ಅಭಿಷೇಕ್ ಪೊರೆಲ್ 
ದೇಶ

ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆದರಿಕೆ ಆರೋಪ: ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ ಅಭಿಷೇಕ್ ಪೊರೆಲ್ ಬಂಧನ!

ವೈದ್ಯಕೀಯ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪಶ್ಚಿಮ ಬಂಗಾಳದ ಕ್ರಿಕೆಟಿಗನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೂಗ್ಲಿ ಗ್ರಾಮೀಣ ಪೊಲೀಸ್ ಎಸ್ಪಿ ಕುನ್ವರ್ ಭೂಷಣ್ ಸಿಂಗ್ ಅವರು ತಿಳಿಸಿದ್ದಾರೆ.

ಕೋಲ್ಕತ್ತಾ: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ, ಕ್ರಿಮಿನಲ್ ಬೆದರಿಕೆ ಹಾಕಿದ ಮತ್ತು ಇತರ ಗಂಭೀರ ಆರೋಪಗಳ ಮೇಲೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಬ್ಯಾಟರ್ ಅಭಿಷೇಕ್ ಪೊರೆಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪಶ್ಚಿಮ ಬಂಗಾಳದ ಕ್ರಿಕೆಟಿಗನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೂಗ್ಲಿ ಗ್ರಾಮೀಣ ಪೊಲೀಸ್ ಎಸ್ಪಿ ಕುನ್ವರ್ ಭೂಷಣ್ ಸಿಂಗ್ ಅವರು ತಿಳಿಸಿದ್ದಾರೆ.

ಜೂನ್ ಆರಂಭದಲ್ಲಿ, ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ, ಲೈಂಗಿಕ ಸಂಬಂಧ ಹೊಂದಿದ ಮತ್ತು ಹಲ್ಲೆ ನಡೆಸಿದ ಆರೋಪ ಐಪಿಎಲ್ ಕ್ರಿಕೆಟಿಗನ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಅತ್ಯಾಚಾರ ಹಾಗೂ ಬೆದರಿಕೆ ಪ್ರಕರಣ ಸಂಬಂಧ ಇತ್ತೀಚಿಗಷ್ಟೇ ಕೋಲ್ಕತ್ತಾ ಹೈಕೋರ್ಟ್, ಶೀಘ್ರವೇ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅವರನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿನಿ ಆರೋಪವೇನು?

ನಾನು ಮತ್ತು ಪೊರೆಲ್ ಕಳೆದ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದೆವು. ಕಳೆದ ವರ್ಷ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯಗಳು ಉಂಟಾಗಿತ್ತು. ಇದಾದ ನಂತರ ಪೊರೆಲ್ ಅವರು ನನ್ನಿಂದ ದೂರ ಉಳಿಯಲು ಪ್ರಾರಂಭಿಸಿದರು. ಮೊದಲು ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಆದರೀಗ ಅದಕ್ಕೆ ಒಪ್ಪುತ್ತಿಲ್ಲ. ಮದುವೆಯಾಗುವುದಾಗಿ ತಿಳಿಸಿ ನನ್ನೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದರು. ಅಲ್ಲದೇ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಅತ್ಯಾಚಾರ, ಹಲ್ಲೆ, ಕ್ರಿಮಿನಲ್ ಬೆದರಿಕೆ ಸೇರಿದಂತೆ ಹಲವು ಆರೋಪಗಳಡಿ ಪ್ರಕರಣ ದಾಖಲಾಗಿದೆ. ಇನ್ನೊಂದೆಡೆ, ತಮ್ಮ ವಿರುದ್ಧ ಕೇಳಿಬಂದಿರುವ ಎಲ್ಲಾ ಆರೋಪಗಳನ್ನು ಅಭಿಷೇಕ್ ಪೊರೆಲ್ ತಳ್ಳಿಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇವ್ರು ಊರುಬಿಟ್ಟು ಊರಿಗೆ ಬಂದು ಆಸ್ತಿ ಮಾಡಬಹುದು, ನಾವು ಮಾಡ್ಬಾರ್ದ? ಪಾರ್ಟ್-2ನಲ್ಲಿ ಏನಿದೆ ಅಂತ ಗೊತ್ತು: HDK ಆರೋಪಕ್ಕೆ CM ಡಿಕೆಶಿ ತಿರುಗೇಟು

'ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡ'; ಟರ್ಕಿಗೆ ಭಾರತ ಖಡಕ್ ಎಚ್ಚರಿಕೆ, ಆಗಿದ್ದೇನು?

11 ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನವವಿವಾಹಿತೆ ಕೆರೆಯಲ್ಲಿ ಶವವಾಗಿ ಪತ್ತೆ, ಪೊಲೀಸ್ ತನಿಖೆ!

ಬರದಿಂದ ಕೆಂಗೆಟ್ಟ ಕರ್ನಾಟಕಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: ಅಕ್ಟೋಬರ್ 3 ರಿಂದ ಕೇಂದ್ರ ತಂಡದ ಸಮೀಕ್ಷೆ- ಎಚ್.ಡಿ ಕುಮಾರಸ್ವಾಮಿ

ರಷ್ಯಾಗೆ ಮರ್ಮಾಘಾತ; ಪರಮಾಣು ಸಾಮರ್ಥ್ಯದ ಯುದ್ಧವಿಮಾನ ಪತನ-ಬೆಂಕಿಗಾಹುತಿ, 6 ಮಂದಿ ಸಜೀವ ದಹನ, ಓರ್ವ ಪಾರು! Video