ಸಿಮ್ ಕಾರ್ಡ್ Online Desk
ದೇಶ

Digital arrest ವಂಚನೆ ತಡೆಗೆ ಸಿಮ್ ಕಾರ್ಡ್ ವಿತರಣೆ ಬಿಗಿಗೊಳಿಸಲಿದೆ ಸರ್ಕಾರ; ಇನ್ಮುಂದೆ ಖರೀದಿಗೆ ನಿರ್ಬಂಧ, ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ!

ಪ್ರಸ್ತಾವಿತ ಕ್ರಮಗಳ ಅಡಿಯಲ್ಲಿ, ಟೆಲಿಕಾಂ ಕಂಪನಿಗಳು ಹೊಸ ಸಿಮ್ ಅನ್ನು ಸಕ್ರಿಯಗೊಳಿಸುವ ಮೊದಲು, ಗ್ರಾಹಕರ ಮಾಹಿತಿಯನ್ನು ರಿಯಲ್‌ಟೈಮ್‌ನಲ್ಲಿ ಪರಿಶೀಲಿಸುವುದು ಕಡ್ಡಾಯವಾಗಲಿದೆ.

ನವದೆಹಲಿ: 'ಡಿಜಿಟಲ್ ಅರೆಸ್ಟ್' ಪ್ರಕರಣಗಳು ಸೇರಿದಂತೆ ಹಲವು ಸೈಬರ್ ವಂಚನೆಗಳನ್ನು ತಡೆಯುವ ಪ್ರಯತ್ನದ ಭಾಗವಾಗಿ, ಕೇಂದ್ರ ಸರ್ಕಾರ ಹೊಸ ಸಿಮ್ ಕಾರ್ಡ್‌ ವಿತರಿಸುವ ಪರಿಶೀಲನಾ ಪ್ರಕ್ರಿಯೆಯನ್ನು ಮತ್ತಷ್ಟು ಬಿಗಿಗೊಳಿಸಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತಾವಿತ ಕ್ರಮಗಳ ಅಡಿಯಲ್ಲಿ, ಟೆಲಿಕಾಂ ಕಂಪನಿಗಳು ಹೊಸ ಸಿಮ್ ಅನ್ನು ಸಕ್ರಿಯಗೊಳಿಸುವ ಮೊದಲು, ಗ್ರಾಹಕರ ಮಾಹಿತಿಯನ್ನು ರಿಯಲ್‌ಟೈಮ್‌ನಲ್ಲಿ ಪರಿಶೀಲಿಸುವುದು ಕಡ್ಡಾಯವಾಗಲಿದೆ.

ಟೆಲಿಕಾಂ ಕಂಪನಿಗಳು ಗ್ರಾಹಕರ ವಿವರಗಳನ್ನು ಡಿಜಿಟಲ್ ಇಂಟೆಲಿಜೆನ್ಸ್ ಪ್ಲಾಟ್‌ಫಾರ್ಮ್ ಮೂಲಕ ಪರಿಶೀಲಿಸಬೇಕು. ಅನುಮಾನಾಸ್ಪದ ಅಥವಾ ನಕಲಿ ಗುರುತಿನ ದಾಖಲೆಗಳನ್ನ ಹೊಂದಿರುವ ವ್ಯಕ್ತಿಗಳಿಗೆ ಹೊಸ ಸಿಮ್ ಸಂಪರ್ಕ ನೀಡುವುದನ್ನು ತಡೆಯಬೇಕು. ಇದಲ್ಲದೆ, ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್‌ಗಳು ನೋಂದಣಿಯಾಗಿವೆ? ಎಂಬುದನ್ನ ಸರ್ಕಾರದ ಮಟ್ಟದಲ್ಲಿ ಟ್ರ್ಯಾಕ್ ಮಾಡಲಾಗುತ್ತದೆ. ಸಾಮಾನ್ಯವಾಗಿ ಒಬ್ಬ ವ್ಯಕ್ತಿಗೆ ಗರಿಷ್ಠ 9 ಸಿಮ್ ಕಾರ್ಡ್‌ಗಳನ್ನು ಹೊಂದಲು ಅವಕಾಶವಿರಲಿದೆ. ಆದರೆ ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಗರಿಷ್ಠ 6 ಸಿಮ್ ಕಾರ್ಡ್‌ಗಳ ಮಿತಿ ಇರಲಿದೆ.

ನಕಲಿ ಗುರುತಿನ ಆಧಾರದ ಮೇಲೆ ಸಿಮ್ ಕಾರ್ಡ್‌ ಪಡೆಯುವುದು, ಸೈಬರ್ ವಂಚನೆ ನಡೆಸುವುದು ಹಾಗೂ ಡಿಜಿಟಲ್ ಅರೆಸ್ಟ್‌ನಂತಹ ವಂಚನೆಗಳಿಗೆ ಬಳಸಲಾಗುವ ನಕಲಿ ಸಂಪರ್ಕಗಳನ್ನ ನಿಯಂತ್ರಿಸುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ ಡಿಟಿವಿ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

ದ್ವೇಷ ಭಾಷಣ ಪ್ರಕರಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಬಂಧನ ವಾರಂಟ್ ಜಾರಿ