ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಸಿಪಿ ರಾಧಾಕೃಷ್ಣನ್. 
ದೇಶ

ಸಂಸತ್ತಿನಲ್ಲಿ ತೀವ್ರ ಗದ್ದಲ: ಅಮಿತ್ ಶಾ ಹೇಳಿಕೆಗೆ ವಿಪಕ್ಷಗಳ ಪಟ್ಟು, ಆಗಸ್ಟ್ 10ರವರೆಗೆ ಲೋಕಸಭೆ-ರಾಜ್ಯಸಭೆ ಕಲಾಪ ಮುಂದೂಡಿಕೆ..!

ಲೋಕಸಭೆಯಲ್ಲೂ ಇದೇ ವಿಚಾರವಾಗಿ ಗದ್ದಲ ಮುಂದುವರಿಯಿತು. ಅಮಿತ್ ಶಾ ಹೇಳಿಕೆಗೆ ಆಗ್ರಹಿಸಿದ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಿದರು. ರಾಮ ಮಂದಿರ ದೇಣಿಗೆ ಕಳವು ಆರೋಪದ ವಿಚಾರವನ್ನೂ ಪ್ರಸ್ತಾಪಿಸಿದರು.

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ, ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮ ಹಾಗೂ ಅಯೋಧ್ಯೆ ರಾಮ ಮಂದಿರದ ದೇಣಿಗೆ ಕಳವು ಆರೋಪಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಆಗ್ರಹಿಸಿ ಪ್ರತಿಪಕ್ಷಗಳು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಮತ್ತು ಲೋಕಸಭೆಯ ಕಲಾಪಗಳನ್ನು ಆಗಸ್ಟ್ 10ರವರೆಗೆ ಮುಂದೂಡಲಾಗಿದೆ

ರಾಜ್ಯಸಭೆಯಲ್ಲಿ ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷ ಸದಸ್ಯರು ಅಮಿತ್ ಶಾ ಸದನಕ್ಕೆ ಹಾಜರಾಗಿ, ಜುಲೈ 20ರಂದು ಸಂಸತ್‌ ಕಡೆಗೆ ಮೆರವಣಿಗೆ ನಡೆಸಿದ ನೀಟ್ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು. ಇದರಿಂದಾಗಿ ಮೊದಲಿಗೆ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು.

ಮಧ್ಯಾಹ್ನ ಕಲಾಪ ಪುನರಾರಂಭವಾದ ಬಳಿಕವೂ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಮುಂದುವರಿಸಿದರು.

ಇದೇ ವೇಳೆ ಅಯೋಧ್ಯೆ ರಾಮ ಮಂದಿರದ ದೇಣಿಗೆ ಕಳವು ಆರೋಪದ ವಿಚಾರವನ್ನೂ ಪ್ರಸ್ತಾಪಿಸಿದರು. ಸಭಾಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಅವರ ಮನವಿಗೂ ಸ್ಪಂದಿಸದ ಹಿನ್ನೆಲೆಯಲ್ಲಿ ಕಲಾಪವನ್ನು ದಿನಪೂರ್ತಿ ಮುಂದೂಡಲಾಯಿತು.

ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ನಡೆಯುತ್ತಿರುವ ಅಧಿವೇಶನದಲ್ಲಿ ಅಮಿತ್ ಶಾ ಅವರು ಮೇಲ್ಮನೆಗೆ ಏಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಗೃಹ ಸಚಿವರು ಇಡೀ ದಿನ ಸಂಸತ್‌ನಲ್ಲೇ ಇದ್ದರು ಎಂದು ತಿಳಿಸಿದರು.

ಯಾವ ಸಚಿವರು ಯಾವಾಗ ಸದನಕ್ಕೆ ಹಾಜರಾಗಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರ ಪ್ರತಿಪಕ್ಷಗಳಿಗೆ ಇಲ್ಲ ಎಂದು ಹೇಳಿದರು. ಪ್ರತಿಪಕ್ಷಗಳು ಘೋಷಣೆಗಳನ್ನು ಕೂಗಿ ಬಳಿಕ ಸದನದಿಂದ ಹೊರನಡೆಯುತ್ತಿವೆ ಎಂದು ಆರೋಪಿಸಿದರು.

ಗದ್ದಲದ ನಡುವೆಯೇ ಸಭಾಧ್ಯಕ್ಷರು ನಿಗದಿತ ಕಲಾಪಗಳನ್ನು ಮುಂದುವರಿಸಲು ಪ್ರಯತ್ನಿಸಿದರು. ಕೆಲ ಸದಸ್ಯರ ಶೂನ್ಯವೇಳೆ ಪ್ರಸ್ತಾಪಗಳು ಹಾಗೂ ದಾಖಲೆ ಮಂಡನೆ ಕಾರ್ಯಗಳು ನಡೆದವು. ಬಳಿಕ ಕಲಾಪವನ್ನು ಮುಂದೂಡಲಾಯಿತು.

ಲೋಕಸಭೆಯಲ್ಲೂ ಇದೇ ವಿಚಾರವಾಗಿ ಗದ್ದಲ ಮುಂದುವರಿಯಿತು. ಅಮಿತ್ ಶಾ ಹೇಳಿಕೆಗೆ ಆಗ್ರಹಿಸಿದ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಿದರು. ರಾಮ ಮಂದಿರ ದೇಣಿಗೆ ಕಳವು ಆರೋಪದ ವಿಚಾರವನ್ನೂ ಪ್ರಸ್ತಾಪಿಸಿದರು.

ಪ್ರತಿಭಟನೆ ನಡುವೆಯೇ ಲೋಕಸಭೆಯಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ (ತಿದ್ದುಪಡಿ) ಮಸೂದೆ, 2026 ಅನ್ನು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು. ವಿವಿಧ ಸಂಸದೀಯ ಸಮಿತಿಗಳ ವರದಿಗಳು ಹಾಗೂ ದಾಖಲೆಗಳನ್ನು ಮಂಡಿಸಲಾಯಿತು.

ಕಿರಣ್ ರಿಜಿಜು ಅವರು ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡು, ಅಮಿತ್ ಶಾ ಪ್ರತಿದಿನ ಸಂಸತ್‌ಗೆ ಆಗಮಿಸುತ್ತಿದ್ದು, ತಡ ಸಂಜೆವರೆಗೂ ಅಲ್ಲೇ ಇರುತ್ತಾರೆ ಎಂದು ಹೇಳಿದರು. ಯಾವ ಸಚಿವರು ಉತ್ತರ ನೀಡಬೇಕು ಎಂದು ಪ್ರತಿಪಕ್ಷಗಳು ನಿರ್ದೇಶಿಸಲು ಸಾಧ್ಯವಿಲ್ಲ ಎಂದರು.

ಲೋಕಸಭೆಯ ಅಧ್ಯಕ್ಷತೆ ವಹಿಸಿದ್ದ ದಿಲೀಪ್ ಸೈಕಿಯಾ ಅವರು, ಹಲವು ಬಾರಿ ಸದಸ್ಯರನ್ನು ತಮ್ಮ ಆಸನಗಳಿಗೆ ಮರಳುವಂತೆ ಮನವಿ ಮಾಡಿದರು. ಆದರೆ, ತೀವ್ರ ಗದ್ದಲ ಮುಂದುವರಿದ ಹಿನ್ನೆಲೆಯಲ್ಲಿ ಶೂನ್ಯವೇಳೆಯನ್ನು ಕೇವಲ 16 ನಿಮಿಷಗಳಲ್ಲೇ ಮುಂದೂಡಲಾಯಿತು. ಬಳಿಕ ಲೋಕಸಭೆಯ ಕಲಾಪವನ್ನೂ ದಿನಪೂರ್ತಿ ಮುಂದೂಡಲಾಯಿತು.

ಜುಲೈ 20ರಂದು ಆರಂಭವಾದ ಮುಂಗಾರು ಅಧಿವೇಶನದಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಸೇರಿದಂತೆ ಹಲವು ವಿಷಯಗಳಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಭಿನ್ನಾಭಿಪ್ರಾಯದಿಂದಾಗಿ ನಿರಂತರ ಗದ್ದಲ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಳ್ಳು ಸುದ್ದಿ ಬಿತ್ತರ ಆರೋಪ: NDTV, India Todayಗೆ ಉದಯನಿಧಿ ಶಾಕ್, 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್..!

'Islamic NATO' ಊಹಾಪೋಹಗಳಿಗೆ ಮತ್ತಷ್ಟು ಬಲ: ಹೊಸ ರಕ್ಷಣಾ ಒಪ್ಪಂದದತ್ತ ಟರ್ಕಿ-ಸೌದಿ-ಪಾಕಿಸ್ತಾನ, ಜಾಗತಿಕ ಮಟ್ಟದಲ್ಲಿ ಹೆಚ್ಚಿದ ಕುತೂಹಲ..!

ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ರೂ ವಂಚನೆ; ಪ್ರಶ್ನಿಸಿದ ಕನ್ನಡಿಗರಿಗೆ ಅಪಮಾನ, ಕೊನೆಗೂ ಕ್ಷಮೆ ಯಾಚನೆ! Video

'ಕಾವೇರಿ ನಮ್ಮ ಜೀವನಾಡಿ, ಈ ವಿಚಾರದಲ್ಲಿ ತುಚ್ಛ ರಾಜಕಾರಣ ಮಾಡಲು ಬಯಸಲ್ಲ: ತಮಿಳುನಾಡು ಸಿಎಂ ವಿಜಯ್..!

'ಭಾರತದ ಕಾನೂನು ಪಾಲಿಸುತ್ತಿದ್ದೀರಾ?': Metaಗೆ ಖಡಕ್ ಕ್ಲಾಸ್‌ ತೆಗೆದುಕೊಂಡ ಕೇಂದ್ರ ಸರ್ಕಾರ, ತೀವ್ರ ವಿಚಾರಣೆ