ಎನ್ಐಎ  online desk
ದೇಶ

ಅಂತರರಾಜ್ಯ LeT ಮಾಡ್ಯೂಲ್ ಭೇದಿಸಿದ NIA; ಇಬ್ಬರು ಪಾಕ್ ಪ್ರಜೆಗಳು ಸೇರಿದಂತೆ ಐವರು ಉಗ್ರರ ಬಂಧನ

ನ್ಯಾಯಾಲಯವು ಎಲ್ಲಾ ಐದು ಬಂಧಿತ ಭಯೋತ್ಪಾದಕರನ್ನು ಎನ್ಐಎ ಕಸ್ಟಡಿಗೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು: ಅಂತರರಾಜ್ಯ ಲಷ್ಕರ್-ಎ-ತೈಬಾ ಭಯೋತ್ಪಾದಕ ಘಟಕವನ್ನು ಪತ್ತೆಹಚ್ಚಿದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸೋಮವಾರ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಐವರು ಭಯೋತ್ಪಾದಕರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣವು ಏಪ್ರಿಲ್ 7 ರಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಐದು ಎಲ್‌ಇಟಿ ಕಾರ್ಯಕರ್ತರನ್ನು ಬಂಧಿಸಿದ್ದಕ್ಕೆ ಸಂಬಂಧಿಸಿದೆ.

ಬಂಧಿತರಲ್ಲಿ ಅಬ್ದುಲ್ಲಾ ಅಲಿಯಾಸ್ ಅಬು ಹುರೇರಾ ಕೂಡ ಸೇರಿದ್ದಾರೆ. ಅಬ್ದುಲ್ಲಾ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಮತ್ತು ಕೇಂದ್ರಾಡಳಿತ ಪ್ರದೇಶದ ಹೊರಗೆ ನೆಲೆಗಳನ್ನು ಸ್ಥಾಪಿಸಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ ಇಟಿ ಜಾಲ ಮತ್ತು ಅದರ ಸಂಪರ್ಕಗಳನ್ನು ಪತ್ತೆಹಚ್ಚಲು ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಬ್ದುಲ್ಲಾ ಜೊತೆಗೆ, ಮತ್ತೊಬ್ಬ ಪಾಕಿಸ್ತಾನಿ ಭಯೋತ್ಪಾದಕ ಉಸ್ಮಾನ್ ಅಲಿಯಾಸ್ ಖುಬೈಬ್ ಮತ್ತು ಶ್ರೀನಗರ ನಿವಾಸಿಗಳಾದ ಮೊಹಮ್ಮದ್ ನಕೀಬ್ ಭಟ್, ಆದಿಲ್ ರಶೀದ್ ಮತ್ತು ಗುಲಾಮ್ ಮೊಹಮ್ಮದ್ ಮಿರ್ ಅಲಿಯಾಸ್ ಮಾಮಾ ಅವರನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ ಕೇಂದ್ರೀಯ ಸಂಸ್ಥೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.

ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಎನ್ಐಎ ವಹಿಸಿಕೊಂಡ ನಂತರ, ತನಿಖಾ ಸಂಸ್ಥೆಯು ಇಂದು ಬಂಧಿತ ಭಯೋತ್ಪಾದಕರನ್ನು ಜಮ್ಮುವಿನ ವಿಶೇಷ NIA ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯಾಯಾಲಯವು ಎಲ್ಲಾ ಐದು ಬಂಧಿತ ಭಯೋತ್ಪಾದಕರನ್ನು ಎನ್ಐಎ ಕಸ್ಟಡಿಗೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಬ್ಬರು ಪಾಕಿಸ್ತಾನಿ ಪ್ರಜೆಗಳಿಗೆ ಎರಡು ದಿನ ಕಸ್ಟಡಿ ನೀಡಲಾಗಿದ್ದರೆ, ಮೂವರು ಸ್ಥಳೀಯ ಭಯೋತ್ಪಾದಕರನ್ನು 15 ದಿನ ಎನ್ಐಎ ಕಸ್ಟಡಿಗೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video