ದೇಶ

ಖೈಬರ್ ಪಖ್ತುಂಖ್ವಾ: 'ಶಾಂತಿ ರ‍್ಯಾಲಿ' ವೇಳೆ ಆತ್ಮಹತ್ಯಾ ಬಾಂಬ್ ದಾಳಿ; 13 ಸಾವು

ಸ್ವಾತ್ ಜಿಲ್ಲೆಯ ಪಟ್ಟಣದಲ್ಲಿ "ಶಾಂತಿ ರ‍್ಯಾಲಿ" ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟ ಆತ್ಮಹತ್ಯಾ ದಾಳಿಯಂತೆ ಕಂಡುಬಂದಿದೆ, ಆದರೆ ಅದರ ಬಗ್ಗೆ ತಕ್ಷಣದ ಅಧಿಕೃತ ದೃಢೀಕರಣವಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಖೈಬರ್ ಪಖ್ತುಂಖ್ವಾ: ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಇಂದು ಪಾಕಿಸ್ತಾನಿ ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಡೆದ ಸ್ಫೋಟದಲ್ಲಿ ಹದಿಮೂರು ಜನರು ಸಾವನ್ನಪ್ಪಿದ್ದು, 22 ಜನರು ಗಾಯಗೊಂಡಿದ್ದಾರೆ. ಸ್ಫೋಟದ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿವೆ.

ಸ್ವಾತ್ ಜಿಲ್ಲೆಯ ಪಟ್ಟಣದಲ್ಲಿ "ಶಾಂತಿ ರ‍್ಯಾಲಿ" ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟ ಆತ್ಮಹತ್ಯಾ ದಾಳಿಯಂತೆ ಕಂಡುಬಂದಿದೆ, ಆದರೆ ಅದರ ಬಗ್ಗೆ ತಕ್ಷಣದ ಅಧಿಕೃತ ದೃಢೀಕರಣವಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಸ್ಥಳೀಯ ಬುಡಕಟ್ಟು ಮಂಡಳಿ ಸ್ವಾತ್ ಅಮಾನ್ ಜಿರ್ಗಾ ಈ ರ‍್ಯಾಲಿಯನ್ನು ಆಯೋಜಿಸಿತ್ತು, ಇದರಲ್ಲಿ ಭಾಗವಹಿಸುವವರು ಘೋಷಣೆಗಳನ್ನು ಕೂಗುತ್ತಾ ಮತ್ತು ಕಳೆದ ಕೆಲವು ತಿಂಗಳುಗಳಿಂದ ಭದ್ರತಾ ಪರಿಸ್ಥಿತಿ ಹದಗೆಟ್ಟಿರುವ ಪ್ರದೇಶದಲ್ಲಿ ಶಾಂತಿ ನೆಲೆಸಬೇಕೆಂದು ಒತ್ತಾಯಿಸುವ ಫಲಕಗಳನ್ನು ಹಿಡಿದುಕೊಂಡು ಓಡಾಡುತ್ತಿದ್ದರು.

ರಕ್ಷಣಾ ತಂಡಗಳು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ದವು; ಪೊಲೀಸರು ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳು ಪ್ರದೇಶದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMC ಹೆಸರು, ಚಿಹ್ನೆ ಮುಟ್ಟುಗೋಲು: ಚುನಾವಣಾ ಆಯೋಗ ಆದೇಶಕ್ಕೆ ತೀವ್ರ ಆಕ್ರೋಶ; 'ಪ್ರತಿಭಟನೆಯೊಂದಿಗೆ' ಹೊಸ ಹೆಸರು, ಚಿಹ್ನೆ ಸಲ್ಲಿಸಿದ ಮಮತಾ ಬ್ಯಾನರ್ಜಿ!

TMC ಹೆಸರು, ಚಿಹ್ನೆ ಮುಟ್ಟುಗೋಲು: 'Vote chori, govt chori ಆಯ್ತು, ಈಗ ಪಾರ್ಟಿ ಚೋರಿ': ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಕಿಡಿ

ದಿಗ್ಬಂಧನ ಉಲ್ಲಂಘಿಸಿದ ಟ್ಯಾಂಕರ್‌ ಮೇಲೆ Iran ಭೀಕರ ದಾಳಿ: ಸಮುದ್ರ ಮಧ್ಯದಲ್ಲೇ ಹೊತ್ತಿ ಉರಿದ ಹಡಗು, Hormuz ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ..!

TMC ಪಕ್ಷದ ಹೆಸರು, ಚಿಹ್ನೆ ಫ್ರೀಜ್ ಮಾಡಿದ ಚುನಾವಣಾ ಆಯೋಗ: ಉಪಚುನಾವಣೆ ಹೊತ್ತಲ್ಲೇ ದೀದಿಗೆ ಶಾಕ್‌, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ..!

ಸ್ಥಳೀಯ ಚುನಾವಣೆಗಳಿಗೆ ಕಾಂಗ್ರೆಸ್‌ ರಣತಂತ್ರ: ಜಿಲ್ಲಾಧ್ಯಕ್ಷರ ಕಾರ್ಯಕ್ಷಮತೆ ಮೇಲೆ ಹೈಕಮಾಂಡ್‌ ಕಣ್ಣು, ಬೂತ್‌ನಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆಗೆ ಸೂಚನೆ..!