ರಾಹುಲ್ ಗಾಂಧಿ - ಸಾವರ್ಕರ್ 
ದೇಶ

ಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸಾವರ್ಕರ್ ವಿರುದ್ಧ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ನವದೆಹಲಿ: ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧದ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಬಿಗ್ ರಿಲೀಫ್ ನೀಡಿದೆ.

ಸಾವರ್ಕರ್ ವಿರುದ್ಧ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಪ್ರಕರಣ ರದ್ದು ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಶೀಲ್ ನಾಗು ಅವರ ಪೀಠ, ಈ ವಿಷಯದಲ್ಲಿ ಅಗತ್ಯವಾದ ಅನುಮತಿಯನ್ನು ಪಡೆಯಲಾಗಿಲ್ಲ ಎಂದು ಹೇಳಿ, ಕಾನೂನುಬದ್ಧ ಅನುಮತಿಯ ಕೊರತೆಯನ್ನು ಎತ್ತಿಹಿಡಿದಿದೆ.

ಇಂತಹ ಪ್ರಕರಣಗಳಲ್ಲಿ ಕಾನೂನಿನ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಸರ್ಕಾರದ ಪೂರ್ವಾನುಮತಿ (Sanction) ಅಗತ್ಯವಿರುತ್ತದೆ. ಆದರೆ ಉತ್ತರ ಪ್ರದೇಶ ಸರ್ಕಾರದಿಂದ ಯಾವುದೇ ಅನುಮತಿ ಸಿಕ್ಕಿಲ್ಲ. ಅನುಮತಿ ಇಲ್ಲ ಎಂದಮೇಲೆ ಪ್ರಕರಣ ಅಲ್ಲಿಗೇ ಮುಕ್ತಾಯವಾಗುತ್ತದೆ. ನೀವು ಕಾನೂನನ್ನು ಪಾಲಿಸಲೇಬೇಕು ಎಂದು ನ್ಯಾಯಮೂರ್ತಿ ದತ್ತಾ ರಾಜ್ಯ ಸರ್ಕಾರ ಮತ್ತು ದೂರುದಾರರಿಗೆ ಸ್ಪಷ್ಟಪಡಿಸಿದರು.

ಮ್ಯಾಜಿಸ್ಟ್ರೇಟ್ ಕೋರ್ಟ್ ಜಾರಿ ಮಾಡಿದ್ದ ಸಮನ್ಸ್ ಅನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಪ್ರಕರಣದ ಹಿನ್ನೆಲೆ

2022 ರ ನವೆಂಬರ್ 17 ರಂದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಸಾವರ್ಕರ್ ಅವರನ್ನು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಿ ವಕೀಲ ನೃಪೇಂದ್ರ ಪಾಂಡೆ ಎಂಬುವವರು ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ; ‘ಸರ್ಕಾರದ ನೀತಿಯನ್ನು ಪ್ರಶ್ನಿಸಲು ನೀವ್ಯಾರು?’: ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ

ವಿದೇಶದಲ್ಲಿ ಭಾರತೀಯರ ಮೇಲೆ ದಾಳಿ ಹೆಚ್ಚಳ: ಅಗ್ರಸ್ಥಾನದಲ್ಲಿ ಅಮೆರಿಕ, ತದನಂತರದ ಸ್ಥಾನದಲ್ಲಿ ಯುಎಇ, ಯುಕೆ, ಕೆನಡಾ-MEA

Census 2027: ಜಾತಿ, ಕೋವಿಡ್ ಲಸಿಕೆ, ಆಧಾರ್‌ ಸೇರಿ 40 ಪ್ರಶ್ನೆಗಳಿಗೆ ಉತ್ತರಿಸಬೇಕು! ಜನಗಣತಿ ವೇಳೆ ಯಾವೆಲ್ಲಾ ಐಡಿಗಳು ಬೇಕು ಗೊತ್ತಾ?

‘ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ವಿಚಾರ’: ಬಾರ್ ಕೌನ್ಸಿಲ್‌ಗೆ ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯಕಾಂತ್ ತರಾಟೆ

80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪ್ರಧಾನ ಕಾರ್ಯಕ್ರಮ, ಬಿಗಿ ಭದ್ರತೆ, ಏನೆಲ್ಲಾ ನಿಷೇಧ!