ರಾಹುಲ್ ಗಾಂಧಿ ಮತ್ತು ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ 
ದೇಶ

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ಯುವಜನರೇ ದೇಶದ ಭವಿಷ್ಯ ಎಂದು ಒತ್ತಿಹೇಳಿದ ಗಾಂಧಿ, ವಿದ್ಯಾರ್ಥಿಗಳ ಮಾತುಗಳನ್ನು ಆಲಿಸಿ, ಬಿಕ್ಕಟ್ಟನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೊರೆನ್ ಅವರನ್ನು ಒತ್ತಾಯಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಪತ್ರ ಬರೆದು, ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಪ್ರತಿನಿಧಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ, ರಾಜ್ಯದ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಅವರ ಆತಂಕಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಆಗಸ್ಟ್ 14ರಂದು ಬರೆದ ಪತ್ರದಲ್ಲಿ ಗಾಂಧಿ, ವಿದ್ಯಾರ್ಥಿಗಳ ಪ್ರತಿಭಟನೆ ಶಾಂತಿಯುತವಾಗಿ ನಡೆದಿದ್ದು, ಅವರ ಬೇಡಿಕೆಗಳು ನ್ಯಾಯಸಮ್ಮತವಾಗಿವೆ ಎಂದು ಹೇಳಿದ್ದಾರೆ.

ಸೊರೆನ್ ರಚಿಸಿರುವ ಸಮಿತಿಯ ಮೂಲಕ ರಾಜ್ಯ ಸರ್ಕಾರ ಪ್ರತಿಭಟನಾಕಾರರೊಂದಿಗೆ ನಡೆಸುತ್ತಿರುವ ಮಾತುಕತೆಯನ್ನು ಅವರು ಸ್ವಾಗತಿಸಿದ್ದಾರೆ. ಆದರೆ ಪ್ರತಿಭಟನೆ ಮುಂದುವರಿದಿದ್ದು, ಕೆಲ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ ಎಂದು ಅವರು ಗಮನಸೆಳೆದಿದ್ದಾರೆ.

“ನೀವು ರಚಿಸಿರುವ ಸಮಿತಿಯ ಮೂಲಕ ಜಾರ್ಖಂಡ್ ಸರ್ಕಾರ ವಿದ್ಯಾರ್ಥಿಗಳೊಂದಿಗೆ ಮಾತುಕತೆ ಆರಂಭಿಸಿರುವುದನ್ನು ನಾನು ಪ್ರಶಂಸಿಸುತ್ತೇನೆ. ವಿದ್ಯಾರ್ಥಿಗಳು ಮುಂದಿಟ್ಟಿರುವ ಹಲವು ಬೇಡಿಕೆಗಳ ಕುರಿತು ಒಮ್ಮತವೂ ಮೂಡಿದೆ ಎಂದು ನಾನು ನಂಬುತ್ತೇನೆ. ಆದರೆ ಪ್ರತಿಭಟನೆಗಳು ಮುಂದುವರಿದಿವೆ ಮತ್ತು ಕೆಲವು ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿದ್ದಾರೆ,” ಎಂದು ಗಾಂಧಿ ಪತ್ರದಲ್ಲಿ ಹೇಳಿದ್ದಾರೆ.

ವಿದ್ಯಾರ್ಥಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡುವಂತೆ ಸೊರೆನ್ ಅವರನ್ನು ಲೋಕಸಭೆಯ ಪ್ರತಿಪಕ್ಷ ನಾಯಕ ಒತ್ತಾಯಿಸಿದ್ದಾರೆ. ಇಂತಹ ಭೇಟಿ, ವಿದ್ಯಾರ್ಥಿಗಳ ಉಳಿದ ಸಮಸ್ಯೆಗಳನ್ನು ಬಗೆಹರಿಸುವ ಸರ್ಕಾರದ ಬದ್ಧತೆಯನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಅವರು ಹೇಳಿದ್ದಾರೆ.

“ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಪ್ರತಿನಿಧಿಗಳನ್ನು ನೀವು ವೈಯಕ್ತಿಕವಾಗಿ ಭೇಟಿ ಮಾಡಬೇಕು ಎಂದು ಸಲಹೆ ನೀಡಲು ನಾನು ಈ ಪತ್ರ ಬರೆಯುತ್ತಿದ್ದೇನೆ. ಇದು ಅವರ ಉಳಿದ ಬೇಡಿಕೆಗಳನ್ನು ಬಗೆಹರಿಸುವ ಸರ್ಕಾರದ ಬದ್ಧತೆಯನ್ನು ಮತ್ತಷ್ಟು ಬಲಪಡಿಸುತ್ತದೆ,” ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

ಪ್ರತಿಭಟನೆ ಕುರಿತು ಮಹತ್ವದ ಚರ್ಚೆ

ಶಾಂತಿಯುತ ಪ್ರತಿಭಟನೆ ನಡೆಸುವ ಹಕ್ಕಿನ ಮಹತ್ವವನ್ನೂ ಗಾಂಧಿ ಒತ್ತಿ ಹೇಳಿದ್ದಾರೆ. “ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಶಾಂತಿಯುತ ಪ್ರತಿಭಟನೆಯ ಹಕ್ಕು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭಗಳಲ್ಲಿ ಒಂದಾಗಿದೆ ಎಂಬುದು ಕಾಂಗ್ರೆಸ್ ಪಕ್ಷದ ನಂಬಿಕೆ. ಆದ್ದರಿಂದ, ಕಳೆದ ಕೆಲವು ತಿಂಗಳುಗಳಿಂದ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನಾವು ಸಂಪೂರ್ಣ ಬೆಂಬಲ ನೀಡಿದ್ದೇವೆ” ಎಂದು ಅವರು ಹೇಳಿದ್ದಾರೆ.

ಭಾರತದ ಶಿಕ್ಷಣ ವ್ಯವಸ್ಥೆಯನ್ನು ಆರ್‌ಎಸ್‌ಎಸ್ ಮತ್ತು ಬಿಜೆಪಿ ತಮ್ಮ ಹಿಡಿತಕ್ಕೆ ತೆಗೆದುಕೊಂಡು, ಅದನ್ನು ವಿದ್ಯಾರ್ಥಿಗಳ ಶೋಷಣೆ ಮತ್ತು ದಮನದ ಸಾಧನವಾಗಿ ಪರಿವರ್ತಿಸಿವೆ ಎಂದು ಗಾಂಧಿ ಮತ್ತಷ್ಟು ಆರೋಪಿಸಿದ್ದಾರೆ. ಒಂದು ದಶಕದ ಹಿಂದೆ ಇದ್ದಂತಹ ಬಲಿಷ್ಠ ಜ್ಞಾನ ವ್ಯವಸ್ಥೆಯಾಗಿ ಶಿಕ್ಷಣ ವ್ಯವಸ್ಥೆ ಈಗ ಉಳಿದಿಲ್ಲ ಎಂದೂ ಅವರು ಹೇಳಿದ್ದಾರೆ.

ಯುವಜನರೇ ದೇಶದ ಭವಿಷ್ಯ ಎಂದು ಒತ್ತಿಹೇಳಿದ ಗಾಂಧಿ, ವಿದ್ಯಾರ್ಥಿಗಳ ಮಾತುಗಳನ್ನು ಆಲಿಸಿ, ಬಿಕ್ಕಟ್ಟನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೊರೆನ್ ಅವರನ್ನು ಒತ್ತಾಯಿಸಿದ್ದಾರೆ. “ದಯವಿಟ್ಟು ವಿದ್ಯಾರ್ಥಿಗಳ ಮಾತುಗಳನ್ನು ಆಲಿಸಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ ಮತ್ತು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳಿ,” ಎಂದು ಗಾಂಧಿ ಹೇಳಿದ್ದಾರೆ. ಜಾರ್ಖಂಡ್‌ನಲ್ಲಿ ಆಡಳಿತ ನಡೆಸುತ್ತಿರುವ ಜೆಎಂಎಂ ನೇತೃತ್ವದ ಮೈತ್ರಿಕೂಟ ಸರ್ಕಾರದ ಪ್ರಮುಖ ಅಂಗಪಕ್ಷಗಳಲ್ಲಿ ಕಾಂಗ್ರೆಸ್ ಕೂಡ ಒಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್