ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಭದ್ರತೆಗೆ ನಿಯೋಜಿಸಲಾಗಿದ್ದ ಮುಂಬೈ ಪೊಲೀಸ್ ಕಾನ್ಸ್‌ಟೇಬಲ್ ಕರ್ತವ್ಯದಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ.
ಮೃತರನ್ನು 41 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ. ಇದಕ್ಕಿದ್ದಂತೆ ಕುಸಿದು ಬಿದ್ದ ಅವರನ್ನು ಸಹ ಪೊಲೀಸರು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಾಗಲೇ ಅವರು ಮೃತಪಟ್ಟಿರಿವುದಾಗಿ ವೈದ್ಯರು ಘೋಷಿಸಿದ್ದಾರೆ. ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ಗೆ ಸಂಬಂಧಿಸಿದ ಬೆದರಿಕೆಗಳ ಕಾರಣ ಸಲ್ಮಾನ್ ಖಾನ್‌ಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
1990 ರ ದಶಕದಲ್ಲಿ ಕೃಷ್ಣಮೃಗವನ್ನು ಬೇಟೆಯಾಡಿದ ಆರೋಪದ ಮೇಲೆ ಬಿಷ್ಣೋಯ್ ಪದೇ ಪದೇ ಸಲ್ಮಾನ್ ಖಾನ್ ನನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ಬೆದರಿಕೆಗಳ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಅವರ ಮುಂಬೈನಲ್ಲಿರುವ ನಿವಾಸದ ಹೊರಗೆ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ.