ಮೆಟ್ರೋ ರೈಲಿನಲ್ಲಿ ಸಿಐಎಸ್ಎಫ್ ಅಧಿಕಾರಿ ರಂಪಾಟ 
ದೇಶ

Video: ಮೆಟ್ರೋ ರೈಲಿನಲ್ಲಿ ಮಹಿಳೆಯ ಫೋಟೋ ತೆಗೆದ ಆರೋಪ: CISF ಅಧಿಕಾರಿಗೆ ಪ್ರಯಾಣಿಕರ ತರಾಟೆ, ರಂಪಾಟ

ದೆಹಲಿಯಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ನಡೆದ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನವದೆಹಲಿ: ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಖಾಸಗಿ ಅಂಗಗಳ ಫೋಟೋ ತೆಗೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ CISFನ ASI ಶ್ರೇಣಿಯ ಅಧಿಕಾರಿಯೊಬ್ಬರನ್ನು ಸಹ ಪ್ರಯಾಣಿಕರು ತರಾಟೆಗೆ ತೆಗೆದುಕೊಂಡು ಧರ್ಮದೇಟು ನೀಡಿರುವ ಘಟನೆ ವರದಿಯಾಗಿದೆ.

ದೆಹಲಿಯಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ನಡೆದ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೆಟ್ರೋ ರೈಲಿನೊಳಗೆ ಪ್ರಯಾಣಿಕರೊಂದಿಗೆ ವಾಗ್ವಾದ ಹಾಗೂ ಘರ್ಷಣೆ ನಡೆದಿದೆ ಎನ್ನಲಾಗಿದೆ.

ಪ್ರಸ್ತುತ ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಮೆಟ್ರೋ ಬೋಗಿಯೊಳಗೆ ಅಧಿಕಾರಿಯನ್ನು ಪ್ರಶ್ನಿಸುತ್ತಿರುವುದು ಕಾಣಿಸುತ್ತದೆ. ಅಧಿಕಾರಿಯ ಮೊಬೈಲ್ ನಲ್ಲಿ ಆಕೆಯ ದೇಹದ ಅಂಗಗಳ ಫೋಟೋ ತೆಗೆದಿರುವುದು ಬಯಲಾಗಿದೆ. ಆದರೆ ಇದನ್ನು ಪ್ರಶ್ನಿಸಿದಾಗ ಅಧಿಕಾರಿ ಇದನ್ನು ನಿರಾಕರಿಸಿದ್ದು, ಸಹ ಪ್ರಯಾಣಿಕರು ಬಲವಂತವಾಗಿ ಫೋನ್ ಗ್ಯಾಲರಿ ತೆಗೆಯಲು ಯತ್ನಿಸಿದ್ದಾರೆ. ಈ ವೇಳೆ ಸಂಘರ್ಷ ಸಂಭವಿಸಿದೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹಿರಿಯ CISF ಅಧಿಕಾರಿಯೊಬ್ಬರು, ವಿಚಾರಣೆ ಪೂರ್ಣಗೊಳ್ಳುವವರೆಗೆ ಆರೋಪಿತ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಫೋನ್‌ನಲ್ಲಿದ್ದ ಫೋಟೋಗಳನ್ನು ಅಳಿಸುವಂತೆ ಪ್ರಯಾಣಿಕರು ಅಧಿಕಾರಿಗೆ ಒತ್ತಾಯಿಸಿದ್ದಾರೆ. ಬಳಿಕ ಅಧಿಕಾರಿ ಮೆಟ್ರೋ ಬೋಗಿಯಿಂದ ಹೊರಹೋಗಲು ಮುಂದಾದಾಗ ಕೆಲ ಪ್ರಯಾಣಿಕರು ಅವರನ್ನು ತಡೆದಿದ್ದಾರೆ. ಇದರಿಂದ ವಾಗ್ವಾದ ತೀವ್ರಗೊಂಡು ನೂಕಾಟ-ತಳ್ಳಾಟ ಹಾಗೂ ಸಣ್ಣ ಮಟ್ಟಿನ ಘರ್ಷಣೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಇದೀಗ ಘರ್ಷಣೆಗೆ ಕಾರಣವಾದ ಸಂಪೂರ್ಣ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಇದುವರೆಗೆ ಯಾರೂ ಅಧಿಕೃತ ದೂರು ದಾಖಲಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ