ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ 
ದೇಶ

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ದೇವಸ್ಥಾನದ ಪ್ರವೇಶದ್ವಾರದ ಬಳಿ ಸುಮಾರು 100 ಮಂದಿ ಬ್ಯಾರಿಕೇಡ್‌ಗಳನ್ನು ದಾಟಲು ಮುಂದಾದಾಗ ನೂಕುನುಗ್ಗಲು ಉಂಟಾಗಿದೆ. ಇಳಿಜಾರಿನಂತಿದ್ದ ಕಿರಿದಾದ ಮಾರ್ಗದಲ್ಲಿ ಭಕ್ತರು ಒಬ್ಬರನ್ನೊಬ್ಬರು ತಳ್ಳಿಕೊಂಡ ಪರಿಣಾಮ ಬ್ಯಾರಿಕೇಡ್‌..

ಲಖಿಸರಾಯಿ: ಬಿಹಾರದ ಲಖಿಸರಾಯಿ ಜಿಲ್ಲೆಯ ಪ್ರಸಿದ್ಧ ಅಶೋಕ್‌ಧಾಮ್ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಶ್ರಾವಣ ಮಾಸದ ಮೂರನೇ ಸೋಮವಾರದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿದ್ದ ವೇಳೆ ಈ ದುರಂತ ಸಂಭವಿಸಿದೆ. ಸೋಮವಾರ ಬೆಳಗ್ಗೆ ಸುಮಾರು 6.45ರ ವೇಳೆಗೆ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.

ಈ ವೇಳೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿದ್ದರಿಂದ ಭಕ್ತರಲ್ಲಿ ಆತಂಕ ಉಂಟಾಗಿ, ಏಕಾಏಕಿ ಜನರು ಓಡಲು ಆರಂಭಿಸಿದ ಪರಿಣಾಮ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಯಿತು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಲಖಿಸರಾಯಿ ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ಅವರ ಪ್ರಕಾರ, ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಲ್ಲಿ ಆಡಳಿತವು ವ್ಯವಸ್ಥೆ ಮಾಡಿತ್ತು. ಆದರೆ ನಿರೀಕ್ಷೆಗೂ ಮೀರಿದ ಜನಸಂದಣಿ ಉಂಟಾಗಿದ್ದು, ಜನರ ಒತ್ತಡಕ್ಕೆ ಬ್ಯಾರಿಕೇಡ್‌ನ ಒಂದು ಭಾಗ ಕುಸಿದು ಜನರು ಒಬ್ಬರ ಮೇಲೊಬ್ಬರು ಬಿದ್ದಿದ್ದಾರೆ.

ಗಾಯಗೊಂಡವರನ್ನು ತಕ್ಷಣವೇ ಲಖಿಸರಾಯಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಳಿಕ ಆಡಳಿತ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿವೆ.

ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ, ದೇವಸ್ಥಾನದ ಪ್ರವೇಶದ್ವಾರದ ಬಳಿ ಸುಮಾರು 100 ಮಂದಿ ಬ್ಯಾರಿಕೇಡ್‌ಗಳನ್ನು ದಾಟಲು ಮುಂದಾದಾಗ ನೂಕುನುಗ್ಗಲು ಉಂಟಾಗಿದೆ. ಇಳಿಜಾರಿನಂತಿದ್ದ ಕಿರಿದಾದ ಮಾರ್ಗದಲ್ಲಿ ಭಕ್ತರು ಒಬ್ಬರನ್ನೊಬ್ಬರು ತಳ್ಳಿಕೊಂಡ ಪರಿಣಾಮ ಬ್ಯಾರಿಕೇಡ್‌ ಕುಸಿದು ಹಲವರು ಕೆಳಗೆ ಬಿದ್ದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವಿದ್ಯುತ್ ತಂತಿ ಬಿದ್ದಿದ್ದರಿಂದ ಉಂಟಾದ ಭೀತಿ ಹಾಗೂ ಭಾರೀ ಜನಸಂದಣಿ ಎರಡೂ ಘಟನೆಗೆ ಕಾರಣವಾಗಿರಬಹುದೆಂದು ಪ್ರಾಥಮಿಕ ಮಾಹಿತಿ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ