ಅಭಿಜೀತ್ ದೀಪ್ಕೆ - ರಾಮದಾಸ್ ಅಠಾವಳೆ 
ದೇಶ

'ಸರ್ಕಾರ ನಮ್ಮದು…': BJP ನೇತೃತ್ವದ NDA ಸೇರುವಂತೆ ಅಭಿಜೀತ್ ದೀಪ್ಕೆಗೆ ಕೇಂದ್ರ ಸಚಿವರಿಂದ ಬಿಗ್ ಆಫರ್!

ಕೇಂದ್ರ ಸಚಿವರ ಈ ಪ್ರಸ್ತಾಪಕ್ಕೆ ಅಭಿಜೀತ್ ದೀಪ್ಕೆ ಅವರು ಇನ್ನೂ ಪ್ರತಿಕ್ರಿಯಿಸಿಲ್ಲ. ಆದರೆ ಸಿಜೆಪಿ ನಾಯಕ ಈ ಹಿಂದೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದನ್ನು ತಳ್ಳಿಹಾಕಿದ್ದರು.

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಸೇರುವಂತೆ ಕೇಂದ್ರ ಸಚಿವರೊಬ್ಬರು ಆಹ್ವಾನ ನೀಡಿದ್ದಾರೆ.

"ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕನಸನ್ನು ನನಸಾಗಿಸಲು" ಸಿಜೆಪಿ ಸಂಚಾಲಕ ತಮ್ಮ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ) ಗೆ ಸೇರುವುದನ್ನು ಪರಿಗಣಿಸಬೇಕು ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಸೋಮವಾರ ಹೇಳಿದ್ದಾರೆ.

ಕೇಂದ್ರ ಸಚಿವರ ಈ ಪ್ರಸ್ತಾಪಕ್ಕೆ ಅಭಿಜೀತ್ ದೀಪ್ಕೆ ಅವರು ಇನ್ನೂ ಪ್ರತಿಕ್ರಿಯಿಸಿಲ್ಲ. ಆದರೆ ಸಿಜೆಪಿ ನಾಯಕ ಈ ಹಿಂದೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದನ್ನು ತಳ್ಳಿಹಾಕಿದ್ದರು ಮತ್ತು ರಾಜಕೀಯ ಹಾಗೂ ಚುನಾವಣಾ ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಂಡಿರುವುದಾಗಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಠಾವಳೆ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕನಸನ್ನು ನನಸಾಗಿಸಲು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಮ್ಮ ಆರ್‌ಪಿಐ(ಎ) ಪಕ್ಷಕ್ಕೆ ಸೇರುವುದನ್ನು ಪರಿಗಣಿಸಬೇಕು ಮತ್ತು ಸಮಾಜ ಹಾಗೂ ಪಕ್ಷವನ್ನು ಬಲಪಡಿಸಲು ಸಹಾಯ ಮಾಡಬೇಕು ಎಂದು ಬಹಿರಂಗವಾಗಿಯೇ ಆಹ್ವಾನ ನೀಡಿದ್ದಾರೆ.

"ತಪ್ಪು ಮಾಡುವ ಜನ ಶಿಕ್ಷೆಗೆ ಗುರಿಯಾಗಬೇಕು ಎಂದು ನಂಬುವ ಸರ್ಕಾರ ನಮ್ಮದು. ಆದ್ದರಿಂದ ಅವರು ಆಡಳಿತದ ಬಣಕ್ಕೆ ಸೇರಬೇಕು" ಎಂದು ಅಠವಳೆ ಹೇಳಿದರು.

ಗಮನಾರ್ಹ ವಿಚಾರವೆಂದರೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ) ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಭಾಗವಾಗಿದೆ.

“ಅಭಿಜೀತ್ ದೀಪ್ಕೆ ಅಂಬೇಡ್ಕರ್ ವಾದಿ ಎಂದು ನಾನು ಭಾವಿಸುತ್ತೇನೆ. ಅವರು ಸಕ್ರಿಯವಾಗಿದ್ದಾರೆ ಮತ್ತು ಯುವಕ. ಅವರು ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ(ಎ) ಗೆ ಸೇರುವುದನ್ನು ಪರಿಗಣಿಸಬೇಕು” ಎಂದು ಕೇಂದ್ರ ಸಚಿವ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!