ನಟಿ ತ್ರಿಶಾ ಕೃಷ್ಣನ್ ಮತ್ತು ವಿಜಯ್ ಪೋಷಕರು 
ದೇಶ

ತಮಿಳುನಾಡು ಸಿಎಂ ಧ್ವಜಾರೋಹಣ: ಮುಂದಿನ ಸಾಲಿನಲ್ಲಿ ವಿಜಯ್ ಪೋಷಕರ ಪಕ್ಕದಲ್ಲೇ ಕುಳಿತ ತ್ರಿಶಾ ಕೃಷ್ಣನ್!

ಮೇ ತಿಂಗಳಲ್ಲಿ ನಡೆದ ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಇದೇ ರೀತಿಯ ದೃಶ್ಯವೊಂದು ಕಂಡುಬಂದಿತ್ತು; ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತ್ರಿಶಾ ಮೊದಲ ಸಾಲಿನಲ್ಲಿ ಆಸೀನರಾಗಿದ್ದರು.

ನಟಿ ತ್ರಿಶಾ ಕೃಷ್ಣನ್ ಶುಕ್ರವಾರ ಚೆನ್ನೈನ ಫೋರ್ಟ್ ಸೇಂಟ್ ಜಾರ್ಜ್‌ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ್ದರು. ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರ ಧ್ವಜಾರೋಹಣ ಸಮಾರಂಭದ ವೇಳೆ ಅವರು ಮುಂಭಾಗದ ಸಾಲಿನಲ್ಲಿ ಆಸೀನರಾಗಿದ್ದರು. ಈ ಕಾರ್ಯಕ್ರಮದ ಹಲವು ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಿಎಂ ವಿಜಯ್ ಆಗಮನಕ್ಕು ಮುನ್ನವೇ ಸಮಾರಂಭಕ್ಕೆ ಆಗಮಿಸಿದ್ದ ತ್ರಿಶಾ ಹಳದಿ ಸೀರೆ ಧರಿಸಿ ಮತ್ತು ಮಲ್ಲಿಗೆ ಹೂವನ್ನು ಮುಡಿದು ಕುಳಿತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮತ್ತೊಂದು ದೃಶ್ಯದಲ್ಲಿ, ತಮ್ಮ ತಾಯಿ ಉಮಾ ಕೃಷ್ಣನ್ ಅವರೊಂದಿಗೆ ಆಗಮಿಸಿದ 'ಲಿಯೋ' ಚಿತ್ರದ ನಟಿ, ವಿಜಯ್ ಅವರ ಪೋಷಕರಾದ ಎಸ್.ಎ. ಚಂದ್ರಶೇಖರ್ ಮತ್ತು ಶೋಭಾ ಚಂದ್ರಶೇಖರ್ ಅವರ ಪಕ್ಕದಲ್ಲಿ ಕುಳಿತಿದ್ದು ಕಂಡುಬಂತು. ಪರೇಡ್ ವೇಳೆ ಅವರು ವಿಜಯ್ ಅವರಿಗೆ ವಂದನೆಯನ್ನೂ ಸಲ್ಲಿಸಿದರು.

ಮೇ ತಿಂಗಳಲ್ಲಿ ನಡೆದ ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಇದೇ ರೀತಿಯ ದೃಶ್ಯವೊಂದು ಕಂಡುಬಂದಿತ್ತು; ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತ್ರಿಶಾ ಮೊದಲ ಸಾಲಿನಲ್ಲಿ ಆಸೀನರಾಗಿದ್ದರು. ತಮ್ಮ ಆಸನವನ್ನು ಅಲಂಕರಿಸುವ ಮುನ್ನ ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ಅವರನ್ನು ಆತ್ಮೀಯವಾಗಿ ಅಪ್ಪಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.

ಇದೇ ವೇಳೆ, ಇತ್ತೀಚಿನ ತಿಂಗಳುಗಳಲ್ಲಿ ವಿಜಯ್ ಮತ್ತು ತ್ರಿಶಾ ತಮ್ಮ ವೈಯಕ್ತಿಕ ಸಂಬಂಧದ ಕುರಿತಾದ ವಿಚಾರಗಳಿಗೆ ವ್ಯಾಪಕವಾಗಿ ಸುದ್ದಿಯಾಗಿದ್ದಾರೆ. ಇವರಿಬ್ಬರೂ ಅಂತಹ ವದಂತಿಗಳಿಗೆ ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಮ್ ನಡುವಿನ ವಿಚ್ಛೇದನ ಪ್ರಕ್ರಿಯೆಯ ವಿವರಗಳು ಸಾರ್ವಜನಿಕವಾಗಿ ಬಹಿರಂಗಗೊಂಡ ನಂತರ, ಇವರಿಬ್ಬರ ವಿಚಾರಗಳು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

PM Modi's I-Day speech: 'ನಮ್ಮ ಕನಸು, ಸಂಕಲ್ಪಗಳು ದೊಡ್ಡದಾಗಿರಬೇಕು; 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಧಾನಿ ಮೋದಿ-Video

80th Independence Day|ಯುವಜನತೆ ಸಾಮರ್ಥ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು: ಪ್ರಧಾನಿ ಮೋದಿ-Video

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ