ಹಿಮಂತ ಬಿಸ್ವಾಸ್ ಶರ್ಮಾ 
ದೇಶ

'ದಿಮಾಗಿ ನಕ್ಸಲ್ ಅಲ್ಲ; ಅವರು 'ಅಪ್ಪಟ ನಕ್ಸಲೀಯ': ಪಿ. ಚಿದಂಬರಂ ವಿರುದ್ಧ ಹಿಮಂತ ಬಿಸ್ವಾ ಶರ್ಮಾ ವಾಗ್ದಾಳಿ

ದೇಶದ ಗೃಹ ಸಚಿವರಾಗಿದ್ದ ಪಿ ಚಿದಂಬರಂ ಅವರು ತಮ್ಮನ್ನು 'ದಿಮಾಗಿ ನಕ್ಸಲ್' ಎಂದು ಕರೆದುಕೊಂಡಿದ್ದಾರೆ, ಅವರು ದೇಶದ ಗೃಹ ಸಚಿವರಾಗಿದ್ದ ಅವಧಿಯಲ್ಲಿ ನಕ್ಸಲಿಸಂ ಕೊನೆಗೊಳಿಸಲು ಯಾವುದೇ ಕ್ರಮ ಕೈಗೊಳ್ಳಲಿಲ್ಲವೇ ಎಂಬುದರ ಕುರಿತು ತನಿಖೆ ನಡೆಸಬೇಕು ಆಗ್ರಹಿಸಿದ್ದಾರೆ.

ಗುವಾಹಟಿ: ಪಿ.ಚಿದಂಬರಂ ಗೃಹ ಸಚಿವರಾಗಿದ್ದ ಅವಧಿಯಲ್ಲಿ ನಕ್ಸಲಿಸಂ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳಲು ಉದ್ದೇಶಪೂರ್ವಕವಾಗಿ ವಿಫಲರಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ನಡೆಸಬೇಕೆಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ಲಾ ಶರ್ಮಾ ಒತ್ತಾಯಿಸಿದ್ದಾರೆ.

ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶರ್ಮಾ, "ಪಿ ಚಿದಂಬರಂ ಅವರು 'ದಿಮಾಗಿ ನಕ್ಸಲ್' ಅಲ್ಲ, ಅಪ್ಪಟ ನಕ್ಸಲೀಯ. ದೇಶದ ಗೃಹ ಸಚಿವರಾಗಿದ್ದ ಪಿ ಚಿದಂಬರಂ ಅವರು ತಮ್ಮನ್ನು 'ದಿಮಾಗಿ ನಕ್ಸಲ್' ಎಂದು ಕರೆದುಕೊಂಡಿದ್ದಾರೆ, ಅವರು ದೇಶದ ಗೃಹ ಸಚಿವರಾಗಿದ್ದ ಅವಧಿಯಲ್ಲಿ ನಕ್ಸಲಿಸಂ ಕೊನೆಗೊಳಿಸಲು ಯಾವುದೇ ಕ್ರಮ ಕೈಗೊಳ್ಳಲಿಲ್ಲವೇ ಎಂಬುದರ ಕುರಿತು ತನಿಖೆ ನಡೆಸಬೇಕು ಆಗ್ರಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಭಾಷಣ ಮಾಡಿದ ನಂತರ ಈ ವಿವಾದ ಹುಟ್ಟಿಕೊಂಡಿತು. ಗ್ರಾಮೀಣ ಕಾಡುಗಳಲ್ಲಿ ಸಶಸ್ತ್ರ ನಕ್ಸಲಿಸಂ ಅನ್ನು ಹೆಚ್ಚಾಗಿ ನಾಶಪಡಿಸಲಾಗಿದೆ,

ಆದರೆ "ಡಿಮಾಗಿ ನಕ್ಸಲರು" ಎಂದು ಕರೆಯಲ್ಪಡುವ ಸೈದ್ಧಾಂತಿಕ ನಕ್ಸಲಿಸಂ ಸಂಸ್ಥೆಗಳು, ನೀತಿ ನಿರೂಪಣಾ ಸಂಸ್ಥೆಗಳು ಮತ್ತು ಸಾರ್ವಜನಿಕ ಪರಿಸರ ವ್ಯವಸ್ಥೆಗಳನ್ನು ಭೇದಿಸಿ ರಾಷ್ಟ್ರೀಯ ಪ್ರಗತಿಗೆ ಅಡ್ಡಿಯಾಗಿದೆ ಎಂದು ಅವರು ಹೇಳಿದರು. ಇಂತಹ ವ್ಯವಸ್ಥೆ ವಿರೋಧಿ ಮನಸ್ಥಿತಿ ಹೊಂದಿರುವ ವ್ಯಕ್ತಿಗಳನ್ನು ಗುರುತಿಸಿ ಪ್ರತ್ಯೇಕಿಸುವಂತೆ ಪ್ರಧಾನಿ ಮೋದಿ ನಾಗರಿಕರನ್ನು ಒತ್ತಾಯಿಸಿದರು.

ಹಲವು ವರ್ಷಗಳಿಂದ, ಮಾವೋವಾದಿ ಚಿಂತನೆ ಹೊಂದಿರುವ ಜನರು ಸಾರ್ವಜನಿಕ ಜೀವನದಲ್ಲಿ ಇದ್ದರು. ಸರ್ಕಾರಿ ಸಮಿತಿಗಳಲ್ಲಿಯೂ ಸಹ, ಈ ಚಿಂತನೆಯು ವಿವಿಧ ಸಂಸ್ಥೆಗಳು ಮತ್ತು ಉಪಕ್ರಮಗಳ ಮೇಲೆ ಪರಿಣಾಮ ಬೀರಿದೆ. ನಾವು ದೇಶವನ್ನು 'ಹಠಾರಿಯಾ ನಕ್ಸಲ್' (ಸಶಸ್ತ್ರ ನಕ್ಸಲ್) ನಿಂದ ಮುಕ್ತಗೊಳಿಸಲು ಸಾಧ್ಯವಾಗಿದೆ.

ಈ ನಕ್ಸಲರು ಹೋದರೂ ಸಹ, 'ದಿಮಾಗಿ ನಕ್ಸಲ್' (ನಕ್ಸಲ್ ಚಿಂತನೆ ಹೊಂದಿರುವ ಜನರು) ಅವಕಾಶವನ್ನು ಹುಡುಕುತ್ತಿದ್ದಾರೆ, ಹಿಂಸಾಚಾರದ ಮಾರ್ಗಗಳನ್ನು ಹುಡುಕುತ್ತಿದ್ದಾರೆ ಮತ್ತು ದೇಶವನ್ನು ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ. ನಾವು ಈ ದಿಮಾಗಿ ನಕ್ಸಲ್‌ಗಳನ್ನು ಗುರುತಿಸಬೇಕು, ಅವರನ್ನು ಪ್ರತ್ಯೇಕಿಸಬೇಕು ಮತ್ತು ಅಭಿವೃದ್ಧಿ ಹೊಂದಿದ ದೇಶಕ್ಕಾಗಿ ಯುವಕರನ್ನು ಒಟ್ಟುಗೂಡಿಸಬೇಕು ಎಂದು ಕರೆ ನೀಡಿದ್ದರು. ಇದಕ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದ ಪಿ ಚಿದಂಬರಂ ನಾನು ದಿಮಾಗಿ ನಕ್ಸಲ್ ಎಂದು ಹೇಳಿಕೊಳ್ಳಲು ಹೆಮ್ಮೆಪಡುತ್ತೇನೆ ಎಂದು ಹೇಳಿದ್ದರು.

ಶರ್ಮಾ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಟೀಕಿಸಿದರು, ಅವರು ದೇಶವನ್ನು ವಿರೋಧಿಸುತ್ತಿದ್ದಾರೆ ಮತ್ತು ರಾಷ್ಟ್ರೀಯ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ವಂದೇ ಮಾತರಂ ಪಠಣದ ಸಮಯದಲ್ಲಿ ಸೋನಿಯಾ ಗಾಂಧಿಯವರ ವರ್ತನೆಯು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಕ್ಕೆ ಏನಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಈ ವ್ಯಕ್ತಿಗಳು ಜನರನ್ನು ಪ್ರತಿಭಟನೆಗೆ ಪ್ರಚೋದಿಸುವುದು ಮತ್ತು ದೇಶದಲ್ಲಿ ಅರಾಜಕತೆಯ ವಾತಾವರಣವನ್ನು ಸೃಷ್ಟಿಸುವಂತಹ ರಾಷ್ಟ್ರವಿರೋಧಿ ಚಟುವಟಿಕೆಗಳನ್ನು ಬಹಿರಂಗವಾಗಿ ಮಾಡುತ್ತಿದ್ದಾರೆ" ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

-

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್