ಜೈರಾಮ್ ರಮೇಶ್ 
ದೇಶ

Census 2027: 40 ಪ್ರಶ್ನೆಗಳು ಪ್ರಕಟ; ಉದ್ದೇಶವೇ ಶಂಕಾಸ್ಪದ; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!

ದೇಶದ ಜನಸಂಖ್ಯೆಯ ಸಮಗ್ರ ಮಾಹಿತಿ ಸಂಗ್ರಹಿಸುವ ಜನಗಣತಿ 2027ರ ಎರಡನೇ ಹಂತಕ್ಕೆ ಕೇಂದ್ರ ಸರ್ಕಾರ 40 ಪ್ರಶ್ನಾವಳಿಯನ್ನು ಶುಕ್ರವಾರ ಅಧಿಸೂಚನೆ ಮೂಲಕ ಪ್ರಕಟಿಸಿದೆ.

ನವದೆಹಲಿ: ಜಾತಿ ಗಣತಿ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ. ಪ್ರತಿಕ್ರಿಯೆ ನೀಡಿದವರು ತಿಳಿಸಿದ ಜಾತಿಗಳ ವಿವರವನ್ನು ದಾಖಲಿಸಿಕೊಳ್ಳದಿರುವುದು ಸರ್ಕಾರದ ಉದ್ದೇಶದ ಬಗ್ಗೆ ಗಂಭೀರ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದೆ.

ದೇಶದ ಜನಸಂಖ್ಯೆಯ ಸಮಗ್ರ ಮಾಹಿತಿ ಸಂಗ್ರಹಿಸುವ ಜನಗಣತಿ 2027ರ ಎರಡನೇ ಹಂತಕ್ಕೆ ಕೇಂದ್ರ ಸರ್ಕಾರ 40 ಪ್ರಶ್ನಾವಳಿಯನ್ನು ಶುಕ್ರವಾರ ಅಧಿಸೂಚನೆ ಮೂಲಕ ಪ್ರಕಟಿಸಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST)ಗಳ ಮಾಹಿತಿಯ ಜೊತೆಗೆ ಎಲ್ಲಾ ಜನರಿಂದ ಜಾತಿ ಕುರಿತ ಮುಕ್ತ ಪ್ರಶ್ನೆಯ ಮೂಲಕ ಮಾಹಿತಿ ಪಡೆಯಲಾಗುತ್ತದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, ಈ ಹಿಂದೆ ತೆಲಂಗಾಣ ಮತ್ತು ಬಿಹಾರದಲ್ಲಿ ನಡೆದ ಸಮೀಕ್ಷೆ ವೇಳೆ ಜಾತಿಗಳ ಪಟ್ಟಿ ಹಾಗೂ ಪ್ರಶ್ನಾವಳಿ ಸಿದ್ಧಪಡಿಸಲಾಗಿತ್ತು. ಜನ ನೀಡಿದ ಉತ್ತರವನ್ನು ಗುರುತು ಮಾಡಲಾಗುತ್ತಿತ್ತು.

ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ಕೂಡಾ ಗಣತಿ ನಡೆಸಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ ಎಂದು ಹೇಳಿದ್ದಾರೆ.

ಜಾತಿ ಗಣತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಖರ್ಗೆ ಅವರು ಕಳೆದ ವರ್ಷ ಮೇ 5 ರಂದು ಬರೆದಿದ್ದ ಪತ್ರದ ಪ್ರತಿಯನ್ನು ಜೈರಾಮ್ ರಮೇಶ್ ತಮ್ಮ ಪೋಸ್ಟ್ ನೊಂದಿಗೆ ಹಂಚಿಕೊಂಡಿದ್ದಾರೆ.

ಜಾತಿ ಗಣತಿ ವಿಚಾರವಾಗಿ ಎಲ್ಲ ರಾಜಕೀಯ ಪಕ್ಷಗಳೊಂದಿಗೆ ಚರ್ಚೆ ನಡೆಸಬೇಕು. ಗಣತಿಗೆ ಸಂಬಂಧಿಸಿದಂತೆ ಸಮರ್ಪಕ ಪ್ರಶ್ನಾವಳಿ ಸಿದ್ಧಪಡಿಸಬೇಕು. ಜಾತಿವಾರು ಜನಸಂಖ್ಯೆಯ ಮಾಹಿತಿ ಸಂಗ್ರಹವಷ್ಟೇ ಗಣತಿ ಉದ್ದೇಶವಾಗಿರದೆ, ಸಾಮಾಜಿಕ ಆರ್ಥಿಕ ಸಾಧನೆಯೇ ಗುರಿಯಾಗಿರಬೇಕು ಎಂದು ಖರ್ಗೆ ಪತ್ರದಲ್ಲಿ ಪ್ರತಿಪಾದಿಸಿದ್ದರು. ಈ ಸಲಹೆಗಲನ್ನು ಕೇಂದ್ರ ಸರ್ಕಾರ ಕಡೆಗಣಿಸಿದೆ ಎಂದು ಅವರು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

'ಅಪ್ಪಿಕೋ' ವಿದೇಶಾಂಗ ನೀತಿ: ಮೋದಿ ಕೆಣಕಿದ ರಾಹುಲ್ ಗಾಂಧಿ; ಇಂದಿರಾ ಗಾಂಧಿ ವಿಡಿಯೋ ಮೂಲಕ ಬಿಜೆಪಿ ತಿರುಗೇಟು!

ಇಂಡಿಗೋ ವಿಮಾನ ರದ್ದು: ತಾಳ್ಮೆ ಕಳೆದುಕೊಂಡ ಮಹಿಳೆ, ಕೈಗೆ ಸಿಕ್ಕಿದ್ದನ್ನು ಎಸೆದು ರಂಪಾಟ! 49,000 ರೂ. ಮೌಲ್ಯದ ವಸ್ತು ಹಾನಿ, Video

ನಮ್ಮನ್ನು ಭಿಕ್ಷೆ ಬೇಡುವಂತೆ ಮಾಡಬೇಡಿ: ಬೆಂಗಳೂರಿನಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ ನಟ ಪ್ರಕಾಶ್ ರಾಜ್ ಆಕ್ರೋಶ!

ಆತ್ಮನಿರ್ಭರ ಭಾರತಕ್ಕೆ ಮತ್ತೊಂದು ಗರಿ: ದೇಶೀಯವಾಗಿ ಫೈಟರ್ ಜೆಟ್ ಎಂಜಿನ್ ನಿರ್ಮಿಸಲಿವೆ ರಿಲಯನ್ಸ್-ರೋಲ್ಸ್ ರಾಯ್ಸ್!