ಮನೀಶ್ ಸಿಸೋಡಿಯಾ ಮತ್ತು ಅರವಿಂದ್ ಕೇಜ್ರಿವಾಲ್  
ದೇಶ

Delhi Liquor Scam: ನ್ಯಾ. ಸ್ವರ್ಣ ಕಾಂತ ಶರ್ಮಾ ಮುಂದೆ ವಿಚಾರಣೆಗೆ ಹಾಜರಾಗಲ್ಲ; ಕೇಜ್ರಿವಾಲ್ ಬೆನ್ನಲ್ಲೇ ಕೋರ್ಟ್ ಬಹಿಷ್ಕರಿಸಿದ ಸಿಸೋಡಿಯಾ..!

ಈ ನಿರ್ಧಾರವನ್ನು ಸಿಸೋಡಿಯಾ ಅವರು ಅಧಿಕೃತ ಪತ್ರದ ಮೂಲಕ ತಿಳಿಸಿದ್ದು, ತಮ್ಮ ಪರವಾಗಿ ಯಾವುದೇ ವಕೀಲರೂ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಷ್ ಸಿಸೋಡಿಯಾ ಅವರು ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ನ್ಯಾಯಪೀಠದ ಮುಂದೆ ಹಾಜರಾಗುವುದಿಲ್ಲ ಎಂದು ಘೋಷಿಸಿದ್ದಾರೆ.

ಈ ನಿರ್ಧಾರವನ್ನು ಸಿಸೋಡಿಯಾ ಅವರು ಅಧಿಕೃತ ಪತ್ರದ ಮೂಲಕ ತಿಳಿಸಿದ್ದು, ತಮ್ಮ ಪರವಾಗಿ ಯಾವುದೇ ವಕೀಲರೂ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಈ ಪ್ರಕರಣದಲ್ಲಿ ನ್ಯಾಯ ಸಿಗುವ ನಿರೀಕ್ಷೆ ಇಲ್ಲ ಎಂದು ಹೇಳಿದ್ದು, ಇನ್ನು ಮುಂದೆ “ಸತ್ಯಾಗ್ರಹ” ದ ಮಾರ್ಗವನ್ನು ಅನುಸರಿಸುವುದಾಗಿ ತಿಳಿಸಿದ್ದಾರೆ.

ಮಹಾತ್ಮ ಗಾಂಧೀಜಿ ಅವರ ಅಹಿಂಸಾತ್ಮಕ ಹೋರಾಟದ ಮಾರ್ಗವನ್ನು ಉಲ್ಲೇಖಿಸಿ ಈ ಹೇಳಿಕೆಯನ್ನು ನೀಡಿದ್ದಾರೆ.

ಇದಕ್ಕೂ ಮುನ್ನ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಕೂಡ ಇದೇ ನ್ಯಾಯಪೀಠದ ಮುಂದೆ ವೈಯಕ್ತಿಕವಾಗಿಯೂ ಅಥವಾ ವಕೀಲರ ಮೂಲಕವೂ ಹಾಜರಾಗುವುದಿಲ್ಲ ಎಂದು ಘೋಷಿಸಿದ್ದರು.

ನ್ಯಾಯಮೂರ್ತಿ ಸ್ವರ್ಣ ಕಾಂತಾ ಶರ್ಮಾ ಅವರಿಂದ ತಮ್ಮ ಅರ್ಜಿ ತಿರಸ್ಕೃತವಾದ ಬಳಿಕ ಅವರು ಈ ನಿರ್ಧಾರ ತೆಗೆದುಕೊಂಡಿದ್ದರು.

ಕೇಜ್ರಿವಾಲ್ ತಮ್ಮ ಪತ್ರದಲ್ಲಿ, "ನ್ಯಾಯಮೂರ್ತಿ ಸ್ವರ್ಣ ಕಾಂತ ಅವರಿಂದ ನ್ಯಾಯ ಸಿಗುವ ನನ್ನ ಭರವಸೆ ಕುಸಿದಿದೆ. ಆದ್ದರಿಂದ, ನಾನು ಮಹಾತ್ಮ ಗಾಂಧಿಯವರ ಸತ್ಯಾಗ್ರಹದ ಮಾರ್ಗವನ್ನು ಅನುಸರಿಸಲು ನಿರ್ಧರಿಸಿದ್ದೇನೆ" ಎಂದು ಹೇಳಿದ್ದರು.

ಈ ನಿರ್ಧಾರವು "ಆತ್ಮಸಾಕ್ಷಿಯ" ವಿಷಯವಾಗಿದೆ ಎಂದು ಹೇಳಿದ್ದ ಅವರು, ಹೈಕೋರ್ಟ್ ನ್ಯಾಯಮೂರ್ತಿಗಳು ತನ್ನ ಅರ್ಜಿಯನ್ನು ವಜಾಗೊಳಿಸಿರುವುದನ್ನು ಪ್ರಶ್ನಿಸಿ ತಾವು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್