ಆಯುಷ್ಮಾನ್ ಭಾರತ್ ಯೋಜನೆ Online Desk
ದೇಶ

ಉಚಿತ ಚಿಕಿತ್ಸೆ ಹೆಸರಲ್ಲಿ ಮೋಸ! ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ವಂಚಿಸುತ್ತಿದ 2,359 ಆಸ್ಪತ್ರೆಗಳು ಬ್ಲ್ಯಾಕ್‌ಲಿಸ್ಟ್; ಕೋಟ್ಯಂತರ ರೂಪಾಯಿ ದಂಡ!

ಬಡಜನರ ಆರೋಗ್ಯ ರಕ್ಷಣೆಗಾಗಿ ಜಾರಿಗೆ ತಂದ ಉಚಿತ ಯೋಜನೆಯಲ್ಲೂ ಕೆಲ ಆಸ್ಪತ್ರೆಗಳು ವಂಚಿಸುತ್ತಿದ್ದ ಪ್ರಕರಣಗಳು ಬಯಲಿಗೆ ಬಂದಿವೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಯೋಜನೆಯ ದುರ್ಬಳಕೆ ತಡೆಯಲು ಸಾಲು ಸಾಲು ಆಸ್ಪತ್ರೆಗಳು ಬ್ಲ್ಯಾಕ್‌ಲಿಸ್ಟ್! ಆ ಕುರಿತ ವರದಿ ಇಲ್ಲಿದೆ:

ನವದೆಹಲಿ: ಬಡ ಹಾಗೂ ಹಿಂದುಳಿದ ಕುಟುಂಬಗಳಿಗೆ ವಾರ್ಷಿಕವಾಗಿ ರೂ. 5 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಲ್ಲಿ (PM-JAY) ನಿಯಮಗಳನ್ನು ಉಲ್ಲಂಘಿಸಿದ ಮತ್ತು ರೋಗಿಗಳ ಹೆಸರಿನಲ್ಲಿ ವಂಚನೆ ಎಸಗಿದ ಕಾರಣಕ್ಕಾಗಿ ದೇಶಾದ್ಯಂತ 2,359 ಆಸ್ಪತ್ರೆಗಳನ್ನು ಯೋಜನೆಯ ಪಟ್ಟಿಯಿಂದ ಕೈಬಿಡಲಾಗಿದೆ. ಜೊತೆಗೆ, 1,200ಕ್ಕೂ ಹೆಚ್ಚು ಆಸ್ಪತ್ರೆಗಳನ್ನು ಅಮಾನತು ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

ಲೋಕಸಭೆಯಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಹಂಚಿಕೊಂಡ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು, ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ಮತ್ತು ರೋಗಿಗಳ ಹೆಸರಿನಲ್ಲಿ ವಂಚನೆ ಎಸಗಿದ ಕಾರಣಕ್ಕಾಗಿ ದೇಶಾದ್ಯಂತ 2,359 ಆಸ್ಪತ್ರೆಗಳನ್ನು ಯೋಜನೆಯಿಂದ ಹೊರಗಿಡಲಾಗಿದ್ದು, 1,200ಕ್ಕೂ ಹೆಚ್ಚು ಆಸ್ಪತ್ರೆಗಳನ್ನು ಅಮಾನತು ಮಾಡಲಾಗಿದೆ. ಜೊತೆಗೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆಸ್ಪತ್ರೆಗಳ ಮೇಲೆ ಒಟ್ಟು ₹328.49 ಕೋಟಿ ದಂಡ ವಿಧಿಸಲಾಗಿದ್ದು, 29 FIR ದಾಖಲಿಸಲಾಗಿದೆ ಎಂದು ತಿಳಿಸಿದರು.

ಮುಂದುವರೆದು, ನ್ಯಾಷನಲ್ ಹೆಲ್ತ್ ಅಥಾರಿಟಿ ಅಡಿಯಲ್ಲಿರುವ ಆಂಟಿ-ಫ್ರಾಡ್ ಯುನಿಟ್, ವಂಚನೆಗಳನ್ನು ಪತ್ತೆಹಚ್ಚಲು ಕೃತಕ ಬುದ್ಧಿಮತ್ತೆ ಮತ್ತು ಮೆಷಿನ್ ಲರ್ನಿಂಗ್ ತಂತ್ರಜ್ಞಾನವನ್ನು ಬಳಸುತ್ತಿದೆ. ಅದರಂತೆ, ಕ್ಲೈಮ್ ಸಲ್ಲಿಕೆಯಾದ 24 ಗಂಟೆಗಳ ಒಳಗೆ ನಕಲಿ ಕ್ಲೈಮ್‌ಗಳು, ಅನಗತ್ಯ ವೈದ್ಯಕೀಯ ಚಿಕಿತ್ಸೆಗಳು ಅಥವಾ ರೋಗಿಗಳ ಗುರುತಿನ ದುರ್ಬಳಕೆಯನ್ನು ಈ ತಂತ್ರಜ್ಞಾನ ಗುರುತಿಸುತ್ತದೆ. ಇದರಿಂದಾಗಿ ಈವರೆಗೆ ಸುಮಾರು ₹676.14 ಕೋಟಿ ನಷ್ಟವನ್ನು ತಡೆಯಲಾಗಿದೆ.

ಏತನ್ಮಧ್ಯೆ, ವಂಚನೆ ಮಾಡುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದರೂ, ಯೋಜನೆಯ ವ್ಯಾಪ್ತಿ ವಿಸ್ತರಿಸುತ್ತಲೇ ಇದೆ. ಅದರಂತೆ, ದೇಶದಲ್ಲಿ ಸದ್ಯ 38,437 ಆಸ್ಪತ್ರೆಗಳು ಆಯುಷ್ಮಾನ್ ಯೋಜನೆಯಡಿ ನೋಂದಾಯಿತವಾಗಿವೆ (ಇದರಲ್ಲಿ 20,363 ಸರ್ಕಾರಿ ಮತ್ತು 18,074 ಖಾಸಗಿ ಆಸ್ಪತ್ರೆಗಳು ಸೇರಿವೆ). ಜೊತೆಗೆ ಕಳೆದ ಆರ್ಥಿಕ ವರ್ಷದಲ್ಲಿ (2025-26) 3.75 ಕೋಟಿ ಹೊಸ ಆಯುಷ್ಮಾನ್ ಕಾರ್ಡ್‌ಗಳನ್ನು ವಿತರಿಸಲಾಗಿದ್ದು, 2.74 ಕೋಟಿ ಜನ ಆಸ್ಪತ್ರೆಗೆ ದಾಖಲಾಗಿ ಉಚಿತ ಚಿಕಿತ್ಸೆ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ