ಮೋಹನ್ ಭಾಗವತ್ 
ದೇಶ

ಜಂತರ್‌ ಮಂತರ್ ಪ್ರತಿಭಟನೆ ಎಫೆಕ್ಟ್‌: ಆಗಸ್ಟ್ 6 ರಂದು Gen Z, Gen ಆಲ್ಫಾ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ

ಪ್ರಕಟಣೆಯ ಪ್ರಕಾರ, ಮುಂಬೈನ ನೀತಾ ಮುಖೇಶ್ ಅಂಬಾನಿ ಕಲ್ಚರಲ್‌ ಸೆಂಟರ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ದೇಶದ 100ಕ್ಕೂ ಹೆಚ್ಚು ನಗರಗಳ 15ರಿಂದ 19 ವರ್ಷದೊಳಗಿನ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಮುಂಬೈ: ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ನೇತೃತ್ವದ ವಿದ್ಯಾರ್ಥಿಗಳ ಪ್ರತಿಭಟನೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿರುವ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆಗಸ್ಟ್ 6 ರಂದು ಜೆನ್ ಝಿ ಮತ್ತು ಜೆನ್ ಆಲ್ಫಾ ಜೊತೆ ಸಂವಾದ ನಡೆಸಲಿದ್ದಾರೆ.

ಪ್ರಕಟಣೆಯ ಪ್ರಕಾರ, ಮುಂಬೈನ ನೀತಾ ಮುಖೇಶ್ ಅಂಬಾನಿ ಕಲ್ಚರಲ್‌ ಸೆಂಟರ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ದೇಶದ 100ಕ್ಕೂ ಹೆಚ್ಚು ನಗರಗಳ 15ರಿಂದ 19 ವರ್ಷದೊಳಗಿನ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಭಾರತದ ಅಂತರರಾಷ್ಟ್ರೀಯ ಏಕೀಕರಣ ರಾಷ್ಟ್ರಗಳ ಚಳುವಳಿ(ಐಐಎಂಯುಎನ್) 15 ನೇ ವಾರ್ಷಿಕೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

"ನಾಯಕತ್ವ ಎಂದರೆ ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವುದಷ್ಟೇ ಅಲ್ಲ, ಅವರ ಮಾತುಗಳನ್ನು ಆಲಿಸುವುದೂ ಆಗಿದೆ. ಈ ಮಹತ್ವದ ಘಟ್ಟದಲ್ಲಿ ಇಂತಹ ಸಂವಾದ ಈಗ ಹಿಂದೆಂದಿಗಿಂತಲೂ ಹೆಚ್ಚು ಅಗತ್ಯವಾಗಿದೆ. ನಮ್ಮ ಆಹ್ವಾನವನ್ನು ಸ್ವೀಕರಿಸಿ ಈ ಸಮಾವೇಶಕ್ಕೆ ಆಗಮಿಸಲು ಸಮ್ಮತಿಸಿದ ಮೋಹನ್ ಭಾಗವತ್ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಐಐಎಂಯುಎನ್ ಸಂಸ್ಥಾಪಕ ರಿಷಭ್ ಶಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMC ಹೆಸರು, ಚಿಹ್ನೆ ಮುಟ್ಟುಗೋಲು: ಚುನಾವಣಾ ಆಯೋಗ ಆದೇಶಕ್ಕೆ ತೀವ್ರ ಆಕ್ರೋಶ; 'ಪ್ರತಿಭಟನೆಯೊಂದಿಗೆ' ಹೊಸ ಹೆಸರು, ಚಿಹ್ನೆ ಸಲ್ಲಿಸಿದ ಮಮತಾ ಬ್ಯಾನರ್ಜಿ!

ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿಥಾರಿ ಹತ್ಯಾಕಾಂಡದ ಆರೋಪಿ ಸುರೇಂದ್ರ ಕೋಲಿ ಹರಿದ್ವಾರದಲ್ಲಿ ಶವವಾಗಿ ಪತ್ತೆ!

TMC ಹೆಸರು, ಚಿಹ್ನೆ ಮುಟ್ಟುಗೋಲು: 'Vote chori, govt chori ಆಯ್ತು, ಈಗ ಪಾರ್ಟಿ ಚೋರಿ': ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಕಿಡಿ

ದಿಗ್ಬಂಧನ ಉಲ್ಲಂಘಿಸಿದ ಟ್ಯಾಂಕರ್‌ ಮೇಲೆ Iran ಭೀಕರ ದಾಳಿ: ಸಮುದ್ರ ಮಧ್ಯದಲ್ಲೇ ಹೊತ್ತಿ ಉರಿದ ಹಡಗು, Hormuz ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ..!

TMC ಪಕ್ಷದ ಹೆಸರು, ಚಿಹ್ನೆ ಫ್ರೀಜ್ ಮಾಡಿದ ಚುನಾವಣಾ ಆಯೋಗ: ಉಪಚುನಾವಣೆ ಹೊತ್ತಲ್ಲೇ ದೀದಿಗೆ ಶಾಕ್‌, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ..!