉದಯನಿಧಿ ಈಗಾಗಲೇ ತಮ್ಮ ಪತ್ನಿ ಮತ್ತು ಮಗಳೊಂದಿಗೆ ದುಬೈಗೆ ಸಣ್ಣ ಪ್ರವಾಸಕ್ಕೆ ತೆರಳಿದ್ದಾರೆ. ಮೇ 4 ರಂದು ಮತ ಎಣಿಕೆ ನಡೆಯುವ ಮುನ್ನ ಇಬ್ಬರೂ ನಗರಕ್ಕೆ ಹಿಂತಿರುಗಲಿದ್ದಾರೆ ಎಂದು ಡಿಎಂಕೆ ಮೂಲವೊಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ