ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ 
ದೇಶ

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಿಕ್ಷಣ ಶಾಲೆಗಳಿಗೆ ಹೊರಗಿನವರು, ಯೂಟ್ಯೂಬರ್‌ಗಳು ಮತ್ತು ‘ಸೋಷಿಯಲ್ ಮೀಡಿಯಾ ಚಾನೆಲ್‌ಗಳಿಗೆ ಸಂಬಂಧಿಸಿದ ವ್ಯಕ್ತಿಗಳ’ ಅನಧಿಕೃತ ಪ್ರವೇಶ..

ಲಖನೌ: ಮಹತ್ವದ ಬೆಳವಣಿಗೆಯಲ್ಲಿ ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿ ಬಾರದಂತೆ ಉತ್ತರ ಪ್ರದೇಶ ಸರ್ಕಾರ ನಿಷೇಧ ಹೇರಿದೆ.

ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಿಕ್ಷಣ ಶಾಲೆಗಳಿಗೆ ಹೊರಗಿನವರು, ಯೂಟ್ಯೂಬರ್‌ಗಳು ಮತ್ತು ‘ಸೋಷಿಯಲ್ ಮೀಡಿಯಾ ಚಾನೆಲ್‌ಗಳಿಗೆ ಸಂಬಂಧಿಸಿದ ವ್ಯಕ್ತಿಗಳ’ ಅನಧಿಕೃತ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಜಿಲ್ಲಾ ಮೂಲ ಶಿಕ್ಷಣಾಧಿಕಾರಿ ಮನೀಶ್ ಸಿಂಗ್ ಅವರು ಈ ಕುರಿತು ಶುಕ್ರವಾರ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಪ್ರಾಥಮಿಕ ಶಿಕ್ಷಣ ಶಾಲೆಗಳ ಆವರಣಕ್ಕೆ ಹೊರಗಿನವರು ಅನಧಿಕೃತವಾಗಿ ಪ್ರವೇಶಿಸುವುದನ್ನು ತಡೆಯುವ ಈ ಆದೇಶದ ಉದ್ದೇಶ, ಶಾಲೆಗಳಲ್ಲಿನ ಕಲಿಕೆಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳುವುದು ಹಾಗೂ ಶಿಕ್ಷಕ ವೃತ್ತಿಯ ಘನತೆಯನ್ನು ಕಾಪಾಡುವುದಾಗಿದೆ ಎಂದು ಸಿಂಗ್ ಹೇಳಿದ್ದಾರೆ.

“ನನ್ನಿಂದ ಅಥವಾ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ಯಾವುದೇ ಹೊರಗಿನ ವ್ಯಕ್ತಿ, ಯೂಟ್ಯೂಬರ್ ಅಥವಾ ಸೋಷಿಯಲ್ ಮೀಡಿಯಾ ಚಾನೆಲ್‌ಗೆ ಸಂಬಂಧಿಸಿದ ವ್ಯಕ್ತಿ ಶಾಲಾ ಆವರಣ ಪ್ರವೇಶಿಸುವಂತಿಲ್ಲ. ಅಲ್ಲದೆ ಫೋಟೋ ತೆಗೆಯುವುದು ಅಥವಾ ವಿಡಿಯೋಗ್ರಫಿ ನಡೆಸುವುದಕ್ಕೂ ಅವಕಾಶವಿಲ್ಲ” ಎಂದು ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಇದೇ ರೀತಿಯ ಆದೇಶಗಳನ್ನು ಇತರ ಹಲವು ಜಿಲ್ಲೆಗಳಲ್ಲೂ ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕಾರಣವೇನು?

ಬಲಿಯಾ ಜಿಲ್ಲೆಯ ಬೈರಿಯಾ ಪ್ರದೇಶದಲ್ಲಿ ನಡೆದ ಘಟನೆಯೊಂದರ ಕೆಲವೇ ದಿನಗಳ ಬಳಿಕ ಈ ನಿರ್ದೇಶನ ಹೊರಬಿದ್ದಿದೆ. ಶಾಲೆಯೊಂದಕ್ಕೆ ಶಿಕ್ಷಕರೊಬ್ಬರು ತಡವಾಗಿ ಆಗಮಿಸುತ್ತಿರುವುದನ್ನು ತೋರಿಸುವ ವಿಡಿಯೋವನ್ನು ಸೋಷಿಯಲ್ ಮೀಡಿಯಾ ಚಾನೆಲ್‌ವೊಂದು ಹಂಚಿಕೊಂಡಿತ್ತು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!