ರಾಹುಲ್ ಗಾಂಧಿ - ಮಲ್ಲಿಕಾರ್ಜುನ ಖರ್ಗೆ 
ದೇಶ

ಸತತ 2ನೇ ವರ್ಷವೂ ಕೆಂಪುಕೋಟೆ ಸ್ವಾತಂತ್ರ್ಯೋತ್ಸವಕ್ಕೆ ಹಾಜರಾಗದ ಮಲ್ಲಿಕಾರ್ಜುನ ಖರ್ಗೆ-ರಾಹುಲ್ ಗಾಂಧಿ!

ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೆಂಪುಕೋಟೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಧಿಕೃತ ಕಾರ್ಯಕ್ರಮಕ್ಕೆ ಸತತ ಎರಡನೇ ವರ್ಷವೂ ಗೈರಾಗಿದ್ದಾರೆ.

ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

2024ರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕರಾಗಿದ್ದು, ಕ್ಯಾಬಿನೆಟ್ ಸಚಿವರ ದರ್ಜೆ ಹೊಂದಿರುವ ರಾಹುಲ್ ಗಾಂಧಿ ಅವರಿಗೆ ಸಂಪ್ರದಾಯ ಮತ್ತು ಶಿಷ್ಟಾಚಾರವನ್ನು ಬದಿಗೊತ್ತಿ ಹಿಂದಿನ ಸಾಲಿನಲ್ಲಿ ಆಸನ ನಿಗದಿಪಡಿಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

ಕಾರ್ಯಕ್ರಮವನ್ನು ಆಯೋಜಿಸಿದ್ದ ರಕ್ಷಣಾ ಸಚಿವಾಲಯ, ಒಲಿಂಪಿಕ್ಸ್ ಕ್ರೀಡಾಪಟಗಳಿಗೆ ಆವರಣದಲ್ಲಿ ಸೂಕ್ತ ಆಸನ ವ್ಯವಸ್ಥೆ ಕಲ್ಪಿಸಲು ಈ ಬದಲಾವಣೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿತ್ತು. ಕಾಂಗ್ರೆಸ್‌ ಸಂಸದರಿಗೆ ಈ ರೀತಿ ಆಸನ ನೀಡಿರುವುದು ಜನತೆಗೆ ಎಸಗಿದ ಅಪಮಾನ ಎಂದು ವಿರೋಧ ಪಕ್ಷಗಳು ಖಂಡಿಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶುಭಮನ್ ಗಿಲ್ 2ನೇ ಏಕದಿನ ದ್ವಿಶತಕ; ರೋಹಿತ್ ಶರ್ಮಾ ಬಳಿಕ ಐತಿಹಾಸಿಕ ದಾಖಲೆ!

'ಅಪಾಯಕಾರಿ ಹಾದಿ': ರಷ್ಯಾದ ಸೇನೆಗೆ ಸೇರದಂತೆ ಭಾರತೀಯರಿಗೆ ಸರ್ಕಾರದ ಎಚ್ಚರಿಕೆ

ಫ್ಲೈದುಬೈ ವಿಮಾನದಲ್ಲಿ ಪೈಲಟ್‌ಗಳ ರಕ್ತಸಿಕ್ತ ಮಾರಮಾರಿ: ಚಾಕುವಿನಿಂದ ಇರಿದ ಸಹೋದ್ಯೋಗಿಯನ್ನು ಎದುರಿಸಿ ಹಿಮ್ಮೆಟ್ಟಿಸಿದ್ದು ಭಾರತೀಯ ಪೈಲಟ್!

2001ರ ನಂತರ ಭಾರತದಲ್ಲಿ 4ನೇ ಅತ್ಯಂತ ಕಡಿಮೆ ಮಟ್ಟದ ಮುಂಗಾರು ಮಳೆ: ಐಎಂಡಿ

Video: ಆಕಾಶದಲ್ಲೇ ಪೈಲಟ್‌ಗಳ ರಕ್ತಸಿಕ್ತ ಮಾರಮಾರಿ; ಇಸ್ರೇಲ್‌ಗೆ ತೆರಳುತ್ತಿದ್ದ ವಿಮಾನ ಸೌದಿಯಲ್ಲಿ ತುರ್ತು ಲ್ಯಾಂಡಿಂಗ್; ತಪ್ಪಿದ ದೊಡ್ಡ ದುರಂತ!